logo
ಕನ್ನಡ ಸುದ್ದಿ  /  ಕ್ರಿಕೆಟ್  /  Wpl 2024: ಆರ್‌ಸಿಬಿ Vs ಗುಜರಾತ್‌ ಜೈಂಟ್ಸ್‌ ಎರಡನೇ ಹಣಾಹಣಿ; ಮುಖಾಮುಖಿ ದಾಖಲೆ, ಆಡುವ ಬಳಗ ಹೀಗಿದೆ

WPL 2024: ಆರ್‌ಸಿಬಿ vs ಗುಜರಾತ್‌ ಜೈಂಟ್ಸ್‌ ಎರಡನೇ ಹಣಾಹಣಿ; ಮುಖಾಮುಖಿ ದಾಖಲೆ, ಆಡುವ ಬಳಗ ಹೀಗಿದೆ

Jayaraj HT Kannada

Mar 06, 2024 11:33 AM IST

google News

ಆರ್‌ಸಿಬಿ vs ಗುಜರಾತ್‌ ಜೈಂಟ್ಸ್‌ ಮುಖಾಮುಖಿ ದಾಖಲೆ, ಆಡುವ ಬಳಗ ಹೀಗಿದೆ

    • ಡಬ್ಲ್ಯೂಪಿಎಲ್‌ ಎರಡನೇ ಆವೃತ್ತಿಯಲ್ಲಿ ಗುಜರಾತ್‌ ಜೈಂಟ್ಸ್‌ ಇನ್ನೂ ಗೆಲುವಿನ ಖಾತೆಯನ್ನೇ ತೆರೆದಿಲ್ಲ. ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿಯೂ ಸೋತಿರುವ ತಂಡವು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ತಂಡವು ಆಡಿದ ಐದು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದದು, ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಆರ್‌ಸಿಬಿ vs ಗುಜರಾತ್‌ ಜೈಂಟ್ಸ್‌ ಮುಖಾಮುಖಿ ದಾಖಲೆ, ಆಡುವ ಬಳಗ ಹೀಗಿದೆ
ಆರ್‌ಸಿಬಿ vs ಗುಜರಾತ್‌ ಜೈಂಟ್ಸ್‌ ಮುಖಾಮುಖಿ ದಾಖಲೆ, ಆಡುವ ಬಳಗ ಹೀಗಿದೆ (WPL twitter)

ವಿಮೆನ್ಸ್ ಪ್ರೀಮಿಯರ್ ಲೀಗ್ (WPL) 2024ರ 13ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು (Gujarat Giants vs Royal Challengers Bangalore Women) ಮುಖಾಮುಖಿಯಾಗತ್ತಿವೆ. ಪ್ರಸಕ್ತ ಟೂರ್ನಿಯಲ್ಲಿ ಇದು ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿಯಾಗಿದ್ದು, ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ತಂಡಗಳು ಅದೃಷ್ಟ ಪರೀಕ್ಷೆಗೆ ಇಳಿದಿವೆ. ಮಾರ್ಚ್ 6ರ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ, ಗೆದ್ದು ಟೂರ್ನಿಯಲ್ಲಿ ಜೀವಂತವಾಗಿ ಉಳಿಯಲು ಸ್ಮೃತಿ ಮಂಧಾನ ಹಾಗೂ ಬೆತ್‌ ಮೂಡನಿ ಪಡೆಗಳು ಎದುರು ನೋಡುತ್ತಿವೆ.

ಮಂಧಾನ ನೇತೃತ್ವದ ಆರ್‌ಸಿಬಿ ವನಿತೆಯರ ತಂಡವು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಸತತ ಎರಡು ಪಂದ್ಯಗಳಲ್ಲಿ ಗೆಲುವಿನೊಂದಿಗೆ ಟೂರ್ನಿ ಶುಭಾರಂಭ ಮಾಡಿದ ತಂಡವು, ಆ ಬಳಿಕ ಮತ್ತೆ ಎರಡು ಸೋಲು ಕಂಡಿತ್ತು. ಬಳಿಕ ಜಯದ ಲಯಕ್ಕೆ ಮರಳಿದ ತಂಡವು, ತವರಿನ ಅಭಿಮಾನಿಗಳಿಗೆ ಗೆಲುವಿನೊಂದಿಗೆ ವಿದಾಯ ಹೇಳಿತು. ಆಡಿದ ಐದು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿರುವ ತಂಡವು, ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ತಂಡವು ಕೊನೆಯ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 23 ರನ್‌ಗಳ ಜಯ ಸಾಧಿಸಿತ್ತು.

ಪ್ರಸಕ್ತ ಆವೃತ್ತಿಯಲ್ಲಿ ಗುಜರಾತ್‌ ಜೈಂಟ್ಸ್‌ ಇನ್ನೂ ಗೆಲುವಿನ ಖಾತೆಯನ್ನೇ ತೆರೆದಿಲ್ಲ. ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿಯೂ ಸೋತಿರುವ ತಂಡವು, ಅಂಕಪಟ್ಟಿಯಲ್ಲಿ ಸಹಜವಾಗಿಯೇ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಟೂರ್ನಿಯ ನಾಕೌಟ್‌ ಹಂತಕ್ಕೇರಲು ಮುಂದಿನ ಎಲ್ಲಾ ಪಂದ್ಯಗಳನ್ನು ತಂಡ ಗೆಲ್ಲಲೇಬೇಕಾದ ಅನಿವಾರ್ಯವಿದೆ. ಪ್ರತಿ ಪಂದ್ಯವೂ ಬೆತ್ ಮೂನಿ ಪಡೆಗೆ ನಿರ್ಣಾಯಕವಾಗಿದ್ದು, ಇಂದು ಸೋತರೆ ಟೂರ್ನಿಯಿಂದ ಬಹುತೇಕ ಹೊರಬಿದ್ದಂತಾಗುತ್ತದೆ.

ಮುಖಾಮುಖಿ ದಾಖಲೆ

ಗುಜರಾತ್‌ ವಿರುದ್ಧ ಈ ಸೀಸನ್‌ನ ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಸೀಸನ್ 1ರ ಮೊದಲ ಮುಖಾಮುಖಿಯನ್ನು ಗುಜರಾತ್‌ ತಂಡ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಸೇಡಿನ ಎರಡನೇ ಸಮರದಲ್ಲಿ ಬೆಂಗಳೂರು ಜಯಭೇರಿ ಬಾರಿಸಿತ್ತು. ಆ ಪಂದ್ಯದಲ್ಲಿ ಸೋಫಿ ಡಿವೈನ್‌ ದಾಖಲೆಯ 99 ರನ್‌ ಗಳಿಸಿದ್ದರು. ಉಭಯ ತಂಡಗಳ ನಡುವಿನ ಎರಡೂ ಪಂದ್ಯಗಳಲ್ಲಿ ರನ್‌ ಮಳೆ ಹರಿದಿತ್ತು. ಹೀಗಾಗಿ ಜಿಜಿ ವಿರುದ್ಧ ಆರ್‌ಸಿಬಿಯು 2-1 ಅಂತರದ ಗೆಲುವಿನ ದಾಖಲೆ ಹೊಂದಿದೆ.

ಪಿಚ್‌ ವರದಿ

ದೆಹಲಿಯ ಅರುಣ್‌ ಜೇಟ್ಲಿ ಮೈದಾನದ ಪಿಚ್‌ ಬ್ಯಾಟರ್‌ಗಳಿಗೆ ಹೆಚ್ಚು ನೆರವಾಗಲಿದೆ. ಡೆಲ್ಲಿ ಮತ್ತು ಮುಂಬೈ ನಡುವಿನ ಮೊದಲ ಪಂದ್ಯದಲ್ಲೂ ಕ್ಯಾಪಿಟಲ್ಸ್‌ ತಂಡ ಸ್ಫೋಟಕ ಬ್ಯಾಟಿಂಗ್‌ ನಡೆಸಿತು. ಟಾಸ್‌ ಗೆದ್ದ ಮುಂಬೈ ತಂಡ ಚೇಸಿಂಗ್‌ ಆಯ್ಕೆ ಮಾಡಿಕೊಂಡರೂ, ಚೇಸಿಂಗ್‌ಗೆ ಪಿಚ್‌ ನೆರವಾಗಲಿಲ್ಲ. ಪಿಚ್‌ನಲ್ಲಿ ಮಂಜಿನ ಪಾತ್ರ ಪ್ರಮುಖವಾಗಲಿಲ್ಲ. ಈ ಕುರಿತು ಪಂದ್ಯದ ಬಳಿಕ ಮುಂಬೈ ನಾಯಕಿ ಕೌರ್‌ ಕೂಡಾ ಹೇಳಿಕೊಂಡಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸುವ ತಂಡಗಳಿಗೆ ಜಾಸ್ತಿ ಅನುಕೂಲವಾಗುವ ಸಾಧ್ಯತೆ ಇದೆ. ಮೈದಾನದಲ್ಲಿ ವೇಗಿಗಳಿಗಿಂತ ಸ್ಪಿನ್ನರ್‌ಗಳು ಮೇಲುಗೈ ಸಾಧಿಸುವ ಸಾಧ್ಯತೆ ಹೆಚ್ಚು.

ಲೈವ್‌ ಸ್ಟ್ರೀಮಿಂಗ್‌ ವಿವರ

ಗುಜರಾತ್‌ ಜೈಂಟ್ಸ್‌ ಮತ್ತು ಆರ್‌ಸಿಬಿ ತಂಡಗಳ ನಡುವಿನ ಡಬ್ಲ್ಯೂಪಿಎಲ್‌ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಇಲ್ಲಿ ಪಂದ್ಯವನ್ನು ಸಂಪೂರ್ಣ ಉಚಿತವಾಗಿ ವೀಕ್ಷಿಸಬಹುದು. ಟಿವಿ ಮೂಲಕ ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಕ್ರಿಕೆಟ್‌ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ

ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್‌ ಕೀಪರ್), ಸೋಫಿ ಮೊಲಿನ್, ಜಾರ್ಜಿಯಾ ವೇರ್‌ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಸೋಭಾನಾ, ರೇಣುಕಾ ಥಾಕ್ನಾ, ರೇಣುಕಾ ಥಾಕ್ನಾ.

ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ

ಲಾರಾ ವೊಲ್ವಾರ್ಡ್, ಬೆತ್ ಮೂನಿ (ನಾಯಕಿ ಮತ್ತು ವಿಕೆಟ್‌ ಕೀಪರ್), ಫೋಬ್ ಲಿಚ್‌ಫೀಲ್ಡ್, ಆಶ್ಲೀ ಗಾರ್ಡ್ನರ್, ವೇದಾ ಕೃಷ್ಣಮೂರ್ತಿ, ದಯಾಲನ್ ಹೇಮಲತಾ, ಕ್ಯಾಥರಿನ್ ಬ್ರೈಸ್, ತನುಜಾ ಕನ್ವರ್, ತರನ್ನುಮ್ ಪಠಾಣ್, ಮೇಘನಾ ಸಿಂಗ್, ಮನ್ನತ್ ಕಶ್ಯಪ್.

ಇದನ್ನೂ ಓದಿ | ಐಪಿಎಲ್ ತಂಡಗಳನ್ನು ಮುನ್ನಡೆಸಿದ ಏಕದಿನ ವಿಶ್ವಕಪ್ ಗೆದ್ದ ನಾಯಕರು ಯಾರು; ಆಸ್ಟ್ರೇಲಿಯಾದವರೇ ಇಬ್ಬರು

ಮಹಿಳಾ ಪ್ರೀಮಿಯರ್ ಲೀಗ್‌ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ