ಯುಪಿ ವಾರಿಯರ್ಸ್ ವಿರುದ್ಧ ಬ್ಯಾಟಿಂಗ್‌ಗಿಳಿದ ಮುಂಬೈ ಇಂಡಿಯನ್ಸ್; ಗೆಲುವಿನ ಲಯಕ್ಕೆ ಮರಳಲು ಉಭಯ ತಂಡಗಳು ಸಜ್ಜು
Mar 07, 2024 07:16 PM IST
ಯುಪಿ ವಾರಿಯರ್ಸ್ ವಿರುದ್ಧ ಬ್ಯಾಟಿಂಗ್‌ಗಿಳಿದ ಮುಂಬೈ ಇಂಡಿಯನ್ಸ್
- Womens Premier League 2024: ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕೊನೆಯ ಪಂದ್ಯದಲ್ಲಿ ಆಡಿದ ತಂಡವೇ ಕಣಕ್ಕಿಳಿಯುತ್ತಿದೆ. ಅತ್ತ ಅಲಿಸ್ಸಾ ಹೀಲಿ ಬಳಗವು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.
ವಿಮೆನ್ಸ್ ಪ್ರೀಮಿಯರ್ ಲೀಗ್ (Womens Premier League 2024) ಎರಡನೇ ಆವೃತ್ತಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವನಿತೆಯರ ತಂಡಕ್ಕೆ ಯುಪಿ ವಾರಿಯರ್ಸ್ (Up Warriorz vs Mumbai Indians Women) ಸವಾಲೊಡ್ಡುತ್ತಿದೆ. ಅಲಿಸ್ಸಾ ಹೀಲಿ ಬಳಗವು ಈವರೆಗೆ ಎರಡು ಪಂದ್ಯ ಮಾತ್ರ ಗೆದ್ದಿದ್ದು, ಇಂದಿನ ಪಂದ್ಯದಲ್ಲಿ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ. ಅತ್ತ ಎರಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿರುವ ಹರ್ಮನ್‌ಪ್ರೀತ್ ಕೌರ್ ಬಳಗವು, ಮತ್ತೆ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ. ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್ ಕೌಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡವು ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕೊನೆಯ ಪಂದ್ಯದಲ್ಲಿ ಆಡಿದ ತಂಡವೇ ಕಣಕ್ಕಿಳಿಯುತ್ತಿದೆ. ಅತ್ತ ಯುಪಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.
ಡಬ್ಲ್ಯೂಪಿಎಲ್‌ನಲ್ಲಿ ಪ್ರಸಕ್ತ ಆವೃತ್ತಿಯಲ್ಲಿ ಸತತ ಎರಡು ಗೆಲುವುಗಳ ಬಳಿಕ, ಆರ್‌ಸಿಬಿ ವಿರುದ್ಧದ ಕೊನೆಯ ಪಂದ್ಯದಲ್ಲಿ ಸೋತಿರುವ ಯುಪಿ ವಾರಿಯರ್ಸ್ ಮತ್ತೆ ಗೆಲುವಿನ ಲಯಕ್ಕೆ ಮರಳುವ ಗುರಿ ಹಾಕಿಕೊಂಡಿದೆ. ಉಭಯ ತಂಡಗಳು ಕೂಡಾ ಆಡಿದ ಕೊನೆಯ ಪಂದ್ಯಗಳಲ್ಲಿ ಸೋತಿವೆ. ಹೀಗಾಗಿ ಗೆಲುವು ಎರಡೂ ತಂಡಗಳಿಗೂ ಅನಿವಾರ್ಯವಾಗಿದೆ.
ಇದನ್ನೂ ಓದಿ | ಡಿಆರ್‌ಎಸ್ ತೆಗೆದುಕೊಳ್ಳುವಂತೆ ಸರ್ಫರಾಜ್ ಖಾನ್ ಮನವಿ ಆಲಿಸದ ರೋಹಿತ್; ನಂತ್ರ ಆಗಿದ್ದು ಪಶ್ಚಾತಾಪ, ವಿಡಿಯೊ ನೋಡಿ
ಮುಂಬೈ ಇಂಡಿಯನ್ಸ್ ಆಡುವ ಬಳಗ
ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರದದ), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಅಮಂಜೋತ್ ಕೌರ್, ಎಸ್ ಸಜನಾ, ಹುಮೈರಾ ಕಾಜಿ, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್.
ಯುಪಿ ವಾರಿಯರ್ಸ್ ಆಡುವ ಬಳಗ
ಅಲಿಸ್ಸಾ ಹೀಲಿ (ನಾಯಕಿ ಮತ್ತು ವಿಕೆಟ್ ಕೀಪರ್), ಕಿರಣ್ ನವಗಿರೆ, ಚಾಮರಿ ಅಥಾಪತ್ತು, ಗ್ರೇಸ್ ಹ್ಯಾರಿಸ್, ಶ್ವೇತಾ ಸೆಹ್ರಾವತ್, ದೀಪ್ತಿ ಶರ್ಮಾ, ಪೂನಂ ಖೇಮ್ನಾರ್, ಸೋಫಿ ಎಕ್ಲೆಸ್ಟನ್, ಉಮಾ ಚೆಟ್ರಿ, ರಾಜೇಶ್ವರಿ ಗಾಯಕ್ವಾಡ್, ಸೈಮಾ ಠಾಕೋರ್.
ಲೈವ್ ಸ್ಟ್ರೀಮಿಗ್ ವಿವರ
ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳ ನಡುವಿನ ಡಬ್ಲ್ಯೂಪಿಎಲ್ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಇಲ್ಲಿ ಪಂದ್ಯವನ್ನು ಸಂಪೂರ್ಣ ಉಚಿತವಾಗಿ ವೀಕ್ಷಿಸಬಹುದು. ಟಿವಿ ಮೂಲಕ ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.
ಕ್ರಿಕೆಟ್ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಮಹಿಳಾ ಪ್ರೀಮಿಯರ್ ಲೀಗ್ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
(This copy first appeared in Hindustan Times Kannada website. To read more like this please logon to kannada.hindustantimes.com)