logo
ಕನ್ನಡ ಸುದ್ದಿ  /  ಕ್ರಿಕೆಟ್  /  ಡಬ್ಲ್ಯುಪಿಎಲ್ 2ನೇ ಆವೃತ್ತಿಗೆ ದಿನಗಣನೆ; ಪಂದ್ಯ ನಡೆಯುವ ಸ್ಥಳ, ಯಾವಾಗ, ವೇಳಾಪಟ್ಟಿ ಬಗ್ಗೆ ಸಂಪೂರ್ಣ ವಿವರ ಹೀಗಿದೆ

ಡಬ್ಲ್ಯುಪಿಎಲ್ 2ನೇ ಆವೃತ್ತಿಗೆ ದಿನಗಣನೆ; ಪಂದ್ಯ ನಡೆಯುವ ಸ್ಥಳ, ಯಾವಾಗ, ವೇಳಾಪಟ್ಟಿ ಬಗ್ಗೆ ಸಂಪೂರ್ಣ ವಿವರ ಹೀಗಿದೆ

Prasanna Kumar P N HT Kannada

Feb 17, 2024 12:31 PM IST

google News

ಡಬ್ಲ್ಯುಪಿಎಲ್ 2ನೇ ಆವೃತ್ತಿಗೆ ದಿನಗಣನೆ

    • WPL 2024 Schedule : 2024ರ ಮಹಿಳಾ ಪ್ರೀಮಿಯರ್​ ಲೀಗ್​ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ. ಎರಡು ಹಂತಗಳಲ್ಲಿ ಬೆಂಗಳೂರು ಮತ್ತು ದೆಹಲಿಯಲ್ಲಿ ನಡೆಯುವ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ ನೋಡಿ.
ಡಬ್ಲ್ಯುಪಿಎಲ್ 2ನೇ ಆವೃತ್ತಿಗೆ ದಿನಗಣನೆ
ಡಬ್ಲ್ಯುಪಿಎಲ್ 2ನೇ ಆವೃತ್ತಿಗೆ ದಿನಗಣನೆ

ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್‌ ಲೀಗ್‌ (Womens Premier League 2024) ಟೂರ್ನಿ ಫೆಬ್ರವರಿ 23 ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್​ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಸಂಪೂರ್ಣ ಟೂರ್ನಿಯು ಬೆಂಗಳೂರು ಮತ್ತು ದೆಹಲಿಯಲ್ಲಿ ನಡೆಯಲಿದೆ. ಮೊದಲ ಹಂತದ ಪಂದ್ಯಗಳು ಬೆಂಗಳೂರಿನಲ್ಲಿ ಮತ್ತು ದ್ವಿತೀಯ ಹಂತ ಹಾಗೂ ಎಲಿಮಿನೇಟರ್, ಫೈನಲ್ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಒಟ್ಟು 22 ಪಂದ್ಯಗಳು ನಡೆಯಲಿದೆ. ಟೇಬಲ್ ಟಾಪರ್‌ ತಂಡ ನೇರವಾಗಿ ಫೈನಲ್‌ ಪ್ರವೇಶಿಸಿದರೆ, 2 ಮತ್ತು 3ನೇ ಸ್ಥಾನಿ ತಂಡಗಳು ಎಲಿಮಿನೇಟರ್‌ನಲ್ಲಿ ಆಡಲಿದೆ.

ಇದನ್ನೂ ಓದಿ | BCCI Awards: ಶುಭ್ಮನ್ ಗಿಲ್‌ಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ; ರವಿಶಾಸ್ತ್ರಿಗೆ ಬಿಸಿಸಿಐ ವಿಶೇಷ ಗೌರವ

ಚೊಚ್ಚಲ ಡಬ್ಲ್ಯುಪಿಎಲ್‌ ಆವೃತ್ತಿಯ ಫೈನಲಿಸ್ಟ್‌ ತಂಡಗಳು ಈ ಬಾರಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಕಳೆದ ಆವೃತ್ತಿಯಲ್ಲಿ ಮುಂಬೈ ತಂಡವು 7 ವಿಕೆಟ್‌ಗಳಿಂದ ಡೆಲ್ಲಿಯನ್ನು ಸೋಲಿಸಿ ಚೊಚ್ಚಲ ಟ್ರೋಫಿ ಗೆದ್ದುಕೊಂಡಿತ್ತು.

ವುಮೆನ್ಸ್ ಪ್ರೀಮಿಯರ್‌ ಲೀಗ್ 2024ರ ವೇಳಾಪಟ್ಟಿ

  • ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ -ಬೆಂಗಳೂರು
  • ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ -ಬೆಂಗಳೂರು
  • ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ -ಬೆಂಗಳೂರು
  • ಫೆಬ್ರವರಿ 26 - ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ -ಬೆಂಗಳೂರು
  • ಫೆಬ್ರವರಿ 27 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ -ಬೆಂಗಳೂರು
  • ಫೆಬ್ರವರಿ 28 - ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ -ಬೆಂಗಳೂರು
  • ಫೆಬ್ರವರಿ 29 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ -ಬೆಂಗಳೂರು
  • ಮಾರ್ಚ್ 1 - ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ -ಬೆಂಗಳೂರು
  • ಮಾರ್ಚ್ 2 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ -ಬೆಂಗಳೂರು
  • ಮಾರ್ಚ್ 3 - ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ -ಬೆಂಗಳೂರು
  • ಮಾರ್ಚ್ 4 - ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು -ಬೆಂಗಳೂರು
  • ಮಾರ್ಚ್ 5 - ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ -ದೆಹಲಿ
  • ಮಾರ್ಚ್ 6 - ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು -ದೆಹಲಿ
  • ಮಾರ್ಚ್ 7 - ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ -ದೆಹಲಿ
  • ಮಾರ್ಚ್ 8 - ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ -ದೆಹಲಿ
  • ಮಾರ್ಚ್ 9 - ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ -ದೆಹಲಿ
  • ಮಾರ್ಚ್ 10 - ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು -ದೆಹಲಿ
  • ಮಾರ್ಚ್ 11 - ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್‌ -ದೆಹಲಿ
  • ಮಾರ್ಚ್ 12 - ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು -ದೆಹಲಿ
  • ಮಾರ್ಚ್ 13 - ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್‌ -ದೆಹಲಿ
  • ಮಾರ್ಚ್ 15 - ಎಲಿಮಿನೇಟರ್ -ದೆಹಲಿ
  • ಮಾರ್ಚ್ 17 - ಫೈನಲ್ -ದೆಹಲಿ

ಇದನ್ನೂ ಓದಿ: ಅತಿ ಹೆಚ್ಚು ರನ್, ಗರಿಷ್ಠ ವಿಕೆಟ್, ವೇಗದ ಅರ್ಧಶತಕ; ಮಹಿಳಾ ಪ್ರೀಮಿಯರ್ ಲೀಗ್ ದಾಖಲೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ