logo
ಕನ್ನಡ ಸುದ್ದಿ  /  ಚುನಾವಣೆಗಳು  /  Breaking News: ಚಿತ್ರದುರ್ಗದಲ್ಲಿ ಮಾಜಿ ಡಿಸಿಎಂ ಕಾರಜೋಳಗೆ ಬಿಜೆಪಿ ಮಣೆ, ಕೇಂದ್ರ ಸಚಿವ ಔಟ್‌

Breaking News: ಚಿತ್ರದುರ್ಗದಲ್ಲಿ ಮಾಜಿ ಡಿಸಿಎಂ ಕಾರಜೋಳಗೆ ಬಿಜೆಪಿ ಮಣೆ, ಕೇಂದ್ರ ಸಚಿವ ಔಟ್‌

Umesha Bhatta P H HT Kannada

Mar 27, 2024 07:40 PM IST

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಕೇಂದ್ರ ಸಚಿವ ನಾರಾಯಣಸ್ವಾಮಿ ಅವಕಾಶ ತಪ್ಪಿಸಿಕೊಂಡಿದ್ದಾರೆ.

    • ಲೋಕಸಭೆ ಚುನಾವಣೆಗೆ ಬಿಜೆಪಿ ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೂ ಅಭ್ಯರ್ಥಿ ಅಂತಿಮಗೊಳಿಸಿದೆ. ಗೋವಿಂದ ಕಾರಜೋಳ ಈ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ.
    • ವರದಿ:  ಎಚ್‌. ಮಾರುತಿ, ಬೆಂಗಳೂರು
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಕೇಂದ್ರ ಸಚಿವ ನಾರಾಯಣಸ್ವಾಮಿ ಅವಕಾಶ ತಪ್ಪಿಸಿಕೊಂಡಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಕೇಂದ್ರ ಸಚಿವ ನಾರಾಯಣಸ್ವಾಮಿ ಅವಕಾಶ ತಪ್ಪಿಸಿಕೊಂಡಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ಕ್ಷೇತ್ರದಲ್ಲಿ ಸೋತಿದ್ದ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ಅನ್ನು ಅಂತಿಮಗೊಳಿಸಲಾಗಿದೆ. ಬುಧವಾರ ಮತ್ತೊಂದು ಅಭ್ಯರ್ಥಿ ಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗೋವಿಂದ ಕಾರಜೋಳ ಸ್ಥಾನ ಪಡೆದಿದ್ದಾರೆ. ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕೇಂದ್ರದ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಕೊಕ್‌ ನೀಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಸಂಪಾದಕೀಯ: ಆರ್ಥಿಕ ಅಸಮಾನತೆಯ ಚರ್ಚೆಯಲ್ಲಿ ಜಾತಿಯ ಸಂಕೀರ್ಣ ಪಾತ್ರ, ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳದ ಹಲವು ಒಳಸುಳಿಗಳು

ಲೋಕಸಭಾ ಚುನಾವಣೆ; ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಲಿಂಗಾಯತರದ್ದೇ ಪ್ರಾಬಲ್ಯ, ಯಡಿಯೂರಪ್ಪ ಕುಟುಂಬದ ರಾಜಕೀಯ ಭವಿಷ್ಯ ನಿರ್ಧರಿಸುವ ಮತದಾನ

ಲೋಕಸಭಾ ಚುನಾವಣೆ 2024; ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕೆ ಇಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಯಾರು

ಲೋಕಸಭಾ ಚುನಾವಣೆ 2024; ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಕಣಕ್ಕೆ, ಕುತೂಹಲಕ್ಕೆ ತೆರೆ ಎಳೆದ ಕಾಂಗ್ರೆಸ್

ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಸ್ಪರ್ಧಿಸಲಿರುವ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿದಂತಾಗಿದೆ.

ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹೊಸಬರನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನಿಸಿತ್ತು. ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ,ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರುಗಳಿದ್ದವು. ಆದರೆ ಅಂತಿಮವಾಗಿರಲಿಲ್ಲ.

ಕೊನೆಗೆ ಹಿರಿಯ ರಾಜಕಾರಣಿ, ಮುಧೋಳದಿಂದ ಐದು ಬಾರಿ ಶಾಸಕರಾಗಿರುವ ಗೋವಿಂದ ಕಾರಜೋಳ ಅವರನ್ನು ನೇಮಿಸಲಾಗಿದೆ. ಜನತಾದಳದಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಕಾರಜೋಳರು ಉಪಮುಖ್ಯಮಂತ್ರಿಯೂ ಆಗಿದ್ದರು. ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ರಾಜಕಾರಣವನ್ನು ಆರಂಭಿಸಿದ್ದವರು ಕಾರಜೋಳರು. ಆನಂತರ ಅದೇ ಲೋಕೋಪಯೋಗಿ ಇಲಾಖೆಯ ಸಚಿವರಾಗಿಯೂ ಕೆಲಸ ಮಾಡಿದವರು. ಮೂಲತಃ ವಿಜಯಪುರದವರಾದರೂ ರಾಜಕೀಯ ಜೀವನ ನಡೆದಿರುವುದು ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಅವರಿಗೆ ಈಗ 73 ವರ್ಷ.

ಈ ಕ್ಷೇತ್ರದಲ್ಲಿ ಕಳೆದ ಐದು ಬಾರಿಯಿಂದಲೂ ಬಿಜೆಪಿ ಹೊಸ ಅಭ್ಯರ್ಥಿಗೆ ಮಣೆ ಹಾಕುತ್ತಾ ಬರುತ್ತಿದೆ. ಕಳೆದ ಬಾರಿಯೂ ಆನೆಕಲ್‌ ಮೂಲದವರಾದ ಬಿಜೆಪಿ ನಾಯಕ ನಾರಾಯಣಸ್ವಾಮಿ ಅವರಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಬಾರಿ ಅವರು ಅವಕಾಶ ತಪ್ಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಹಾಲಿ ಹತ್ತಕ್ಕೂ ಹೆಚ್ಚು ಸಂಸದರಿಗೆ ಈ ಬಾರಿ ಟಿಕೆಟ್‌ ತಪ್ಪಿದ್ದು ಅದರಲ್ಲಿ ನಾರಾಯಣಸ್ವಾಮಿ ಕೂಡ ಸೇರಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ