ಕನ್ನಡ ಸುದ್ದಿ  /  ಚುನಾವಣೆಗಳು  /  Devegowda Family: ಸತತ 2ನೇ ಬಾರಿಗೆ ದೇವೇಗೌಡರ ಕುಟುಂಬದ ಮೂವರು ಲೋಕಸಭಾ ಚುನಾವಣೆಗೆ ಸ್ಪರ್ಧೆ

Devegowda Family: ಸತತ 2ನೇ ಬಾರಿಗೆ ದೇವೇಗೌಡರ ಕುಟುಂಬದ ಮೂವರು ಲೋಕಸಭಾ ಚುನಾವಣೆಗೆ ಸ್ಪರ್ಧೆ

Umesha Bhatta P H HT Kannada

Apr 01, 2024 05:56 PM IST

ದೇವೇಗೌಡರ ಕುಟುಂಬದವರು ಈ ಬಾರಿಯೂ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

    • ಕರ್ನಾಟಕದ ರಾಜಕಾರಣದಲ್ಲಿ ಅತಿ ಹೆಚ್ಚು ಸದಸ್ಯರನ್ನು ಆಯ್ಕೆ ಮಾಡಿ, ನಾಲ್ಕೂ ಶಾಸನಸಭೆಗಳನ್ನೂ ಪ್ರತಿನಿಧಿಸಿರುವುದು ಎಚ್‌.ಡಿ.ದೇವೇಗೌಡರ ಕುಟುಂಬ. ಈ ಬಾರಿಯೂ ಮೂವರು ಕಣದಲ್ಲಿದ್ದಾರೆ.
    • ವರದಿ: ಎಚ್‌.ಮಾರುತಿ, ಬೆಂಗಳೂರು
ದೇವೇಗೌಡರ ಕುಟುಂಬದವರು ಈ ಬಾರಿಯೂ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ದೇವೇಗೌಡರ ಕುಟುಂಬದವರು ಈ ಬಾರಿಯೂ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಬೆಂಗಳೂರು: ಸತತ ಎರಡನೇ ಬಾರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುಟುಂಬದ ಮೂವರು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಚನ್ನಪಟ್ಟಣದ ಶಾಸಕರೂ ಆಗಿರುವ.ಎಚ್.ಡಿ.ಕುಮಾರಸ್ವಾಮಿ, ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಗೌಡರ ಅಳಿಯ ಡಾ. ಸಿ.ಎನ್.ಮಂಜುನಾಥ್ ಸ್ಪರ್ಧಿಸುತ್ತಿದಾರೆ. ಪ್ರಜ್ವಲ್ ರೇವಣ್ಣ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದು ಕುಮಾರಸ್ವಾಮಿ ಅವರಿಗೆ ಆರನೇ ಲೋಕಸಭೆ ಚುನಾವಣೆ. ಇದೇ ಕ್ಷೇತ್ರದಲ್ಲಿ ಅವರ ಪುತ್ರ ಚಿತ್ರನಟ ನಿಖಿಲ್ ಕುಮಾರಸ್ವಾಮಿ 2019ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಸುಮಲತಾ ಅವರ ಎದುರು ಪರಾಭವಗೊಂಡಿದ್ದರು. ಗೌಡರ ಅಳಿಯ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಆಂಧ್ರ ಪ್ರದೇಶ ಚುನಾವಣೆ 2024; 175 ವಿಧಾನಸಭಾ ಸ್ಥಾನಗಳಿಗೆ ಮೇ 13ಕ್ಕೆ ಮತದಾನ, ಚುನಾವಣಾ ಟ್ರೆಂಡ್ ಅರ್ಥಮಾಡಿಕೊಳ್ಳಲು ಈ 10 ಅಂಶ

ಸಂಪಾದಕೀಯ: ಆರ್ಥಿಕ ಅಸಮಾನತೆಯ ಚರ್ಚೆಯಲ್ಲಿ ಜಾತಿಯ ಸಂಕೀರ್ಣ ಪಾತ್ರ, ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳದ ಹಲವು ಒಳಸುಳಿಗಳು

ಲೋಕಸಭಾ ಚುನಾವಣೆ; ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಲಿಂಗಾಯತರದ್ದೇ ಪ್ರಾಬಲ್ಯ, ಯಡಿಯೂರಪ್ಪ ಕುಟುಂಬದ ರಾಜಕೀಯ ಭವಿಷ್ಯ ನಿರ್ಧರಿಸುವ ಮತದಾನ

ಲೋಕಸಭಾ ಚುನಾವಣೆ 2024; ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕೆ ಇಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಯಾರು

2019ರ ಚುನಾವಣೆಯಲ್ಲಿ ದೇವೇಗೌಡ, ಅವರ ಮೊಮ್ಮಕ್ಕಳಾದ ಪ್ರಜ್ವಲ್ ಮತ್ತು ನಿಖಿಲ್ ಮೂವರೂ ಅಭ್ಯರ್ಥಿಯಾಗಿದ್ದರು. ಆದರೆ ದೇವೇಗೌಡರು ತುಮಕೂರು ಮತ್ತು ನಿಖಿಲ್ ಮಂಡ್ಯದಿಂದ ಸೋಲು ಕಂಡಿದ್ದರು. ಆಗ ಗೌಡರು ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ಗೆ ತ್ಯಾಗ ಮಾಡಿ ತುಮಕೂರಿಗೆ ವಲಸೆ ಬಂದಿದ್ದರು. ಬಿಜೆಪಿಯ ಜಿ.ಎಸ್. ಬಸವರಾಜು ವಿರುದ್ಧ 13,339 ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಎಚ್‌ಡಿಕೆಗೆ ಆರನೇ ಚುನಾವಣೆ

ಎಚ್.ಡಿ.ಕುಮಾರಸ್ವಾಮಿ ಈ ಬಾರಿ ಮಂಡ್ಯ ಕ್ಷೇತ್ರವನ್ನು ಆರಿಸಿಕೊಂಡಿದ್ದಾರೆ. ಸಕ್ಕರೆ ನಾಡು ಮಂಡ್ಯ ಯಾವತ್ತೂ ದೇವೇಗೌಡರ ಕುಟುಂಬವನ್ನು ಕೈ ಬಿಟ್ಟಿಲ್ಲ. ಜಿಲ್ಲೆಯ ಏಳಕ್ಕೆ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ನಿರಾಯಾಸವಾಗಿ ಗೆದ್ದುಕೊಂಡು ಬರುತ್ತಿತ್ತು. ಆದರೆ ಇತ್ತೀಚೆಗೆ ಈ ಜಿಲ್ಲೆ ಗೌಡರ ಕುಟುಂಬಕ್ಕೆ ಕಹಿಯಾಗಿ ಪರಿಣಮಿಸಿದೆ.

2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 7 ರಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಗೆಲುವು ಕಂಡಿದೆ. ಖ್ಯಾತ ಉದ್ಯಮಿ ಸ್ಟಾರ್ ಚಂದ್ರು ಅಥವಾ ವೆಂಕಟರಮಣೇಗೌಡ ಕಾಂಗ್ರೆಸ್ ಅಭ್ಯರ್ಥಿ. ಇವರು ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ಇದು 6ನೇ ಲೋಕಸಭಾ ಚುನಾವಣೆ. 1996ರಲ್ಲಿ ಕನಕಪುರ ಲೋಕಸಭಾ

ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಧುಮುಕಿ ಆರಿಸಿ ಬಂದಿದ್ದರು ನಂತರ ಬೆಂಗಳೂರು ಗ್ರಾಮಾಂತರವೂ ಸೇರಿ ಎರಡು ಬಾರಿ ಗೆದ್ದು ಮೂರು ಬಾರಿ ಸೋಲು ಕಂಡಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ ಒಮ್ಮೆ ಸೋತಿದ್ದಾರೆ.

ಪ್ರಜ್ವಲ್‌ಗೂ ಅವಕಾಶ

ಪ್ರಜ್ವಲ್ ರೇವಣ್ಣ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರ ಪುತ್ರ. ಇವರ ಎದುರಾಳಿ ಶ್ರೇಯಸ್ ಪಟೇಲ್. ಮಾಜಿ ಸಂಸದ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ. 2023ರ ವಿಧಾನಸಭಾ ಚುನಾವಣೆಯಲ್ಲಿ 31 ವರ್ಷದ ಶ್ರೇಯಸ್ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ರೇವಣ್ಣ ಅವರ ಎದುರಾಳಿಯಾಗಿ 4000 ಮತಗಳ ಅಂತರದಿಂದ ಸೋಲು ಕಂಡಿದ್ದರು.

2023 ರ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ, ರೇವಣ್ಣ ಮತ್ತು ನಿಖಿಲ್ ಸ್ಪರ್ಧೆ ಮಾಡಿದ್ದರು. ಆದರೆ ಅಪ್ಪ ಚಿಕ್ಕಪ್ಪ ಗೆದ್ದರೂ ನಿಖಿಲ್ ರಾಮನಗರ ಕ್ಷೇತ್ರದಲ್ಲಿ ಸೋತಿದ್ದರು. ಇದು ಅವರ ಸತತ ಎರಡನೇ ಸೋಲು.

ಗೆಲ್ಲದ ನಿಖಿಲ್‌

ವಿಧಾನಸಭೆ ಮತ್ತು ಲೋಕಸಭೆ ಮೆಟ್ಟಿಲು ಹತ್ತುವ ನಿಖಿಲ್‌ ಕನಸು ಈಡೇರಿಲ್ಲ. 2018ರಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿ, ರಾಮನಗರ ಕ್ಷೇತ್ರವನ್ನು ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ತ್ಯಾಗ ಮಾಡಿದ್ದರು. ಅನಿತಾ ಮಧುಗಿರಿ, ರಾಮನಗರ ಶಾಸಕರಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಸೋತಿದ್ದರು.

ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿದ್ದರು. ರಾಜಕೀಯದಲ್ಲಿ ಅಪಾರ ಆಸಕ್ತಿ ಹೊಂದಿರುವ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ಸಿಗುತ್ತಿಲ್ಲ. ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್‌ ರೇವಣ್ಣ ಎಂಎಲ್ಸಿ. ದೇವೇಗೌಡ ಅವರ ಬೀಗರಾದ ಮದ್ದೂರಿನ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಕಳೆದ ಬಾರಿ ಸೋತಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ಅವರ ಸಹೋದರ ಸಿ.ಎನ್ ಬಾಲಕೃಷ್ಣ ಚನ್ನರಾಯಪಟ್ಟಣದಲ್ಲಿ ಮೂರನೇ ಬಾರಿ ಶಾಸಕರಾಗಿದ್ದಾರೆ.

(ವರದಿ: ಎಚ್‌.ಮಾರುತಿ, ಬೆಂಗಳೂರು)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ