logo
ಕನ್ನಡ ಸುದ್ದಿ  /  ಚುನಾವಣೆಗಳು  /  ರಾಮನಗರದಲ್ಲಿ ಸೀರೆಗಳಿದ್ದ ವಾಹನ ಹಿಡಿದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ದ ಆಕ್ರೋಶ

ರಾಮನಗರದಲ್ಲಿ ಸೀರೆಗಳಿದ್ದ ವಾಹನ ಹಿಡಿದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ದ ಆಕ್ರೋಶ

Umesh Kumar S HT Kannada

Mar 20, 2024 11:59 AM IST

ರಾಮನಗರದಲ್ಲಿ ಸೀರೆಗಳಿದ್ದ ವಾಹನ ಹಿಡಿದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿ,ಪರಿಸ್ಥಿತಿ ತಿಳಿಗೊಳಿಸಿದರು.

  • ಲೋಕಸಭೆ ಚುನಾವಣೆಯ ಪ್ರಚಾರದ ಕಾವು ದಿನೇದಿನೆ ಹೆಚ್ಚಾಗುತ್ತಿದೆ. ಮತದಾರರ ಮನವೊಲಿಸುವ ಪ್ರಯತ್ನವಾಗಿ ಆಮಿಷಗಳನ್ನು ಒಡ್ಡುವ ಕೆಲಸವೂ ನಡೆದಿದೆ. ರಾಮನಗರದಲ್ಲಿ ಸೀರೆಗಳು ತುಂಬಿದ್ದ ವಾಹನವನ್ನು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಗುರುತಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರ ವಿವರ ಇಲ್ಲಿದೆ. ( ವರದಿ- ಎಚ್.ಮಾರುತಿ, ಬೆಂಗಳೂರು)

ರಾಮನಗರದಲ್ಲಿ ಸೀರೆಗಳಿದ್ದ ವಾಹನ ಹಿಡಿದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿ,ಪರಿಸ್ಥಿತಿ ತಿಳಿಗೊಳಿಸಿದರು.
ರಾಮನಗರದಲ್ಲಿ ಸೀರೆಗಳಿದ್ದ ವಾಹನ ಹಿಡಿದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿ,ಪರಿಸ್ಥಿತಿ ತಿಳಿಗೊಳಿಸಿದರು.

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದ ಕಾವು ಏರುತ್ತಿದೆ. ಮತದಾರರನ್ನು ಆಕರ್ಷಿಸುವುದಕ್ಕೆ ಆಮಿಷಗಳನ್ನು ಒಡ್ಡುವ ಕೆಲಸವೂ ಶುರುವಾಗಿದೆ. ಚುನಾವಣೆಗಳ ಪ್ರಚಾರ ಅಬ್ಬರ ಜೋರಾಗುತ್ತಿದ್ದಂತೆ ಸೀರೆ ಮತ್ತಿರ ವಸ್ತುಗಳನ್ನು ಹಂಚುವುದು ಸಾಮಾನ್ಯವಾಗಿದೆ. ರಾಮನಗರ ಪಟ್ಟಣದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದ ಆವರಣದಲ್ಲಿರುವ ಖಾಸಗಿ ಗೋಡೌನ್‌ನಲ್ಲಿ ಸೀರೆಗಳನ್ನು ತುಂಬಿದ್ದ ವಾಹನವನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಸಂಪಾದಕೀಯ: ಆರ್ಥಿಕ ಅಸಮಾನತೆಯ ಚರ್ಚೆಯಲ್ಲಿ ಜಾತಿಯ ಸಂಕೀರ್ಣ ಪಾತ್ರ, ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳದ ಹಲವು ಒಳಸುಳಿಗಳು

ಲೋಕಸಭಾ ಚುನಾವಣೆ; ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಲಿಂಗಾಯತರದ್ದೇ ಪ್ರಾಬಲ್ಯ, ಯಡಿಯೂರಪ್ಪ ಕುಟುಂಬದ ರಾಜಕೀಯ ಭವಿಷ್ಯ ನಿರ್ಧರಿಸುವ ಮತದಾನ

ಲೋಕಸಭಾ ಚುನಾವಣೆ 2024; ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕೆ ಇಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಯಾರು

ಲೋಕಸಭಾ ಚುನಾವಣೆ 2024; ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಕಣಕ್ಕೆ, ಕುತೂಹಲಕ್ಕೆ ತೆರೆ ಎಳೆದ ಕಾಂಗ್ರೆಸ್

ಮತದಾರರಿಗೆ ಹಂಚುವುದಕ್ಕಾಗಿ ಕಾಂಗ್ರೆಸ್ ಮುಖಂಡರು ಈ ಸೀರೆಗಳನ್ನು ಗೋದಾಮಿನಲ್ಲಿ ಸಂಗ್ರಹಿಸಿ ಇಡುತ್ತಿದ್ದರು ಎಂದು ಎರಡೂ ಪಕ್ಷಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಗೋದಾಮಿನಲ್ಲಿ ಸಂಗ್ರಹಿಸುವುದಕ್ಕಾಗಿ ಸೀರೆಗಳಿದ್ದ ವಾಹನ ಒಕ್ಕಲಿಗರ ಭವನದ ಸಮೀಪ ಆಗಮಿಸಿತ್ತು. ಆಗ ಈ ಕಾರ್ಯಕರ್ತರು ವಾಹನದ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳದಲ್ಲಿ ಸ್ವಲ್ಪ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸೀರೆ ವಿಷಯ ಹರಡುತ್ತಿದ್ದಂತೆ ಸಾರ್ವಜನಿಕರು ಭಾರಿ ಸಂಖ್ಯೆಯಲ್ಲಿ ಅಲ್ಲಿ ಸೇರಿದ್ದರು ಎಂದು ತಿಳಿದು ಬಂದಿದೆ.

ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ರಾಮನಗರ ಕಾಂಗೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಡಿವೈ ಎಸ್ ಪಿ ದಿನಕರ ಶೆಟ್ಟಿ ಮತ್ತು ಸ್ಥಳೀಯ ಚುನಾವಣಾ ಸಿಬ್ಬಂದಿ ಒಕ್ಕಲಿಗರ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಸ್ತ್ರಾಸ್ತ್ರ ಠೇವಣಿ ಇರಿಸಲು ಸಾರ್ವಜನಿಕರಿಗೆ ಸೂಚನೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಇರುವ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಯಲ್ಲಿ ಠೇವಣಿ ಇರಿಸಬೇಕು ಎಂದು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.

ಸಾಮಾನ್ಯವಾಗಿ ಚುನಾವಣೆಗಳು ಎದುರಾದಾಗ ಮುನ್ನೆಚ್ಚರಿಕೆಯ ಕ್ರಮವಾಗಿ ಸಾರ್ವಜನಿಕರು ತಮ್ಮಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಿಗೆ ಒಪ್ಪಿಸುವುದು ಕಾನೂನು ಪ್ರಕ್ರಿಯೆಗಳಲ್ಲಿ ಒಂದು. ಹಾಗೆ, ಲೋಕಸಭಾ ಚುನಾವಣೆ ಎದುರಾಗುತ್ತಿದ್ದು, ಸಾರ್ವಜನಿಕರು ಪರವಾನಗಿ ಪಡೆದಿರುವ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇರಿಸಲು ಮಾರ್ಚ್ 25 ರವರೆಗೆ ಕಾಲಾವಕಾಶ ನೀಡಲಾಗಿದೆ.

ನೀತಿಸಂಹಿತೆ ಜಾರಿಯಲ್ಲಿರುವ ಸಂದರ್ಭಗಳಲ್ಲಿ ಸಾರ್ವಜನಿಕರು ಶಸ್ತ್ರಾಸ್ತ್ರಗಳನ್ನು ಮನೆಯಲ್ಲಿಟ್ಟುಕೊಳ್ಳಲು ಅವಕಾಶ ಇರುವುದಿಲ್ಲ. ಒಂದು ವೇಳೆ ಠೇವಣಿ ಇಡದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಆದರೆ ಕೆಲವರಿಗೆ ವಿನಾಯಿತಿ ನೀಡಲಾಗಿದೆ.

ಶಸ್ತ್ರಾಸ್ತ್ರ ಠೇವಣಿಯಿಂದ ಇವರಿಗೆಲ್ಲ ವಿನಾಯಿತಿ

ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು, ಅಧಿಕಾರಿಗಳು, ಬ್ಯಾಂಕ್ ಮತ್ತು ಭದ್ರತಾ ಏಜೆನ್ಸಿಗಳು, ನ್ಯಾಷನಲ್ ರೈಫಲ್ ಅಸೋಸಿಯೇಷನ್ ಸದಸ್ಯರು ಶೂಟಿಂಗ್ ಕ್ರೀಡಾ ಪಟುಗಳು ಮತ್ತು ಕೊಡವ ಸಮಾಜದವರಿಗೆ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಲು ವಿನಾಯಿತಿ ನೀಡಲಾಗಿದೆ.

ಒಂದು ವೇಳೆ ವಿನಾಯಿತಿ ಅವಶ್ಯಕತೆ ಇದ್ದಲ್ಲಿ ಸಾರ್ವಜನಿಕರು ಪರಿಶೀಲನಾ ಸಮಿತಿಗೆ ಅರ್ಜಿ ಸಲ್ಲಿಸಿ ಸೂಕ್ತ ಕಾರಣಗಳನ್ನು ನೀಡಿದರೆ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಅವಕಾಶ ನೀಡಲಾಗುತ್ತದೆ. ಚುನಾವಣಾ ಅಕ್ರಮಗಳನ್ನು ನಿಯಂತ್ರಿಸಲು ಮತ್ತು ವಾಹನಗಳ ತಪಾಸಣೆಗಾಗಿ ಬೆಂಗಳೂರಿನ ವ್ಯಾಪ್ತಿಯಲ್ಲಿ 102 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದೂ ಆಯುಕ್ತರು ಮಾಹಿತಿ ನೀಡಿದ್ದಾರೆ.

( ವರದಿ- ಎಚ್.ಮಾರುತಿ, ಬೆಂಗಳೂರು)

(This copy first appeared in Hindustan Times Kannada website. To read more on Lok Sabha Elections, Political developments, Lok Sabha Constituency profiles, Political Analysis in Kannada please visit kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ