logo
ಕನ್ನಡ ಸುದ್ದಿ  /  ಚುನಾವಣೆಗಳು  /  Mangaluru News: ಕೇರಳದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ

Mangaluru News: ಕೇರಳದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ

HT Kannada Desk HT Kannada

Apr 22, 2024 10:32 PM IST

google News

ಕೇರಳದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ

    • ಈ ಅಂಚೆ ಮತದಾನ ಪ್ರಕ್ರಿಯೆ ಏಪ್ರಿಲ್ 21ರಿಂದ 24ರ ವರೆಗೆ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೂ ಲಭ್ಯವಿರುತ್ತದೆ.
ಕೇರಳದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ
ಕೇರಳದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ

ಮಂಗಳೂರು: ಕೇರಳದಲ್ಲಿ ಚುನಾವಣಾ ಕಾರ್ಯದಲ್ಲಿ ನಿಯೋಜಿತರಾದ ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಮತದಾರರಿಗೆ ಅವಕಾಶ ಅಂಚೆ ಮತಪತ್ರದ ಮೂಲಕ ಹಕ್ಕು ಚಲಾಯಿಸಲು ಏಪ್ರಿಲ್ 24 ರವರೆಗೆ ಅನುಮತಿ ನೀಡಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುವ ಏಪ್ರಿಲ್ 26ರಂದೇ ಕೇರಳ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಸಭೆಗೆ ಚುನಾವಣಾ ಮತದಾನ ನಡೆಯಲಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅರ್ಹ ಮತದಾರರಾಗಿರುವ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಕೇರಳ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದಲ್ಲಿ ಅವರಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು VOED (ವೋಟರ್ ಆನ್ ಎಲೆಕ್ಷನ್ ಡ್ಯೂಟಿ) ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಅಂಥ VOED ವೋಟರ್‌ಗಳು ಕೇರಳದ ಸಕ್ಷಮ ಪ್ರಾಧಿಕಾರಿಗಳಾಗಿರುವ ಜಿಲ್ಲಾ ಚುನಾವಣಾಧಿಕಾರಿಗಳು ನೀಡಿರುವ ಚುನಾವಣಾ ಕರ್ತವ್ಯದ ಆದೇಶ ಹಾಗೂ ನಮೂನೆ 12 ರೊಂದಿಗೆ, ಖುದ್ದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ 3ನೇ ಮಹಡಿಯಲ್ಲಿರುವ ಕಾಯ್ದಿರಿಸಿರುವ ಕೊಠಡಿಗೆ ಆಗಮಿಸಬೇಕು. ಅಲ್ಲಿ ಅವರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಅವಕಾಶ ಒದಗಿಸಲಾಗುವುದು.

ಈ ಅಂಚೆ ಮತದಾನ ಪ್ರಕ್ರಿಯೆ ಏಪ್ರಿಲ್ 21ರಿಂದ 24ರ ವರೆಗೆ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೂ ಲಭ್ಯವಿರುತ್ತದೆ. ಇದೇ ರೀತಿಯ ಸವಲತ್ತನ್ನು ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿತರಾಗಿರುವ ಕೇರಳ ರಾಜ್ಯದ VOED ಮತದಾರರಿಗೂ ಕಲ್ಪಿಸಲಾಗಿದೆ. ಈ ಬಗ್ಗೆ ಅಲ್ಲಿನ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಕೇರಳ ರಾಜ್ಯದ VOED ಮತದಾರರು ಅಂಚೆ ಮತದಾನ ಮಾಡಲು ಸಂಬಂಧಿಸಿದ ಸಕ್ಷಮ ವ್ಯಾಪ್ತಿಯ ಜಿಲ್ಲಾ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ