Harsha Telugu Movie: ಟಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ ಎ. ಹರ್ಷ.. ಗೋಪಿಚಂದ್ ಚಿತ್ರಕ್ಕೆ ನಿರ್ದೇಶನ
Mar 03, 2023 04:59 PM IST
ತೆಲುಗು ಸಿನಿಮಾ ನಿರ್ದೇಶನ ಮಾಡುತ್ತಿರುವ ಎ. ಹರ್ಷ
- ಚಿತ್ರದ ಮುಹೂರ್ತದ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕ ರಾಧಾ ಮೋಹನ್, ಗೋಪಿಚಂದ್ ಹಾಗೂ ಎ. ಹರ್ಷ ಜೊತೆ ಸೇರಿ ಸಿನಿಮಾ ಮಾಡುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ಇದು ನಮ್ಮ ನಿರ್ಮಾಣ ಸಂಸ್ಥೆಯ 14ನೇ ಸಿನಿಮಾ. ನಿರ್ದೇಶಕರು ಪವರ್ ಫುಲ್ ಸಬ್ಜೆಕ್ಟ್ ಇರುವ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಇದೇ ತಿಂಗಳಿನಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ನಿರ್ದೇಶಕ ಎ. ಹರ್ಷ, 'ವೇದ' ಸಿನಿಮಾ ಸಕ್ಸಸ್ ಖುಷಿಯಲ್ಲಿದ್ಧಾರೆ. ಇದೀಗ ಅವರು ಮೊದಲ ಬಾರಿಗೆ ತೆಲುಗು ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ಧಾರೆ. ಟಾಲಿವುಡ್ ಸ್ಟಾರ್ ನಟ ಗೋಪಿಚಂದ್‌ಗೆ ಹರ್ಷ ಆಕ್ಷನ್ ಕಟ್ ಹೇಳಲು ಹೊರಟಿದ್ದು ಈ ಸಿನಿಮಾ ಮುಹೂರ್ತ ಇತ್ತೀಚೆಗೆ ಹೈದರಾಬಾದ್‌ನಲ್ಲಿ ನೆರವೇರಿದೆ. ಇದು ಗೋಪಿಚಂದ್ ಅವರ 31ನೇ ಸಿನಿಮಾ ಆಗಿದೆ.
ಎ. ಹರ್ಷ ಹೆಣೆದ ಔಟ್ ಅಂಡ್ ಔಟ್ ಆಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಗೋಪಿಚಂದ್, ಹೊಸ ಅವತಾರದಲ್ಲಿ ತೆರೆ ಮೇಲೆ ಬರ್ತಿದ್ದಾರೆ. ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ 14ನೇ ಸಿನಿಮಾ ಇದಾಗಿದ್ದು, ಕೆ.ರಾಧಾ ಮೋಹನ್ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದ ಮುಹೂರ್ತದ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕ ರಾಧಾ ಮೋಹನ್, ಗೋಪಿಚಂದ್ ಹಾಗೂ ಎ. ಹರ್ಷ ಜೊತೆ ಸೇರಿ ಸಿನಿಮಾ ಮಾಡುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ಇದು ನಮ್ಮ ನಿರ್ಮಾಣ ಸಂಸ್ಥೆಯ 14ನೇ ಸಿನಿಮಾ. ನಿರ್ದೇಶಕರು ಪವರ್ ಫುಲ್ ಸಬ್ಜೆಕ್ಟ್ ಇರುವ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗೋಪಿಚಂದ್ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ. ಇದೇ ತಿಂಗಳಿನಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಸ್ವಾಮಿ.ಜೆ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ನಿರ್ದೇಶನ ಈ ಚಿತ್ರಕ್ಕಿದ್ದು, ಸದ್ಯದಲ್ಲೇ ಸಿನಿಮಾದ ತಾರಾ ಬಳಗ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ. ಸಿನಿಮಾಗೆ ಇನ್ನೂ ಟೈಟಲ್ ಕೂಡಾ ಫೈನಲ್ ಆಗಿಲ್ಲ. ಎ. ಹರ್ಷ ಮೊದಲ ತೆಲುಗು ಚಿತ್ರಕ್ಕೆ ಶುಭವಾಗಲಿ, ಕನ್ನಡದಂತೆ ತೆಲುಗಿನಲ್ಲಿ ಕೂಡಾ ಅವರು ಸ್ಟಾರ್ ನಿರ್ದೇಶಕನಾಗಿ ಹೆಸರು ಮಾಡಲಿ ಎಂದು ಸಿನಿಪ್ರಿಯರು ಹಾರೈಸುತ್ತಿದ್ದಾರೆ.
ಕೊರಿಯೋಗ್ರಾಫರ್ ಆಗಿ ಚಿತ್ರರಂಗಕ್ಕೆ ಬಂದ ಹರ್ಷ
ಹರ್ಷ 2004ರಲ್ಲಿ ಸುದೀಪ್ ಅಭಿನಯದ 'ರಂಗ ಎಸ್‌ಎಸ್‌ಎಲ್‌ಸಿ' ಚಿತ್ರದ ಮೂಲಕ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಚಿತ್ರರಂಗಕ್ಕೆ ಬಂದರು. ಅಲ್ಲಿಂದ ಅವರು ಅನೇಕ ಸಿನಿಮಾಗಳಿಗೆ ಡ್ಯಾನ್ಸ್ ಕೊರಿಯೋಗ್ರಫಿ ಮಾಡಿದ್ದಾರೆ. 'ಕಾಶಿ ಫ್ರಮ್ ವಿಲೇಜ್' ಹಾಗೂ 'ಜಾಕ್‌ಪಾಟ್' ಸಿನಿಮಾಗಳಲ್ಲಿ ಹರ್ಷ ಆಕ್ಟಿಂಗ್ ಕೂಡಾ ಮಾಡಿದ್ದಾರೆ. ಡೈರೆಕ್ಷನ್‌ನಲ್ಲಿ ಕೂಡಾ ಆಸಕ್ತಿ ಇದ್ದ ಹರ್ಷ 2007ರಲ್ಲಿ 'ಗೆಳೆಯ' ಸಿನಿಮಾ ಮೂಲಕ ನಿರ್ದೇಶಕನಾಗಿ ಗುರುತಿಸಿಕೊಂಡರು. ಬಿರುಗಾಳಿ, ಚಿಂಗಾರಿ, ಭಜರಂಗಿ, ವಜ್ರಕಾಯ, ಜೈ ಮಾರುತಿ 800, ಅಂಜನಿಪುತ್ರ, ಸೀತಾರಾಮ ಕಲ್ಯಾಣ, ಭಜರಂಗಿ 2, ವೇದ ಸಿನಿಮಾಗಳನ್ನು ಹರ್ಷ ನಿರ್ದೇಶಿಸಿದ್ದಾರೆ. ಶಿವರಾಜ್‌ಕುಮಾರ್ ಜೊತೆ ಅವರು 4 ಚಿತ್ರಗಳನ್ನು ಮಾಡಿದ್ದಾರೆ.
ಒಟಿಟಿಯಲ್ಲಿ ದಾಖಲೆ ಬರೆದ 'ವೇದ'
ಥಿಯೇಟರ್‌ಗಳಲ್ಲಿ ಸೂಪರ್ ಸಕ್ಸಸ್ ಕಂಡ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ 'ವೇದ' ಫೆಬ್ರವರಿ 10 ರಿಂದ ಜೀ 5 ನಲ್ಲಿ ಸ್ಟ್ರೀಮ್ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಯಲ್ಲಿ ಕೂಡಾ ಹೊಸ ದಾಖಲೆ ಬರೆದಿದೆ. ಕೆಲವೇ ದಿನದಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ. ವೇದ ಸಿನಿಮಾ ಹೀಗೆ ರೆಕಾರ್ಡ್ ಕ್ರಿಯೇಟ್ ಮಾಡಿದ ಖುಷಿಗೆ ಶಿವಣ್ಣ ಅಭಿಮಾನಿಗಳು ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಈ ಖುಷಿಯನ್ನು ಸಂಭ್ರಮಿಸಿದ್ದರು. ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳು 'ವೇದ' ಚಿತ್ರದ ಶಿವಣ್ಣ ಕಟೌಟ್ ನಿಲ್ಲಿಸಿ ಹಾರ ಹಾಕಿ ಅಭಿಮಾನಿಗಳಿಗೆ ಸ್ವೀಟ್ ಹಂಚಿ ಖುಷಿ ವ್ಯಕ್ತಪಡಿಸಿತ್ತು.