logo
ಕನ್ನಡ ಸುದ್ದಿ  /  ಮನರಂಜನೆ  /  Arjun Sarja: ಬಹುಭಾಷಾ ನಟ ಅರ್ಜುನ್‌ ಸರ್ಜಾಗೆ ಮಾತೃವಿಯೋಗ

Arjun Sarja: ಬಹುಭಾಷಾ ನಟ ಅರ್ಜುನ್‌ ಸರ್ಜಾಗೆ ಮಾತೃವಿಯೋಗ

HT Kannada Desk HT Kannada

Jul 23, 2022 02:40 PM IST

google News

ಬಹುಭಾಷಾ ನಟ ಅರ್ಜುನ್‌ ಸರ್ಜಾಗೆ ಮಾತೃವಿಯೋಗ

    • ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯಸ್ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಜಯನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಬಹುಭಾಷಾ ನಟ ಅರ್ಜುನ್‌ ಸರ್ಜಾಗೆ ಮಾತೃವಿಯೋಗ
ಬಹುಭಾಷಾ ನಟ ಅರ್ಜುನ್‌ ಸರ್ಜಾಗೆ ಮಾತೃವಿಯೋಗ

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೈಸೂರಿನಲ್ಲಿ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀದೇವಮ್ಮ ಅವರಿಗೆ ಧ್ರುವ ಸರ್ಜಾ ಅವರ ತಾಯಿ ಅಮ್ಮಾಜಿ, ಅರ್ಜುನ್‌ ಸರ್ಜಾ ಮತ್ತು ಕಿಶೋರ್‌ ಸರ್ಜಾ ಸೇರಿ ಇಬ್ಬರು ಗಂಡು ಮಕ್ಕಳು ಓರ್ವ ಮಗಳಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಜಯನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಕನ್ನಡದ ಹಿರಿಯ ನಟ ಶಕ್ತಿಪ್ರಸಾದ್‌ ಅವರ ಪತ್ನಿಯಾಗಿದ್ದ ಲಕ್ಷ್ಮೀದೇವಿ ಅವರಿಗೆ ೮೫ ವರ್ಷ ವಯಸ್ಸಾಗಿತ್ತು. ವಯಸ್ಸಹಜ ಕಾಯಿಲೆಯಿಂದಲೂ ಅವರು ಬಳಲುತ್ತಿದ್ದರು.

ಇದೇ ವರ್ಷದ ಫೆಬ್ರವರಿಯಲ್ಲಿ ಅರ್ಜುನ್‌ ಸರ್ಜಾ ಅವರ ಮಾವ, ಹಿರಿಯ ನಟ ಕಲಾತಪಸ್ವಿ ರಾಜೇಶ್‌ ಸಹ ನಿಧನರಾಗಿದ್ದರು. ಆ ನೋವಿನಿಂದ ಆಚೆ ಬರುತ್ತಿದ್ದಂತೆ ಇದೀಗ ಅರ್ಜುನ್‌ ಸರ್ಜಾ ಅವರ ತಾಯಿಯೂ ಕೊನೆಯುಸಿರೆಳೆದಿದ್ದಾರೆ.

ಸದ್ಯ ಅಪೋಲೋ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು, ಅಂತ್ಯ ಸಂಸ್ಕಾರಕ್ಕೂ ಸರ್ಜಾ ಕುಟುಂಬದಲ್ಲಿ ತಯಾರಿ ನಡೆದಿದೆ. ಧ್ರುವ ಸರ್ಜಾ ಸೇರಿ ಅರ್ಜುನ್‌ ಸರ್ಜಾ ಕುಟುಂಬವೂ ಸದ್ಯ ಆಸ್ಪತ್ರೆಯಲ್ಲಿ ಬೀಡುಬಿಟ್ಟಿದೆ.

ಈ ಮಧ್ಯೆ, ಲಕ್ಷ್ಮಿ ದೇವಮ್ಮ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಅರ್ಜುನ್ ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಂತಾಪ ಸೂಚಿಸುತ್ತಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ