Aaram Aravinda Swamy: 'ಆರಾಮ್ ಅರವಿಂದ್ ಸ್ವಾಮಿ’ ಮೆಚ್ಚಿದ ಅಶ್ವಿನಿ ಪುನೀತ್ ರಾಜ್‌ಕುಮಾರ್.. ಫಸ್ಟ್ ಲುಕ್ ಪೋಸ್ಟರ್ ರಿಲೀಸ್
Mar 24, 2023 09:32 AM IST
'ಆರಾಮ್ ಅರವಿಂದ್ ಸ್ವಾಮಿ’ ಮೆಚ್ಚಿದ ಅಶ್ವಿನಿ ಪುನೀತ್ ರಾಜ್‌ಕುಮಾರ್.. ಫಸ್ಟ್ ಲುಕ್ ಪೋಸ್ಟರ್ ರಿಲೀಸ್
‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿಯ ಮುಂದಿನ ಚಿತ್ರ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದೆ.
Aaram Aravinda Swamy Poster: ನಟ ಅನೀಶ್ ತೇಜೇಶ್ವರ್, ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ಇದೀಗ ಈ ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ.
‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಆ ಪೈಕಿ ಮಿಲನಾ ನಾಗರಾಜ್ ವಿಭಿನ್ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ಎರಡು ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲಯಾಳಿ ಹುಡುಗಿ ಹಾಗೂ ಟೀಚರ್ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.
ಅದೇ ರೀತಿ ಮತ್ತೋರ್ವ ನಾಯಕಿ ಹೃತಿಕಾ ಶ್ರೀನಿವಾಸ್ ಅನೀಶ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲಿ ಬಿಜಿಯಾಗಿರುವ ಚಿತ್ರತಂಡ, ಇದೀಗ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಮನ ಸೆಳೆಯುತ್ತಿದೆ.
ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.
ಈ ಸಿನಿಮಾ ಸುದ್ದಿಯನ್ನೂ ಓದಿ
BIFF 2023: ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಸಿಎಂ ಚಾಲನೆ; ಸಿಲಿಕಾನ್ ಸಿಟಿಯಲ್ಲೀಗ ಸಿನಿಮಾ ರಂಗು..
BIFF 2023: 14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ (Bengaluru International Film Festival) ಗುರುವಾರ ಸಂಜೆ ಅದ್ದೂರಿ ಚಾಲನೆ ದೊರೆತಿದೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ ಕಲರ್‌ಫುಲ್ ದೀಪಾಲಂಕಾರದ ನಡುವೆ, ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಕಥೆಗಾರ ವಿಜಯೇಂದ್ರ ಪ್ರಸಾದ್, ಬಾಲಿವುಡ್‌ನ ಖ್ಯಾತ ನಿರ್ದೇಶಕ ಗೋವಿಂದ ನಿಹ್ಲಾನಿ, ಅಭಿಷೇಕ್ ಅಂಬರೀಷ್, ನಟಿ ಸಪ್ತಮಿ ಗೌಡ ಸೇರಿ ಹಲವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಸಿನಿಮೋತ್ಸವಕ್ಕೆ ಚಾಲನೆ ನೀಡಲಾಗಿದೆ. ಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ