logo
ಕನ್ನಡ ಸುದ್ದಿ  /  ಮನರಂಜನೆ  /  Ranchi Real Story: ‘ನಮಗೆ ರೇಲ್ವೆ ಇಲಾಖೆ ಕುರಿತ ಡಾಕ್ಯುಮೆಂಟರಿ ಬೇಕು, ಮಾಡ್ತೀರಾ?’; ಹ್ಞುಂ ಎಂದ ಚಿತ್ರತಂಡಕ್ಕೆ ಕಾದಿತ್ತು ಶಾಕ್!

Ranchi Real Story: ‘ನಮಗೆ ರೇಲ್ವೆ ಇಲಾಖೆ ಕುರಿತ ಡಾಕ್ಯುಮೆಂಟರಿ ಬೇಕು, ಮಾಡ್ತೀರಾ?’; ಹ್ಞುಂ ಎಂದ ಚಿತ್ರತಂಡಕ್ಕೆ ಕಾದಿತ್ತು ಶಾಕ್!

Oct 06, 2022 09:02 PM IST

‘ನಮಗೆ ರೇಲ್ವೆ ಇಲಾಖೆ ಕುರಿತ ಡಾಕ್ಯುಮೆಂಟರಿ ಬೇಕು, ಮಾಡ್ತೀರಾ?’; ಹ್ಞುಂ ಎಂದ ಚಿತ್ರತಂಡಕ್ಕೆ ಕಾದಿತ್ತು ಶಾಕ್!

    • ಚಿತ್ರ ನಿರ್ದೇಶಕರಿಗೆ ಹೇಗೆಲ್ಲ ಮೋಸ ಮಾಡ್ತಾರೆ ಎಂಬುದನ್ನು ತೋರಿಸುವ ಪ್ರಯತ್ನ ರಾಂಚಿ ಸಿನಿಮಾದಲ್ಲಾಗಿದೆ. ಇನ್ನೇನು ನವೆಂಬರ್‌ 11ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ. 
‘ನಮಗೆ ರೇಲ್ವೆ ಇಲಾಖೆ ಕುರಿತ ಡಾಕ್ಯುಮೆಂಟರಿ ಬೇಕು, ಮಾಡ್ತೀರಾ?’; ಹ್ಞುಂ ಎಂದ ಚಿತ್ರತಂಡಕ್ಕೆ ಕಾದಿತ್ತು ಶಾಕ್!
‘ನಮಗೆ ರೇಲ್ವೆ ಇಲಾಖೆ ಕುರಿತ ಡಾಕ್ಯುಮೆಂಟರಿ ಬೇಕು, ಮಾಡ್ತೀರಾ?’; ಹ್ಞುಂ ಎಂದ ಚಿತ್ರತಂಡಕ್ಕೆ ಕಾದಿತ್ತು ಶಾಕ್!

ರುದ್ರಾನಂದ ಆರ್ ಎನ್ ಹಾಗೂ ಅರುಣ್ ಕುಮಾರ್ ಎನ್ ನಿರ್ಮಾಣ‌ದ, ಶಶಿಕಾಂತ್ ಗಟ್ಟಿ ನಿರ್ದೇಶನದ, ನೈಜಘಟನೆ ಆಧಾರಿತ "ರಾಂಚಿ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿತು. ಶೀರ್ಷಿಕೆಯ ಹಿನ್ನೆಲೆ ಮತ್ತು ಅಸಲಿ ಕಥೆಯನ್ನು ಬಿಚ್ಚಿಟ್ಟಿತು.

ಟ್ರೆಂಡಿಂಗ್​ ಸುದ್ದಿ

Sathyam: ‘ಸತ್ಯಂ’ ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್‌ ಪಾಸ್‌, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ ‘ಗಣಪ’ನ ಸಿನಿಮಾ

Kangaroo Review: ಕ್ರೈಂ ಥ್ರಿಲ್ಲರ್‌ನಲ್ಲಿ ಮೇಳೈಸಿದ ಹಾರರ್‌ ಅನುಭವ! ‘ಕಾಂಗರೂ’ ಚಿತ್ರದಲ್ಲಿ ಕಾಡಲಿದೆ ಕರುಳು ಬಳ್ಳಿಯ ಕಥೆ

ಶಕುಂತಲಾದೇವಿ ಕೈಗೂ ಸಿಗ್ತು ಪೆನ್‌ಡ್ರೈವ್‌; ಪ್ರಜ್ವಲ್‌ ರೇವಣ್ಣ ವಿದ್ಯಮಾನದ ಸಮಯದಲ್ಲಿ ಅಲರ್ಟ್‌ ಆದ್ರು ಸೀರಿಯಲ್‌ ಡೈರೆಕ್ಟರ್‌

‘2976 ವೈರಲ್‌ ವಿಡಿಯೋಗಳ ಪೈಕಿ ನಾನೂ ಒಂದನ್ನು ನೋಡಿದೆ’; ಪ್ರಜ್ವಲ್‌ ರೇವಣ್ಣ ವಿಡಿಯೋ ವೀಕ್ಷಿಸಿದ ಹರ್ಷಿಕಾ ಪೂಣಚ್ಚ ಏನಂದ್ರು?

ಮೊದಲಿಗೆ ನಿರ್ದೇಶಕರೇ ಮಾತು ಆರಂಭಿಸಿದರು. "ನಾನು "ಐಪಿಸಿ ಸೆಕ್ಷನ್ 300" ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದೆ. ಆಗ ನನಗೆ ರಾಂಚಿಯಿಂದ ಒಂದು ಕರೆ ಬರುತ್ತದೆ. ನೀವು ರೇಲ್ವೆ ಇಲಾಖೆ ಕುರಿತು ಒಂದು ಡಾಕ್ಯುಮೆಂಟರಿ ಮಾಡಿಕೊಡಬೇಕು. ರಾಂಚಿಗೆ ಬನ್ನಿ. ಅವರ ಪರಿಶುದ್ಧ ಹಿಂದಿ ಭಾಷೆ ಕೇಳಿ, ಇದು ಸರ್ಕಾರದಿಂದ ಬಂದಿರುವ ಕರೆ ಎಂದು ತಿಳಿದು ಸಂತೋಷವಾಯಿತು. ಆಮೇಲೆ ಯೋಚನೆ ಮಾಡಿದೆ. ಸರ್ಕಾರ ಇಂತಹ ವಿಷಯವನ್ನು ಟೆಂಡರ್ ಮೂಲಕ ಕರೆಯುತ್ತದೆ. ಇದು ಸುಳ್ಳು ಇರಬಹುದು ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಫೋನ್ ಮಾಡಿ ಈ ಬಗ್ಗೆ ಕೇಳಿದೆ. ಅವರು ಇದೆಲ್ಲಾ ಸುಳ್ಳು. ನೀವು ಇಲ್ಲಿಗೆ ಬರಬೇಡಿ ಎಂದರು. ಈ ರೀತಿ ಸಾಕಷ್ಟು ನಿರ್ದೇಶಕರು, ನಿರ್ಮಾಪಕರು ಈ ರೀತಿಯ ಕರೆಯಿಂದ ಮೋಸ ಹೋಗಿದ್ದಾರೆ. ಈ ವಿಷಯವನ್ನಿಟ್ಟುಕೊಂಡೆ ನಾವು "ರಾಂಚಿ" ಸಿನಿಮಾ ಮಾಡಿದ್ದೇವೆ" ಎಂದರು.

ಮುಂದುವರಿದು ಮಾತನಾಡಿ, "ನಾಯಕ ಪ್ರಭು ಮುಂಡ್ಕರ್ ಕಥೆ ಕೇಳಿ ನಟಿಸಲು ಒಪ್ಪಿದರು. ರುದ್ರಾನಂದ ಹಾಗೂ ಅರುಣ್‌ ಕುಮಾರ್ ನಿರ್ಮಾಣಕ್ಕೆ ಮುಂದಾದರು. ನೈಜಘಟನೆ ಆಧಾರಿತ ಸಿನಿಮಾ‌ವಿದು. "ರಾಂಚಿ"ಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ‌. 2020 ರಲ್ಲೇ ಸೆನ್ಸಾರ್ ಆಗಿತ್ತು. ಕರೊನಾ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ. ದಿವ್ಯಾ ಉರುಡುಗ, ಟೋಟ ರಾಯ್ ಚೌಧರಿ, ಆರತಿ ನಾಯರ್, ಲಕ್ಷ್ಮಣ್ ಗೌಡ, ಸುರೇಶ್ ಹೆಬ್ಳೀಕರ್, ಉಷಾ ಭಂಡಾರಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ" ಎಂದು ಚಿತ್ರದ ಕುರಿತು ನಿರ್ದೇಶಕ ಶಶಿಕಾಂತ್ ಗಟ್ಟಿ ಮಾಹಿತಿ ನೀಡಿದರು.

ಕೋವಿಡ್ ನಂತರ ಜನ ಸಿನಿಮಾ ನೋಡುವ ರೀತಿ ಬದಲಾಗಿದೆ. ಜನರ ನಿರೀಕ್ಷೆ ಬೇರೆ ತರಹ ಇದೆ. "ಕೆಜಿಎಫ್", "ಚಾರ್ಲಿ", "ಕಾಂತಾರ" ದಂತಹ ಚಿತ್ರಗಳ ಗೆಲುವು ಇದಕ್ಕೆ ಸಾಕ್ಷಿ. ನಾನು ಸೈಂಟಿಸ್ಟ್ ಆಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಆನಂತರ ಚಿತ್ರರಂಗಕ್ಕೆ ಬಂದೆ. ನಾನು "ಡಬಲ್ ಇಂಜಿನ್" ಚಿತ್ರದಲ್ಲಿ ನಟಿಸಬೇಕಾದರೆ ಶಶಿಕಾಂತ್ ಈ ಚಿತ್ರದ ಕಥೆ ಹೇಳಿದರು. ನನಗೂ ನೈಜಘಟನೆ ಆಧಾರಿತ ಚಿತ್ರದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಆ ಸಮಯದಲ್ಲಿ ಈ ಕಥೆ ಕೇಳಿ, ನಟಿಸಲು ಒಪ್ಪಿದೆ" ಎಂದರು ನಟ ಪ್ರಭು ಮುಂಡ್ಕರ್.

ಪ್ರಭು ಅವರ ಮೂಲಕ ನಿರ್ದೇಶಕ ಶಶಿಕಾಂತ್ ಗಟ್ಟಿ ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಆರತಿ ನಾಯರ್, ಲಕ್ಷ್ಮಣ್ ಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು