logo
ಕನ್ನಡ ಸುದ್ದಿ  /  ಮನರಂಜನೆ  /  ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆ; ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್, ಆತ್ಮಹತ್ಯೆ ಶಂಕೆ

ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆ; ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್, ಆತ್ಮಹತ್ಯೆ ಶಂಕೆ

Raghavendra M Y HT Kannada

Apr 30, 2024 10:14 AM IST

ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್ ಹಾಕಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    • ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್ ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್ ಹಾಕಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್ ಹಾಕಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪಾಟ್ನಾ: ಅನ್ನಪೂರ್ಣ ಎಂದೇ ಖ್ಯಾತರಾಗಿದ್ದ ಭೋಜ್‌ಪುರಿ ನಟಿ ಅಮೃತಾ ಪಾಂಡೆ (Amrita Pandey) ಬಿಹಾರದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದ ಶನಿವಾರ (ಏಪ್ರಿಲ್ 27) ಈ ಘಟನೆ ನಡೆದಿದ್ದು, ಸಾವಿಗೆ ಕೆಲವು ಗಂಟೆಗಳ ಮುನ್ನ ಈಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ನಿಗೂಢ ಸ್ಟೇಟಸ್ ಹಂಚಿಕೊಂಡಿದ್ದರು. 27 ವರ್ಷದ ನಟಿ ಅಮೃತಾ ಪಾಂಡೆ ಆದಂಪುರ ಶಿಪ್ ಘಾಟ್‌ನಲ್ಲಿರುವ ದಿವ್ಯಧರ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ.

ಟ್ರೆಂಡಿಂಗ್​ ಸುದ್ದಿ

‘ಪೌಡರ್‌’ ಕೊಟ್ಟು ಪವರ್‌ ಹೆಚ್ಚಿಸಲು ಹೊರಟ ಗುಲ್ಟು ನಿರ್ದೇಶಕ ಜನಾರ್ದನ್‌ ಚಿಕ್ಕಣ್ಣ; ನಗು ಉಕ್ಕಿಸುವ ಟೀಸರ್‌ ಬಿಡುಗಡೆ

ಶಿಳ್ಳೆ, ಕೇಕೆ, ಚಪ್ಪಾಳೆ.. ಬೆಳ್ಳಿತೆರೆ ಮೇಲೆ ಮತ್ತೆ ಮಿನುಗಿದ ಕಲ್ಟ್‌ ಕ್ಲಾಸಿಕ್‌ A ಚಿತ್ರ; ಥಿಯೇಟರ್‌ ಮುಂದೆ ಹಬ್ಬ ಮಾಡಿದ ಉಪ್ಪಿ ಫ್ಯಾನ್ಸ್

ನಮ್ಮ ಚಿತ್ರದ ಹೆಸರು ದಿ ಜಡ್ಜ್‌ಮೆಂಟ್‌ ಆಗಿರಬಹುದು, ಪ್ರೇಕ್ಷಕರು ಕೊಡುವ ಜಡ್ಜ್‌ಮೆಂಟೇ ನಮಗೆ ಅಂತಿಮ; ರವಿಚಂದ್ರನ್

ಕೊನೆಗೂ ಮದುವೆ ಮುನ್ಸೂಚನೆ ನೀಡಿ, ಫ್ಯಾನ್ಸ್‌ ತಲೆಗೆ ಹುಳ ಬಿಟ್ಟ ಡಾರ್ಲಿಂಗ್‌ ಪ್ರಭಾಸ್‌; ಅಷ್ಟಕ್ಕೂ ಹುಡುಗಿ ಯಾರಿರಬಹುದು?

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅಮೃತಾ ಪಾಂಡೆ ಖಿನ್ನತೆಯಿಂದ ಬಳಲುತ್ತಿದ್ದರು. ತನ್ನ ಸಿನಿ ಬದುಕಿನ ಬಗ್ಗೆ ತುಂಬಾ ಚಿಂತೆಗೊಳಲಾಗಿದ್ದರು ಎಂದು ವರದಿಯಾಗಿದೆ. ಅಮೃತಾ ಅವರ ಮಾನಸಿಕ ಆರೋಗ್ಯದ ಹಿಂದಿನ ಕಾರಣವೆಂದರೆ ಆಕೆಗೆ ಸಿನಿಮಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶ ಸಿಗುತ್ತಿರಲಿಲ್ಲ ಎಂದು ಅಮೃತಾ ಅವರ ಕುಟುಂಬದವರು ಹೇಳಿಕೊಂಡಿದ್ದಾರೆ.

ಅಮೃತಾ ಪಾಂಡೆ ಅವರು 2022 ರಲ್ಲಿ ಮುಂಬೈ ಮೂಲದ ಅನಿಷೇನ್ ಇಂಜಿನಿಯರ್ ಚಂದ್ರಮಣಿ ಜಂಗಡ್ ಎಂಬುವವನ್ನು ವಿವಾಹವಾಗಿದ್ದರು. ಅಮೃತಾ ಪತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು. ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಭಾಗಲ್ಪುರಕ್ಕೆ ಆಗಮಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ನಿಗೂಢವಾದ ಸ್ಟೇಟಸ್ ಹಾಕಿದ ನಂತರ ತಮ್ಮ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ