logo
ಕನ್ನಡ ಸುದ್ದಿ  /  ಮನರಂಜನೆ  /  ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಪ್ರಕಟ; ಶಾರೂಖ್‌ , ನಯನತಾರ ಸೇರಿದಂತೆ ಪ್ರಶಸ್ತಿ ಪುರಸ್ಕೃತರ ವಿವರ

ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಪ್ರಕಟ; ಶಾರೂಖ್‌ , ನಯನತಾರ ಸೇರಿದಂತೆ ಪ್ರಶಸ್ತಿ ಪುರಸ್ಕೃತರ ವಿವರ

Praveen Chandra B HT Kannada

Feb 21, 2024 06:54 AM IST

ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಪ್ರಕಟ

    • ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಪ್ರಕಟವಾಗಿದೆ. ಶಾರೂಖ್‌ ಖಾನ್‌ಗೆ ಅತ್ಯುತ್ತಮ ನಟ, ನಯನತಾರರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರಕಿದೆ. ಅನಿಮಲ್‌ ಸಿನಿಮಾದ ನಿರ್ದೇಶನಕ್ಕಾಗಿ ಸಂದೀಪ್‌ ರೆಡ್ಡಿ ವಾಂಗ ಅವರು ಬೆಸ್ಟ್‌ ಡೈರೆಕ್ಟರ್‌ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಪ್ರಕಟ
ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಪ್ರಕಟ

ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ 2024 ಪ್ರಕಟವಾಗಿದೆ. ಸಿನಿಮಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ದೊರಕಿದೆ. ನಿನ್ನೆ (ಫೆ 20) ನಡೆದ ಸುಂದರ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ ನಟಿಯರು ಮತ್ತು ನಿರ್ದೇಶಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಯಿತು. ಶಾರೂಖ್‌ ಖಾನ್‌ಗೆ ಅತ್ಯುತ್ತಮ ನಟ, ನಯನತಾರರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರಕಿದೆ. ಅಟ್ಲಿ ನಿರ್ದೇಶನದ ಜವಾನ್‌ ಸಿನಿಮಾದಲ್ಲಿ ಇವರಿಬ್ಬರ ನಟನೆಗೆ ಈ ಪ್ರಶಸ್ತಿ ನೀಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಅನಿಮಲ್‌ ಸಿನಿಮಾದ ನಿರ್ದೇಶನಕ್ಕಾಗಿ ಸಂದೀಪ್‌ ರೆಡ್ಡಿ ವಾಂಗ ಅವರು ಬೆಸ್ಟ್‌ ಡೈರೆಕ್ಟರ್‌ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಕರ್ನಾಟಕ ಮೂಲದ ರಶ್ಮಿಕಾ ಮಂದಣ್ಣ ಕೂಟ ನಟಿಸಿದ್ದಾರೆ. ರಣಬೀರ್‌ ಕಪೂರ್‌ ಮುಖ್ಯಪಾತ್ರದಲ್ಲಿ ನಟಿಸಿರುವ ಅನಿಮಲ್‌ ಸಿನಿಮಾವು ಜಾಗತಿಕ ಬಾಕ್ಸ್‌ ಆಫೀಸ್‌ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಬಾಬಿ ಡಿಯೋಲ್‌ಗೆ ನೆಗೆಟಿವ್‌ ರೋಲ್‌ಗಾಗಿ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಅನಿಮಲ್‌ ಸಿನಿಮಾದಲ್ಲಿ ಅಬ್ರಾರ್‌ ಆಗಿ ಇವರು ನಟಿಸಿದ್ದರು. ಈ ಸಿನಿಮಾದಲ್ಲಿ ಅತ್ಯುತ್ತಮ ನಟನೆಗಾಗಿ ಬಾಬಿ ಡಿಯೋಲ್‌ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪಡೆದಿದ್ದಾರೆ.

ಇದೇ ಸಂದರ್ಭದಲ್ಲಿ ಮಾರ್ಷಲ್‌ ಸ್ಯಾಮ್‌ ಮಾನೇಕ್‌ಶಾ ಅವರ ಜೀವಚರಿತ್ರೆಯ ವಿಕ್ಕಿ ಕೌಶಲ್‌ ನಟನೆಯ ಶ್ಯಾಮ್‌ ಬಹದ್ಧೂರ್‌ ಸಿನಿಮಾಕ್ಕೂ ಪ್ರಶಸ್ತಿ ದೊರಕಿದೆ. ಮೇಘ್ನಾ ಗುಲ್ಜಾರ್‌ ನಿರ್ದೇಶನದ ಶ್ಯಾಮ್‌ ಬಹದ್ಧೂರ್‌ ಸಿನಿಮಾದ ನಟ ವಿಕ್ಕಿ ಕೌಶಲ್‌ಗೆ ಅತ್ಯುತ್ತಮ ನಟ (ಕ್ರಿಟಿಕ್ಸ್‌) ಪ್ರಶಸ್ತಿ ದೊರಕಿದೆ.

ದಾದಾ ಸಾಹೇಬ್‌ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಬಗ್ಗೆ

ಇದು ಸಿನಿಮಾ ಕ್ಷೇತ್ರದ ಸಾಧಕರಿಗೆ ಪ್ರತಿವರ್ಷ ನೀಡುವ ಭಾರತದ ಅತ್ಯುನ್ನತ ಪ್ರಶಸ್ತಿಯಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸ್ಥಾಪಿಸಿದ ಚಲನಚಿತ್ರೋತ್ಸವಗಳ ನಿರ್ದೇಶನಾಲಯ ಈ ಪ್ರಶಸ್ತಿ ನೀಡುತ್ತದೆ. 1969 ರಲ್ಲಿ ಮೊದಲ ಬಾರಿಗೆ ದಾದಾ ಸಾಹೇಬ್‌ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪರಿಚಯಿಸಲಾಯಿತು. ದಾದಾ ಸಾಹೇಬ್‌ ಫಾಲ್ಕೆ ಅವರನ್ನು ಭಾರತದ ಸಿನಿಮಾದ ಪಿತಾಮಹ ಎಂದು ಕರೆಯಲಾಗುತ್ತದೆ. ಭಾರತದ ಮೊದಲ ಪೂರ್ಣ ಪ್ರಮಾಣದ ರಾಜಾ ಹರಿಶ್ಚಂದ್ರ (1913) ಸಿನಿಮಾವನ್ನು ದಾದಾ ಸಾಹೇಬ್‌ ಫಾಲ್ಕೆ ನಿರ್ಮಿಸಿದ್ದರು.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ