logo
ಕನ್ನಡ ಸುದ್ದಿ  /  ಮನರಂಜನೆ  /  Dunki Day 7 Collection: ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ‘ಡಂಕಿ’ ತ್ರಿಶತಕ; ಬೊಕ್ಕಸಕ್ಕೆ ಹರಿದು ಬಂದು 305 ಕೋಟಿ

Dunki Day 7 Collection: ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ‘ಡಂಕಿ’ ತ್ರಿಶತಕ; ಬೊಕ್ಕಸಕ್ಕೆ ಹರಿದು ಬಂದು 305 ಕೋಟಿ

Dec 28, 2023 08:38 PM IST

Dunki Day 7 Collection: ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ಡಂಕಿ ತ್ರಿಶತಕ; ಬೊಕ್ಕಸಕ್ಕೆ ಹರಿದು ಬಂತು 305 ಕೋಟಿ

    • ಶಾರುಖ್‌ ಖಾನ್‌ ಡಂಕಿ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ತ್ರಿಶತಕ ಬಾರಿಸಿದೆ. ಅಂದರೆ, ಬಿಡುಗಡೆ ಆದ ಏಳು ದಿನಗಳಲ್ಲಿ 305 ಕೋಟಿ ರೂ. ಗಳಿಸಿದೆ. ಶಾರುಖ್‌ ಅವರ ಈ ಹಿಂದಿನ ಜವಾನ್‌ ಮತ್ತು ಪಠಾಣ್‌ ಸಿನಿಮಾಗಳು ಸಾವಿರ ಕೋಟಿಯ ಗಡಿ ದಾಟಿದ್ದವು. 
Dunki Day 7 Collection: ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ಡಂಕಿ ತ್ರಿಶತಕ; ಬೊಕ್ಕಸಕ್ಕೆ ಹರಿದು ಬಂತು 305 ಕೋಟಿ
Dunki Day 7 Collection: ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ಡಂಕಿ ತ್ರಿಶತಕ; ಬೊಕ್ಕಸಕ್ಕೆ ಹರಿದು ಬಂತು 305 ಕೋಟಿ

Dunki Day 7 Collection: ಬಾಲಿವುಡ್ ಬಾದ್ ಷಾ ಶಾರುಖ್​ ಖಾನ್​ ಅಭಿನಯದ ಡಂಕಿ ಸಿನಿಮಾ ಬಿಡುಗಡೆಯಾಗಿ 7 ದಿನ ಕಳೆದಿದೆ. ಡಿಸೆಂಬರ್​ 21ರಂದು ಈ ಚಿತ್ರ ಬಿಡುಗಡೆ ಆಗಿತ್ತು. ಕ್ಲಾಸ್​ ಸಿನಿಮಾ ಆದ್ದರಿಂದ ಡಂಕಿ ನಿಧಾನಗತಿಯಲ್ಲಿ ಕಲೆಕ್ಷನ್​ ಮಾಡಿದೆ. ಒಟ್ಟು ಏಳು ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್​ 305 ಕೋಟಿ ರೂಪಾಯಿ ಆಗಿದ್ದು, ಭಾರತದಲ್ಲಿಯೇ 150 ಬಾಚಿಕೊಂಡಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಗಾಯಗೊಂಡ ನಟಿ ಐಶ್ವರ್ಯಾ ರೈ ಕೈಬಿಟ್ಟು ನಡೆಯಲೊಪ್ಪದ ಆರಾಧ್ಯ ಬಚ್ಚನ್‌; ಮಗಳೆಂದರೆ ಹೀಗಿರಬೇಕು ಅಂದ್ರು ಫ್ಯಾನ್ಸ್‌

ಶಾರುಖ್ ಈ ಹಿಂದಿನ ಸಿನಿಮಾಗಳಾದ ಪಠಾಣ್ ಹಾಗೂ ಜವಾನ್ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿದ್ದವು. ಈ ಎರಡು ಚಿತ್ರಗಳು 1000 ಕೋಟಿ ಕ್ಲಬ್ ಸೇರಿದ್ದವು. ಅದರಂತೆ ಡಂಕಿ ಸಿನಿಮಾವೂ ಅದ್ಭುತ ಪ್ರದರ್ಶನ ಕಾಣುತ್ತಿದೆ. ರಿಲೀಸ್ ಆದ ಮೊದಲ ದಿನವೇ 29 ಕೋಟಿ ಕಲೆಕ್ಷನ್ ಮಾಡಿದ್ದ ಚಿತ್ರ ಹಂತ ಹಂತವಾಗಿ ಒಳ್ಳೆ ಮೊತ್ತವನ್ನೇ ತನ್ನದಾಗಿಸಿಕೊಂಡಿದೆ. ಆದರೆ, ಜವಾನ್‌ ಮತ್ತು ಪಠಾಣ್‌ ದಾಖಲೆ ಮುರಿಯುವುದು ಕಷ್ಟವೇ ಸರಿ.

'ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ಡಂಕಿ ಸಿನಿಮಾದಲ್ಲಿ ತೋರಿಸಲಾಗಿದೆ.

ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ರಾಜ್ ಕುಮಾರ್ ಹಿರಾನಿ ಹಾಗೂ ಶಾರುಖ್ ಕಾಂಬಿನೇಷನ್ ವರ್ಕೌಟ್ ಆಗಿದ್ದು, ಪ್ರೇಕ್ಷಕರು ಈ ಜೋಡಿಯ ಸಿನಿಮಾಗೆ ಜೈಕಾರ ಹಾಕುತ್ತಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ