logo
ಕನ್ನಡ ಸುದ್ದಿ  /  ಮನರಂಜನೆ  /  Ccl 2024: ಮೊದಲ ಪಂದ್ಯದಲ್ಲಿ ಭರ್ಜರಿ ಗೆಲವು ದಾಖಲಿಸಿದ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್; ಡಾರ್ಲಿಂಗ್ ಕೃಷ್ಣ ಅಮೋಘ ಅರ್ಧ ಶತಕ

CCL 2024: ಮೊದಲ ಪಂದ್ಯದಲ್ಲಿ ಭರ್ಜರಿ ಗೆಲವು ದಾಖಲಿಸಿದ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್; ಡಾರ್ಲಿಂಗ್ ಕೃಷ್ಣ ಅಮೋಘ ಅರ್ಧ ಶತಕ

Praveen Chandra B HT Kannada

Feb 26, 2024 11:14 AM IST

CCL 2024: ಮೊದಲ ಪಂದ್ಯದಲ್ಲಿ ಭರ್ಜರಿ ಗೆಲವು ದಾಖಲಿಸಿದ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್

    • CCL 2024: ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯಾವಳಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತನ್ನ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿದೆ. ರಿತೇಶ್ ದೇಶ್‌ಮುಖ್ ನಾಯಕತ್ವದ ಮುಂಬೈ ಹೀರೋಸ್ ವಿರುದ್ಧ ಕಿಚ್ಚ ಸುದೀಪ್ ತಂಡವು ಭರ್ಜರಿ 38 ರನ್‌ಗಳ ಗೆಲುವು ಸಾಧಿಸಿದೆ.
CCL 2024: ಮೊದಲ ಪಂದ್ಯದಲ್ಲಿ ಭರ್ಜರಿ ಗೆಲವು ದಾಖಲಿಸಿದ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್
CCL 2024: ಮೊದಲ ಪಂದ್ಯದಲ್ಲಿ ಭರ್ಜರಿ ಗೆಲವು ದಾಖಲಿಸಿದ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯಾವಳಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತನ್ನ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿದೆ. ರಿತೇಶ್ ದೇಶ್‌ಮುಖ್ ನಾಯಕತ್ವದ ಮುಂಬೈ ಹೀರೋಸ್ ವಿರುದ್ಧ ಕಿಚ್ಚ ಸುದೀಪ್ ತಂಡವು ಭರ್ಜರಿ 38 ರನ್‌ಗಳ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. 20 ಓವರ್ ಗಳ ಪಂದ್ಯವನ್ನ ಎರಡು ಇನ್ನಿಂಗ್ಸ್‌ಗಳಲ್ಲಿ ಆಡಿಸಲಾಗುತ್ತದೆ. ಪ್ರತಿ ಇನ್ನಿಂಗ್ಸ್‌ನಲ್ಲಿ 10 ಓವರ್ ಇರುತ್ತದೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಮೊದಲ ಇನ್ನಿಂಗ್ಸ್ : ಹಿನ್ನಡೆ ಅನುಭವಿಸಿದ ಕಿಚ್ಚನ ಟೀಮ್

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 70 ರನ್ ಮಾತ್ರ ಗಳಿಸಿತು. ಇದಕ್ಕೆ ಉತ್ತರವಾಗಿ ಮುಂಬೈ ಹೀರೋಸ್ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 76 ರನ್ ಗಳಿಸುವ ಮೂಲಕ 6 ರನ್‌ಗಳ ಮುನ್ನಡೆ ಪಡೆದುಕೊಂಡರು. ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್ಸ್ 5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 43 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು.

ಅರ್ಧ ಶತಕ‌ ದಾಖಲಿಸಿದ ಡಾರ್ಲಿಂಗ್ ಕೃಷ್ಣ

ಈ ಹಂತದಲ್ಲಿ ಕ್ರೀಸ್‌ಗೆ ಬಂದ ಡಾರ್ಲಿಂಗ್ ಕೃಷ್ಣ ಮುಂಬೈ ಹೀರೋಸ್ ಬೌಲರ್ ಗಳನ್ನು ಅಕ್ಷರಶಃ ಕಾಡಿದರು ..ಕೇವಲ 18 ಎಸೆತಗಳಲ್ಲಿ 6 ಸಿಕ್ಸರ್ 55 ರನ್ ಗಳಿಸಿ ಔಟಾಗದೇ ಉಳಿದರು. ಮತ್ತೊಂದೆಡೆ ಜೆಕೆ ಕೂಡ 27 ಎಸೆತಗಳಲ್ಲಿ 45 ರನ್ ಕಲೆಹಾಕಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ 10 ಓವರ್ ಗಳಲ್ಲಿ 129 ರನ್ ಕಲೆಹಾಕುವ ಮೂಲಕ ಮುಂಬೈ ಹೀರೋಸ್ ತಂಡಕ್ಕೆ 124 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತು.

ಮುಂಬೈ ಬ್ಯಾಟರ್ ಗಳ ಪರದಾಟ ಕರ್ನಾಟಕಕ್ಕೆ ಭರ್ಜರಿ ಜಯ

ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲು ಪರದಾಡಿದ ಮುಂಬೈ ಹೀರೋಸ್ 10 ಓವರ್ ಗಳಲ್ಲಿ ಕೇವಲ 86 ರನ್ ಗಳಿಸುವ ಮೂಲಕ 38 ರನ್‌ಗಳಿಂದ ಸೋಲನುಭವಿಸಿತು.

ಆಡಿದ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಮುಂದಿನ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 2 ರಂದು ನಡೆಯಲಿದೆ.

ಸಿಸಿಎಲ್ 10ನೇ ಸೀಸನ್ ಫೆಬ್ರವರಿ 23 ರಿಂದ ಆರಂಭವಾಗಿದ್ದು, ಮಾರ್ಚ್ 17 ರವರೆಗೆ ನಡೆಯಲ್ಲಿದೆ..ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪರ್ಸ್ಟಾರ್ಗಳನ್ನು ಒಳಗೊಂಡಿರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಯುಎಇಯ ಶಾರ್ಜಾದಲ್ಲಿ ಲೀಗ್ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ.

  • ವರದಿ: ಮನೋಜ್ ವಿಜಯೀಂದ್ರ

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ