Hayavadana Debut movie: ಶಿವರಾಜ್‌ಕುಮಾರ್ ಸಿನಿಮಾ ಹಾಡಿನ ಸಾಲುಗಳೇ ಹಯವದನ ಚೊಚ್ಚಲ ನಿರ್ದೇಶನದ ಚಿತ್ರದ ಟೈಟಲ್...!
Jan 31, 2023 08:21 PM IST
ಹಯವದನ ನಿರ್ದೇಶನದ ಮೊದಲ ಸಿನಿಮಾ 'ಎಲ್ಲೋ ಜೋಗಪ್ಪ ನಿನ್ನರಮನೆ'
- ಸಿನಿಮಾ ತಂಡ ಈಗಾಗಲೇ ಸ್ಕ್ರಿಪ್ಟ್ ಪೂಜೆ ಮುಗಿಸಿ ಚಿತ್ರೀಕರಣ ಆರಂಭಿಸಿದೆ. ಇದು ಸೋಷಿಯಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಸಿನಿಮಾ . ಸಾಮಾಜಿಕ ಜಾಲತಾಣಕ್ಕೆ ಅಡಿಕ್ಟ್ ಆಗಿರುವ ಮಕ್ಕಳು ಮತ್ತು ಕಷ್ಟಪಟ್ಟು ದುಡಿದು ಬದುಕು ಕಟ್ಟಿಕೊಂಡಿರುವ ಪೋಷಕರ ನಡುವಿನ ಜನರೇಷನ್ ಗ್ಯಾಪನ್ನು ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ.
ಕಿರುತೆರೆಯಲ್ಲಿ ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ ಇದೀಗ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್‌ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರಕ್ಕೆ ಟೈಟಲ್ ಫಿಕ್ಸ್ ಮಾಡಲಾಗಿದ್ದು ಚಿತ್ರೀಕರಣ ಕೂಡಾ ಆರಂಭವಾಗಿದೆ.
ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಯವದನ ಅನೇಕ ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಮೊದಲ ಬಾರಿಗೆ ಬೆಳ್ಳಿತೆರೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಿಡುಗಡೆ ಆಗಿರುವ ಚಿತ್ರದ ಪೋಸ್ಟರ್ ಗಮನ ಸೆಳೆಯುತ್ತಿದೆ. ಸಿನಿಮಾ ಹಾಡುಗಳನ್ನು ಚಿತ್ರದ ಟೈಟಲ್ ಆಗಿ ಬಳಸುವುದು ಈಗ ಟ್ರೆಂಡ್ ಆಗಿದೆ. ಇದೀಗ ಹಯವದನ ತಮ್ಮ ಚಿತ್ರಕ್ಕೆ ಶಿವರಾಜ್‌ಕುಮಾರ್ ಅಭಿನಯದ 'ಜೋಗಿ' ಚಿತ್ರದ ಹಾಡಿನ ಸಾಲುಗಳನ್ನೇ ಟೈಟಲ್ ಆಗಿ ಫಿಕ್ಸ್ ಮಾಡಿದ್ದಾರೆ. 'ಎಲ್ಲೋ ಜೋಗಪ್ಪ ನಿನ್ನರಮನೆ' ಎಂಬುದು ಈ ಚಿತ್ರದ ಟೈಟಲ್. ಈ ಚಿತ್ರದಲ್ಲಿ 'ಕಂಬ್ಳಿಹುಳ' ಸಿನಿಮಾ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸುತ್ತಿದ್ದಾರೆ.
ಸಿನಿಮಾ ತಂಡ ಈಗಾಗಲೇ ಸ್ಕ್ರಿಪ್ಟ್ ಪೂಜೆ ಮುಗಿಸಿ ಚಿತ್ರೀಕರಣ ಆರಂಭಿಸಿದೆ. ಇದು ಸೋಷಿಯಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಸಿನಿಮಾ . ಸಾಮಾಜಿಕ ಜಾಲತಾಣಕ್ಕೆ ಅಡಿಕ್ಟ್ ಆಗಿರುವ ಮಕ್ಕಳು ಮತ್ತು ಕಷ್ಟಪಟ್ಟು ದುಡಿದು ಬದುಕು ಕಟ್ಟಿಕೊಂಡಿರುವ ಪೋಷಕರ ನಡುವಿನ ಜನರೇಷನ್ ಗ್ಯಾಪನ್ನು ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಸಿನಿಮಾದಲ್ಲಿ ಪ್ರೇಮಕಥೆ ಕೂಡಾ ಇದ್ದು, ಯುವಕರಿಗೆ ಸ್ಪಂದಿಸುವ, ಸ್ಪೂರ್ತಿಯಾಗುವ ಕಥೆ ಕೂಡಾ ಇದೆ. ಅಪ್ಪ ಮಗನ ಸೆಂಟಿಮೆಂಟ್ ಈ ಚಿತ್ರದ ಪ್ರಮುಖ ಹೈಲೈಟ್. ಅಪ್ಪನ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ 'ಎಲ್ಲೋ ಜೋಗಪ್ಪ ನಿನ್ನರಮನೆ' ಚಿತ್ರದಲ್ಲಿದೆ. ಲವ್ ಟ್ರ್ಯಾಕ್, ಕಾಮಿಡಿ, ಭಾವನಾತ್ಮಕ ಜರ್ನಿ ಒಳಗೊಂಡ ಕಥಾಹಂದರ ಕೂಡಾ ಈ ಸಿನಿಮಾದಲ್ಲಿದೆ.
ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ಸ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ಅಡಿ ಪವನ್ ಸಿಮಿಕೇರಿ ಮತ್ತು ಹಯವದನ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನ ಈ ಚಿತ್ರಕ್ಕೆ ಇದೆ. ನಾಯಕಿ, ಹಾಗೂ ಇತರ ಕಲಾವಿದರ ಆಯ್ಕೆ ಶೀಘ್ರದಲ್ಲೇ ನಡೆಯಲಿದ್ದು ಮುಂದಿನ ದಿನಗಳಲ್ಲಿ ಇದರ ಬಗ್ಗೆ ಮಾಹಿತಿ ಹಂಚಿಕೊಳುತ್ತೇನೆ ಎಂದು ನಿರ್ದೇಶಕ ಹಯವದನ ಹೇಳಿದ್ದಾರೆ. ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮಿ ನಾಡಗೌಡ, ದಿನೇಶ್ ಮಂಗಳೂರು, ಬಿರಾದರ್ ಸೇರಿದಂತೆ ಹಲವು ಕಲಾವಿದರು 'ಎಲ್ಲೋ ಜೋಗಪ್ಪ ನಿನ್ನರಮನೆ' ಚಿತ್ರದಲ್ಲಿ ನಟಿಸಿದ್ದಾರೆ.