logo
ಕನ್ನಡ ಸುದ್ದಿ  /  ಮನರಂಜನೆ  /  Fighter Ott Release: ಹೃತಿಕ್‌ ರೋಷನ್‌ ನಟನೆಯ ಫೈಟರ್‌ ಸಿನಿಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆ? ಇಲ್ಲಿದೆ ವಿವರ

Fighter OTT Release: ಹೃತಿಕ್‌ ರೋಷನ್‌ ನಟನೆಯ ಫೈಟರ್‌ ಸಿನಿಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆ? ಇಲ್ಲಿದೆ ವಿವರ

Praveen Chandra B HT Kannada

Feb 13, 2024 11:05 AM IST

ಫೈಟರ್‌ ಸಿನಿಮಾ ಒಟಿಟಿ ಬಿಡುಗಡೆ ವಿವರ

    • ನೆಟ್‌ಫ್ಲಿಕ್ಸ್‌ನಲ್ಲಿ ಮಾರ್ಚ್‌ 21ರಂದು ಫೈಟರ್‌ ಸಿನಿಮಾ ಬಿಡುಗಡೆಯಾಗಲಿದೆ ಎಂದು ವರದಿಗಳು ತಿಳಿಸಿವೆ. ಈಗಾಗಲೇ ಒಟಿಟಿಯಲ್ಲಿ ಹಲವು ಹೊಸ ಸಿನಿಮಾಗಳು ರಿಲೀಸ್‌ ಆಗಿವೆ. ಅನಿಮಲ್‌, ಗುಂಟೂರು ಕಾರಂ, ಕೈವ, ಕನ್ನಡದ ಗರಡಿ, ಮರೀಚಿ ಕೂಡ ಒಟಿಟಿಯಲ್ಲಿ ಸ್ಟ್ರೀಮ್‌ ಆಗುತ್ತಿವೆ.
ಫೈಟರ್‌ ಸಿನಿಮಾ ಒಟಿಟಿ ಬಿಡುಗಡೆ ವಿವರ
ಫೈಟರ್‌ ಸಿನಿಮಾ ಒಟಿಟಿ ಬಿಡುಗಡೆ ವಿವರ

ಬಾಲಿವುಡ್‌ನ ಬ್ಲಾಕ್‌ಬಸ್ಟರ್‌ ಸಿನಿಮಾ "ಫೈಟರ್‌" ಈಗಲೂ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಹೃತಿಕ್‌ ರೋಷನ್‌ ಮತ್ತು ದೀಪಿಕಾ ಪಡುಕೋಣೆ ನಟನೆಯ ಫೈಟರ್‌ ಸಿನಿಮಾವು ಕಳೆದ ತಿಂಗಳು ಬಿಡುಗಡೆಯಾಗಿತ್ತು. ಇಲ್ಲಿಯವರೆಗೆ ಬಾಕ್ಸ್‌ ಆಫೀಸ್‌ನಲ್ಲಿ 340 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

ಇದೀಗ ಫೈಟರ್‌ ಸಿನಿಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ. ವರದಿಗಳ ಪ್ರಕಾರ ಮಾರ್ಚ್‌ 21ರಂದು ಫೈಟರ್‌ ಸಿನಿಮಾವು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರಗೊಳ್ಳಲಿದೆ. ನೆಟ್‌ಫ್ಲಿಕ್ಸ್‌ ಈ ಕುರಿತು ಇನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.

ಹೃತಿಕ್‌ ರೋಷನ್‌ ನಟನೆಯ ಫೈಟರ್‌ ಸಿನಿಮಾವು ಪ್ರೇಕ್ಷಕರಿಂದ ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯುತ್ತಿದೆ. ಗಲ್ಲಾಪೆಟ್ಟಿಗೆಯಲ್ಲೂ ಪರವಾಗಿಲ್ಲ ಎನ್ನುವಂತೆ ಉತ್ತಮವಾಗಿ ವಹಿವಾಟು ನಡೆಸುತ್ತಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಚಿತ್ರದಲ್ಲಿ ಅನಿಲ್ ಕಪೂರ್, ಕರಣ್ ಸಿಂಗ್ ಗ್ರೋವರ್ ಮತ್ತು ಅಕ್ಷಯ್ ಒಬೆರಾಯ್ ನಟಿಸಿದ್ದಾರೆ.

ಫೈಟರ್‌ ಸಿನಿಮಾಆದಲ್ಲಿ ಹೃತಿಕ್ ಸ್ಕ್ವಾಡ್ರನ್ ಲೀಡರ್ ಶಂಶೇರ್ ಪಠಾನಿಯಾ ಅಲಿಯಾಸ್ ಪ್ಯಾಟಿಯಾಗಿ, ದೀಪಿಕಾ ಸ್ಕ್ವಾಡ್ರನ್ ಲೀಡರ್ ಮಿನಾಲ್ ರಾಥೋಡ್ ಅಕಾ ಮಿನ್ನಿಯಾಗಿ ಮತ್ತು ಅನಿಲ್ ದೇಶಕ್ಕಾಗಿ ಹೋರಾಡುವ ಗ್ರೂಪ್ ಕ್ಯಾಪ್ಟನ್ ರಾಕೇಶ್ ಜೈ ಸಿಂಗ್ ಅಲಿಯಾಸ್ ರಾಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ಹೃತಿಕ್ ಮತ್ತು ದೀಪಿಕಾ ಪಡುಕೋಣೆ ಜತೆಯಾಗಿ ನಟಿಸಿದ್ದಾರೆ. ದೇಶದಲ್ಲಿ ಫೈಟರ್‌ ಸಿನಿಮಾವು 150 ಕೋಟಿ ರೂ. ಕ್ಲಬ್‌ಗೆ ಪ್ರವೇಶಿಸಿದೆ. ಜಾಗತಿಕವಾಗಿ 300 ಕೋಟಿ ರೂ.ಗಿಂತಲೂ ಹೆಚ್ಚು ಗಳಿಕೆ ಮಾಡಿದೆ.

ಅನಿಲ್ ಕಪೂರ್, ಕರಣ್ ಸಿಂಗ್ ಗ್ರೋವರ್, ಅಕ್ಷಯ್ ಒಬೆರಾಯ್, ಸಂಜೀದಾ ಶೇಖ್, ತಲತ್ ಅಜೀಜ್, ಸಂಜೀವ್ ಜೈಸ್ವಾಲ್, ರಿಷಭ್ ಸಾಹ್ನಿ ಮತ್ತು ಅಶುತೋಷ್ ರಾಣಾ ಕೂಡ ನಟಿಸಿದ್ದಾರೆ. ಮಾರ್ಫ್ಲಿಕ್ಸ್‌ ಫಿಕ್ಚರ್ಸ್‌ ಜೆ ವಿಯಾಕಾಮ್‌18 ಸ್ಟುಡಿಯೋಸ್‌ ಈ ಸಿನಿಮಾ ನಿರ್ಮಾಣ ಮಾಡಿದೆ. ಭಾರತೀಯ ವಾಯುಪಡೆಯ ಸಾಹಸ, ದೇಶಭಕ್ತಿ ಇತ್ಯಾದಿ ವಿಷಯಗಳು ಚಿತ್ರದಲ್ಲಿದೆ. ಫೈಟರ್‌ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮವಾಗಿ ಗಳಿಕೆ ಮಾಡುತ್ತಿದೆ. ಆದರೆ, ಈ ಸಿನಿಮಾ ವಾಹ್‌ ಎನಿಸುವಂತಹ ಯಾವುದೇ ಕ್ರೇಜ್‌ ಹುಟ್ಟುಹಾಕಿಲ್ಲ. ಸಾಕಷ್ಟು ಜನರು ಥಿಯೇಟರ್‌ನಲ್ಲಿ ಫೈಟರ್‌ ನೋಡಿಲ್ಲದೆ ಇದ್ದರೂ, ಒಟಿಟಿಯಲ್ಲಿ ಬಂದಾಗ ನೋಡೋಣ ಎಂದುಕೊಂಡಿದ್ದಾರೆ.

ನೆಟ್‌ಫ್ಲಿಕ್ಸ್‌ನಲ್ಲಿ ಮಾರ್ಚ್‌ 21ರಂದು ಫೈಟರ್‌ ಸಿನಿಮಾ ಬಿಡುಗಡೆಯಾಗಲಿದೆ. ಅಂದರೆ, ಒಟಿಟಿ ಬಿಡುಗಡೆಗೆ ಇನ್ನೂ ಒಂದೂವರೆ ತಿಂಗಳಿದೆ. ಈಗಾಗಲೇ ಒಟಿಟಿಯಲ್ಲಿ ಹಲವು ಹೊಸ ಸಿನಿಮಾಗಳು ರಿಲೀಸ್‌ ಆಗಿವೆ. ಅನಿಮಲ್‌, ಗುಂಟೂರು ಕಾರಂ, ಕೈವ, ಕನ್ನಡದ ಗರಡಿ, ಮರೀಚಿ ಕೂಡ ಒಟಿಟಿಯಲ್ಲಿ ಸ್ಟ್ರೀಮ್‌ ಆಗುತ್ತಿವೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ