logo
ಕನ್ನಡ ಸುದ್ದಿ  /  ಮನರಂಜನೆ  /  Gumti Trailer: ’ಗುಂಮ್ಟಿ’ ಸಿನೆಮಾ ಟ್ರೇಲರ್ ಬಿಡುಗಡೆ; ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ

Gumti Trailer: ’ಗುಂಮ್ಟಿ’ ಸಿನೆಮಾ ಟ್ರೇಲರ್ ಬಿಡುಗಡೆ; ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ

Suma Gaonkar HT Kannada

Nov 20, 2024 06:02 PM IST

google News

ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ

    • ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ
ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ

ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ‘ಗುಂಮ್ಟಿ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ. ‘ಗುಂಮ್ಟಿ’ ಸಿನೆಮಾದ ನಿರ್ಮಾಪಕ ವಿಕಾಸ್ ಎಸ್. ಶೆಟ್ಟಿ, ‘ಬಾಲ್ಯದಿಂದಲೂ ನಮ್ಮ ಸುತ್ತಮುತ್ತ ಕಂಡ ಜಾನಪದ ಕಲೆಯೊಂದನ್ನು ಈ ಸಿನೆಮಾದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಿದ್ದಾರೆ. ಎಲ್ಲರಿಗೂ ಈ ಸಿನೆಮಾದ ಕಥಾಹಂದರ ಇಷ್ಟವಾಗಲಿದೆ ಮನಮುಟ್ಟುತ್ತದೆ ಎಂಬ ವಿಶ್ವಾಸವನ್ನು ಅವರು ಹೊಂದಿದ್ದಾರೆ.

ಗುಂಮ್ಟಿ ಇದು ಸಂಸ್ಕ್ರತಿಯ ಕಥೆ

ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನೆಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನೆಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ‘ಗುಂಮ್ಟಿ’ ಸಿನೆಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದು, ಜೊತೆಗೆ ತೆರೆಮೇಲೆ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ.

ಕುಡುಬಿ ಜನಾಂಗದ ಸಂಪ್ರದಾಯ

ನಿರ್ದೇಶಕ ಕಂ ನಾಯಕ ನಟ ಸಂದೇಶ್ ಶೆಟ್ಟಿ ಆಜ್ರಿ, ‘ಇದೊಂದು ಕಲಾತ್ಮಕ ಸಿನೆಮಾವಾಗಿದ್ದು, ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ತೆರೆಮೇಲೆ ಹೇಳಲು ಹೊರಟಿದ್ದೇವೆೆ. ‘ಗುಂಮ್ಟಿ’ ಎಂಬುದು ಕುಡುಬಿ ಸಮುದಾಯಕ ಕಲಾಪ್ರಾಕಾರದ ಸಾಂಪ್ರದಾಯಿಕ ವಾದ್ಯವಾಗಿದ್ದು, ಅದನ್ನೇ ಸಿನೆಮಾದ ಟೈಟಲ್ ಆಗಿ ಇಟ್ಟುಕೊಂಡಿದ್ದೇವೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷ ‘ಗುಂಮ್ಟಿ’ ಸಿನಿಮಾದಲ್ಲಿ ಅನಾವರಣವಾಗಲಿದೆ’ ಎಂದು ಶೀರ್ಷಿಕೆ ಮತ್ತು ಕಥಾಹಂದವಾಗಿಸಿಕೊಂಡಿದ್ದೇವೆ ಎಂದಿದ್ದಾರೆ.

ಸಿನೆಮಾ ಬಿಡುಗಡೆಗೂ ಮೊದಲೇ ಎಲ್ಲ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಸುತ್ತಮುತ್ತ ಸುಮಾರು 24 ಕ್ಕೂ ಹೆಚ್ಚು ಪ್ರದರ್ಶನಗಳು ಮುಂಗಡವಾಗಿ ಬುಕ್ಕಿಂಗ್ ಆಗಿದೆ.

‘ಗುಂಮ್ಟಿ’ ಸಿನೆಮಾದಲ್ಲಿ ವೈಷ್ಣವಿ ನಾಡಿಗ್ ನಾಯಕಿಯಾಗಿ ಮಲ್ಲಿ ಎಂಬ ಹೆಸರಿನ ಕುಡುಬಿ ಸಮುದಾಯದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ತಸ್ಮೈ ಪ್ರೊಡಕ್ಷನ್ಸ್’ ಮತ್ತು ‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ‘ಗುಂಮ್ಟಿ’ ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ. ‘ಗುಂಮ್ಟಿ’ ಚಿತ್ರಕ್ಕೆ ಅನೀಶ್ ಡಿಸೋಜಾ ಛಾಯಾಗ್ರಹಣ, ಶಿವರಾಜ ಮೇಹು ಸಂಕಲನವಿದೆ. ‘ಗುಂಮ್ಟಿ’ ಸಿನೆಮಾದ ಹಾಡಿಗೆ ಡೊಂಡಿ ಮೋಹನ್ ಸಾಹಿತ್ಯ

‘ಗುಂಮ್ಟಿ’ ಸಿನೆಮಾವನ್ನು ಉಡುಪಿ, ಕುಂದಾಪುರ, ಕಾರವಾರ, ಶಿರಸಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 30ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ಸದ್ಯ ಯಶಸ್ವಿಯಾಗಿ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿರುವ ‘ಗುಂಮ್ಟಿ’ ಸೆನ್ಸಾರ್ ಮುಂದಿದೆ. ಇದೀಗ ಟ್ರೇಲರ್ ಬಿಡುಗಡೆ ಮೂಲಕ ‘ಗುಂಮ್ಟಿ’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಶೀಘ್ರದಲ್ಲಿಯೇ ‘ಗುಂಮ್ಟಿ’ಯನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ