‘ಕಾಲಾಯ ತಸ್ಮೈ ನಮಃ’ ಎಂದ ರಚಿತಾ ರಾಮ್; ನಟ ದರ್ಶನ್ ಬೇಲ್ ಪಡೆದು ಹೊರಬಂದ ಬೆನ್ನಲ್ಲೇ ವೈರಲ್ ಆಯ್ತು ವಿಡಿಯೋ
Oct 30, 2024 09:54 PM IST
‘ಕಾಲಾಯ ತಸ್ಮೈ ನಮಃ’ ಎಂದ ರಚಿತಾ ರಾಮ್
- ನಟ ದರ್ಶನ್‌ಗೆ ಬೇಲ್ ಸಿಕ್ಕ ಹಿನ್ನೆಲೆಯಲ್ಲೇ ರಚಿತಾ ರಾಮ್ ಅವರು ‘ಕಾಲಾಯ ತಸ್ಮೈ ನಮಃ’ ಎಂದು ವಿಡಿಯೋ ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್‌ಗೆ ಬೇಲ್ ಸಿಕ್ಕ ಹಿನ್ನೆಲೆ ಇಂದು ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಇನ್ನು ರಚಿತಾ ರಾಮ್ ಕೂಡ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ 'ಕಾಲಾಯ ತಸ್ಮೈ ನಮಃ' ಎಂದಷ್ಟೇ ಹೇಳಿದ್ದಾರೆ. ಆ ಚಿಕ್ಕ ವಿಡಿಯೋ ತುಣುಕಿಗೆ ಸಾಕಷ್ಟು ಪ್ರತಿಕ್ರಿಯೆ ಬರುತ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್ ಅವರು ಇಂದು ಮಧ್ಯಂತರ ಬೇಲ್ ಸಿಕ್ಕಿ ಜೈಲಿನಿಂದ ಹೊರ ಬಂದಿದ್ದಾರೆ. ಆರು ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದ ಅವರು ತಮ್ಮ ಬೆನ್ನು ನೋವಿನ ಚಿಕಿತ್ಸೆ ಪಡೆದುಕೊಳ್ಳಬೇಕಿದೆ.
ಆದರೆ ಅಭಿಮಾನಿಗಳಿಗೆ ಅವರು ಈ ಸಂದರ್ಭದಲ್ಲಿ ಜೈಲಿನಿಂದ ಹೊರ ಬಂದಿರುವುದು ದೀಪಾವಳಿ ಗಿಫ್ಟ್ ಸಿಕ್ಕಂತಾಗಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಆದೇಶ ಹೊರಡಿಸಿ ಅವರಿಗೆ ಮಧ್ಯಂತರ ಬೇಲ್ ನೀಡಿದ್ದಾರೆ. ದರ್ಶನ್ ಬಗ್ಗೆ ಸಾಕಷ್ಟು ಗೌರವ ಹಾಗೂ ಪ್ರೀತಿ ಇಟ್ಟುಕೊಂಡಿರುವ ರಚಿತಾ ಅವರು ಈ ಹಿಂದೆ ದರ್ಶನ್ ಅವರನ್ನು ಭೇಟಿ ಕೂಡ ಆಗಿದ್ದರು. ಈಗ ಅವರು ಹೊರಗಡೆ ಬಂದ ಖುಷಿಯಲ್ಲಿ ಈ ವಿಡಿಯೋ ಶೇರ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ನಗು ಮುಖ ಈವಾಗ ಎದ್ದು ಕಾಣ್ತಾ ಇದೇ ರಚ್ಚು ಎಂದು ಕೆಲ ಅಭಿಮಾನಿಗಳು ಖುಷಿಯಿಂದ ಕಾಮೆಂಟ್ ಮಾಡಿದರೆ, ಇನ್ನು ಕೆಲವರು ಇದು ಮಧ್ಯಂತರ ಬೇಲ್ ಅಷ್ಟೇ ಎಂದು ಹೇಳಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್‌ಗೆ ಬೇಲ್ ಸಿಕ್ಕಿರುವ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ತಾವು ಈ ಹಿಂದೆ ಕಾಮಾಕ್ಯ ದೇವಿ ದೇವಾಲಯಕ್ಕೆ ಭೇಟಿ ನೀಡಿದ್ದ ಫೋಟೋವನ್ನು ಮತ್ತೊಮ್ಮೆ ಹಂಚಿಕೊಂಡಿದ್ದಾರೆ. ಅವರ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ದೇವಾಲಯದ ಫೋಟೋವನ್ನು ಸ್ಟೋರಿ ಮಾಡಿಕೊಂಡಿದ್ದಾರೆ. ಸ್ಟೋರಿಯಲ್ಲಿ ಥ್ಯಾಂಕ್‌ಫುಲ್, ಗ್ರೇಟ್‌ಫುಲ್, ಬ್ಲೆಸ್ಡ್ ಎಂದು ಬರೆದುಕೊಂಡಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗಿನಿಂದ ಸಾಕಷ್ಟು ಬಾರಿ ಅವರು ಬೇರೆ ಬೇರೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಹೀಗಾಗಿ ದರ್ಶನ್ ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ಸಿಕ್ಕಂತಾಗಿದೆ. ದರ್ಶನ್ ಅವರು ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೂ ಕರೆದೊಯ್ಯಲಾಗಿತ್ತು. ಅದರ ಬೆನ್ನಲ್ಲೇ ಈಗ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ದರ್ಶನ್ ಜಾಮೀನಿಗಾಗಿ ವಿಜಯಲಕ್ಷ್ಮಿ ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಅವರ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದೆ.