logo
ಕನ್ನಡ ಸುದ್ದಿ  /  ಮನರಂಜನೆ  /  Mynaa Kannada Serial: ಮೈಲಾರ ಕೋಟೆ ಮುತ್ತಣ್ಣನ ಮಗಳು ಈ ಮೈನಾ; ಉದಯ ಟಿವಿಯಲ್ಲಿ ಹೊಸ ಧಾರಾವಾಹಿ

Mynaa Kannada Serial: ಮೈಲಾರ ಕೋಟೆ ಮುತ್ತಣ್ಣನ ಮಗಳು ಈ ಮೈನಾ; ಉದಯ ಟಿವಿಯಲ್ಲಿ ಹೊಸ ಧಾರಾವಾಹಿ

Feb 13, 2024 07:03 PM IST

Mynaa Kannada Serial: ಮೈಲಾರ ಕೋಟೆ ಮುತ್ತಣ್ಣನ ಮಗಳು ಈ ಮೈನಾ; ಉದಯ ಟಿವಿಯಲ್ಲಿ ಹೊಸ ಧಾರಾವಾಹಿ

    • ಕನ್ನಡ ಚಿತ್ರರಂಗ ಕಂಡ ಹಿರಿಯ ನಿರ್ದೇಶಕ ಹಾಗೂ ನಟ ಟಿ.ಎಸ್‌ ನಾಗಾಭರಣ ಇದೀಗ ಕಿರುತೆರೆಗೆ ಆಗಮಿಸಿದ್ದಾರೆ. ಉದಯ ಟಿವಿಯಲ್ಲಿ ಪ್ರಸಾರ ಆರಂಭಿಸಲಿರುವ ಮೈನಾ ಧಾರಾವಾಹಿಯಲ್ಲಿ ಮೈಲಾರ ಕೋಟೆ ಮುತ್ತಣ್ಣನಾಗಿದ್ದಾರೆ. ಲಕ್ಷಣ ಸೀರಿಯಲ್‌ ನಟಿ ವಿಜಯಲಕ್ಷ್ಮೀ ಶೀರ್ಷಿಕೆ ಪಾತ್ರವನ್ನು ನಿಭಾಯಿಸಲಿದ್ದಾರೆ.  
Mynaa Kannada Serial: ಮೈಲಾರ ಕೋಟೆ ಮುತ್ತಣ್ಣನ ಮಗಳು ಈ ಮೈನಾ; ಉದಯ ಟಿವಿಯಲ್ಲಿ ಹೊಸ ಧಾರಾವಾಹಿ
Mynaa Kannada Serial: ಮೈಲಾರ ಕೋಟೆ ಮುತ್ತಣ್ಣನ ಮಗಳು ಈ ಮೈನಾ; ಉದಯ ಟಿವಿಯಲ್ಲಿ ಹೊಸ ಧಾರಾವಾಹಿ

Mynaa Kannada Serial: ಕನ್ನಡದ ಹಿರಿನ ನಟ ಹಾಗೂ ನಿರ್ದೇಶಕ ಟಿ. ಎಸ್‌ ನಾಗಾಭರಣ ಇದೀಗ ಮತ್ತೆ ಕಿರುತೆರೆಗೆ ಮರಳಿದ್ದಾರೆ. ಉದಯ ಟಿವಿಯಲ್ಲಿ ಶುರುವಾಗುತ್ತಿರುವ ಹೊಸ ಸೀರಿಯಲ್‌ನಲ್ಲಿ ಬಣ್ಣ ಹಚ್ಚಿದ್ದಾರೆ. ಇವರ ಜತೆಗೆ ಕಲರ್ಸ್‌ ಕನ್ನಡದಲ್ಲಿ ಈ ಹಿಂದೆ ಪ್ರಸಾರವಾಗುತ್ತಿದ್ದ ಲಕ್ಷಣ ಸೀರಿಯಲ್‌ನ ಮುಖ್ಯಭೂಮಿಕೆಯಲ್ಲಿದ್ದ ವಿಜಯಲಕ್ಷ್ಮೀ ಇದೀಗ ಮೈನಾ ಸೀರಿಯಲ್‌ ಮೂಲಕ ಆಗಮಿಸುತ್ತಿದ್ದಾರೆ. ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ ಈ ಧಾರಾವಾಹಿಯ ಪ್ರೋಮೋ ಈಗಾಗಲೇ ರಿಲೀಸ್‌ ಆಗಿದ್ದು, ಪ್ರಸಾರ ದಿನಾಂಕವೂ ನಿಗದಿಯಾಗಿದೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಕನ್ನಡ ಟೆಲಿವಿಷನ್‌ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಜನನಿ, ಗೌರಿಪುರದ ಗಯ್ಯಾಳಿಗಳು ಹೀಗೆ ಹಲವು ವೈವಿಧ್ಯಮಯ ನೈಜ ಕಥೆಗಳ ಸೀರಿಯಲ್‌ಗಳು ನೋಡುಗರ ಜನಮನ ಗೆದ್ದಿವೆ. ಇದೀಗ ಇದೇ ಬಳಗಕ್ಕೆ ಹೊಸ ಧಾರಾವಾಹಿಯೊಂದು ಸೇರ್ಪಡೆಗೊಳ್ಳುತ್ತಿದೆ. ಅದರ ಹೆಸರು ʼಮೈನಾʼ. ಫೆಬ್ರವರಿ 19ರಿಂದ ಪ್ರತಿದಿನ ರಾತ್ರಿ 9 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ.

ಮೈಲಾರಕೋಟೆ ಮೈನಾ ಮನೆಗೆ ಕಿರಿಮಗಳು. ಊರಲ್ಲಿ ಅಲೆಮಾರಿ, ಪರರಿಗೆ ಉಪಕಾರಿ. ಚಿಕ್ಕ ಪೆಟ್ಟಿಗೆ ಅಂಗಡಿ ನಡೆಸುತ್ತಿರುವ ನೀತಿವಂತ ಅಪ್ಪ ಮುತ್ತಣ್ಣ, ಅವರಿವರ ಹೊಲದಲ್ಲಿ ಕೂಲಿ ಮಾಡಿ ಸಂಸಾರದ ನೊಗಕ್ಕೆ ಹೆಗಲು ಕೊಟ್ಟಿರುವ ಅಮ್ಮ, ಸೀತೆಯಂಥ ಅಕ್ಕ ರಾಧೆ, ಕಾಲೇಜಿಗೆ ಹೋಗುತ್ತಿರುವ ಅಣ್ಣ. ಮೈನಾಳ ಪುಟ್ಟ ಗೂಡಲ್ಲಿ ದುಡ್ಡಿಗೆ ಕೊರತೆ; ಪ್ರೀತಿ ವಾತ್ಸಲ್ಯಕ್ಕಲ್ಲ.

ಅಕ್ಕ ರಾಧೆಗೆ ಮದುವೆ ವಯಸ್ಸು ಮೀರುತ್ತಿದೆ, ಸಂಬಂಧ ಕೂಡಿ ಬರುತ್ತಿಲ್ಲ. ಒಂದೊಂದು ಸಲವೂ ಒಂದೊಂದು ಕಾರಣಕ್ಕೆ ಮದುವೆ ಮುರಿದುಹೋಗುತ್ತಿದೆ. ಕೆಲವೊಂದು ಸಂಬಂಧ ಮುರಿಯಲು ಮೈನಾ ನೆಪವಾಗುತ್ತಾಳೆ. ಕಟ್ಟಕಡೆಯದಾಗಿ, ಜವಾಬ್ದಾರಿ ಹೊರಬೇಕಾದ ಅಣ್ಣನೇ ಕೈ ಕೊಟ್ಟು ಹೋದಾಗ ಕಿರಿಮಗಳಾದ ಮೈನಾ ಅಕ್ಕನ ಮದುವೆಯ ಹಿರಿಯ ಜವಾಬ್ದಾರಿ ಹೊತ್ತು ಪಟ್ಟಣಕ್ಕೆ ಹೊರಡುತ್ತಾಳೆ. ಅಲ್ಲಿಂದ ಅವಳ ಪ್ರಯಾಣ ಅನೂಹ್ಯ ತಿರುವುಗಳನ್ನು ಪಡೆದುಕೊಳ್ಳುತ್ತದೆ.

ಮೈನಾ ಪಾತ್ರದಲ್ಲಿ ಜನಪ್ರಿಯ ಕಲಾವಿದೆ ವಿಜಯಲಕ್ಷ್ಮಿ ನಟಿಸುತ್ತಿದ್ದಾರೆ. ನಾಗಾಭರಣ, ಅಪೂರ್ವ, ಅಂಜಲಿ, ಮಾನಸಿ ಜೋಶಿ, ಸಚಿನ್‌, ಸಿದ್ದಾರ್ಥ್‌, ಪ್ರಭಂಜನ, ಸಾಗರ್‌, ಹರ್ಷಾರ್ಜುನ್‌, ಯಶಸ್ವಿನಿ, ಆಶಾ, ಅನುಷಾ, ಕು. ತಿಶ್ಯ, ಮಾ. ಅರುಣ್‌, ಮಾ. ರಣವೀರ್ ಮುಂತಾದವರ ತಾರಾಗಣವಿದೆ. ಚಿತ್ರತಾರೆ ಭವ್ಯ ಅಪರೂಪದ ವಿಶಿಷ್ಟ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿರ್ದೇಶಕರು ಸಂತೋಷ್‌ ಗೌಡ ಹಾಸನ, ಛಾಯಾಗ್ರಹಣ ಜಗದೀಶ್‌ ವಾಲಿ ಹಾಗೂ ದಯಾಕರ್.‌ ಸಂಗೀತ, ಮಣಿಕಾಂತ ಕದ್ರಿ, ಸಾಹಿತ್ಯ, ಕೆ. ಕಲ್ಯಾಣ್, ಸಂಕಲನ ಪ್ರಕಾಶ ಕಾರಿಂಜ ನಿಭಾಯಿಸಲಿದ್ದಾರೆ. ಆನಂದ್‌ ಆಡಿಯೋ ಕಂಪನಿಯ ಸಹಸಂಸ್ಥೆ ʻಕೋಮಲ್‌ ಎಂಟರ್‌ಪ್ರೈಸಸ್‌ʼ ಬ್ಯಾನರ್‌ ಅಡಿ ಈ ಧಾರಾವಾಹಿ ನಿರ್ಮಾಣವಾಗುತ್ತಿದೆ. ಮಹಿಳೆಯರ ಆತ್ಮಬಲದ ಪ್ರತೀಕವಾಗಿ ʻಮೈನಾʼ ಮೂಡಿಬರಲಿದೆ ಎಂಬುದು ಉದಯ ಟಿವಿ ಕಾರ್ಯಕ್ರಮ ಮುಖ್ಯಸ್ಥರ ಮಾತು.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ