logo
ಕನ್ನಡ ಸುದ್ದಿ  /  Entertainment  /  Multi Starrer Kannada Hondisi Bareyiri Movie Release Date Locked

Hondisi Bareyiri Movie: ಕೊನೆಗೂ 'ಹೊಂದಿಸಿ ಬರೆಯಿರಿ'ಗೆ ಸಿಕ್ತು ಬಿಡುಗಡೆ ದಿನಾಂಕ.. ಇಲ್ಲಿದೆ ರಿಲೀಸ್‌ ಅಪ್‌ಡೇಟ್‌..

HT Kannada Desk HT Kannada

Sep 22, 2022 09:23 PM IST

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ 'ಹೊಂದಿಸಿ ಬರೆಯಿರಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ.

    • ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ 'ಹೊಂದಿಸಿ ಬರೆಯಿರಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ.
ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ 'ಹೊಂದಿಸಿ ಬರೆಯಿರಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ.
ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ 'ಹೊಂದಿಸಿ ಬರೆಯಿರಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ.

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ 'ಹೊಂದಿಸಿ ಬರೆಯಿರಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಬಹು ದೊಡ್ಡ ಹಾಗೂ ಕಲರ್ ಫುಲ್ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕಾರ್ತಿಕ್‌ ಜಯರಾಮ್‌ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಉಡುಗೊರೆ; ರಿಲೀಸ್‌ ಆಯ್ತು ಜೆಕೆ ನಟನೆಯ ದಿ ವೀರ್‌ ಸಿನಿಮಾದ ಫಸ್ಟ್‌ ಲುಕ್‌

ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ನಲ್ಲಿ ‘ಕೆಂಡ’ಕ್ಕೆ ಪ್ರಶಸ್ತಿ; ಸಹದೇವ್ ಕೆಲವಡಿಗೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಅವಾರ್ಡ್

ರಿಷಿಯ ‘ರುದ್ರ ಗರುಡ ಪುರಾಣ’ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌; ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ದೊಡ್ಮನೆ ಸೊಸೆ

ಮದುವೆಗೆ ಒಪ್ಪಿಗೆ ಸಿಕ್ಕರೂ, ರಾಮ್‌ ಜತೆ ಮಕ್ಕಳು ಮಾಡಿಕೊಳ್ಳಲ್ವಂತೆ ಸ್ವಾರ್ಥಿ ಸೀತಾ! ಸೀತಮ್ಮ ನಿಂದ್ಯಾಕೋ ಓವರ್‌ ಆಯ್ತಮ್ಮ ಎಂದ ವೀಕ್ಷಕ

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ 'ಹೊಂದಿಸಿ ಬರೆಯಿರಿ' ಸಿನಿಮಾ. ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ. ಈಗಾಗಲೇ ಚಿತ್ರದ ಸ್ಯಾಂಪಲ್ ಗಳ ಮೂಲಕ ಗಮನ ಸೆಳೆದಿರುವ ಈ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು ನವೆಂಬರ್ 18ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡಲು ಡೇಟ್ ಕನ್ಫರ್ಮ್ ಮಾಡಿದೆ ಚಿತ್ರತಂಡ.

ಚಿತ್ರದಲ್ಲಿ ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್ ನಲ್ಲಿ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ನಿರ್ದೇಶಕ ಜಗನ್ನಾಥ್ ಗಿದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ತಾವೇ ಮಾಡಿದ್ದಾರೆ.

ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ ನಿರ್ದೇಶನ, ಜೋ ಕೋಸ್ಟ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್ , ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು