logo
ಕನ್ನಡ ಸುದ್ದಿ  /  ಮನರಂಜನೆ  /  Paadaraya Title Poster: ‘ವಿಕ್ರಾಂತ್‌ ರೋಣ’ ಬಳಿಕ ‘ಪಾದರಾಯ’ ಸಿನಿಮಾ ಘೋಷಿಸಿದ ಜಾಕ್‌ ಮಂಜು; ‘ಮೈನಾ’ ನಾಗಶೇಖರ್‌ ಹೀರೋ..

Paadaraya Title Poster: ‘ವಿಕ್ರಾಂತ್‌ ರೋಣ’ ಬಳಿಕ ‘ಪಾದರಾಯ’ ಸಿನಿಮಾ ಘೋಷಿಸಿದ ಜಾಕ್‌ ಮಂಜು; ‘ಮೈನಾ’ ನಾಗಶೇಖರ್‌ ಹೀರೋ..

HT Kannada Desk HT Kannada

Dec 06, 2022 11:03 AM IST

‘ವಿಕ್ರಾಂತ್‌ ರೋಣ’ ಬಳಿಕ ‘ಪಾದರಾಯ’ ಸಿನಿಮಾ ಘೋಷಿಸಿದ ಜಾಕ್‌ ಮಂಜು; ‘ಮೈನಾ’ ನಾಗಶೇಖರ್‌ ಹೀರೋ..

    • ನೈಜ ಘಟನೆ ಆಧರಿತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ.
‘ವಿಕ್ರಾಂತ್‌ ರೋಣ’ ಬಳಿಕ ‘ಪಾದರಾಯ’ ಸಿನಿಮಾ ಘೋಷಿಸಿದ ಜಾಕ್‌ ಮಂಜು; ‘ಮೈನಾ’ ನಾಗಶೇಖರ್‌ ಹೀರೋ..
‘ವಿಕ್ರಾಂತ್‌ ರೋಣ’ ಬಳಿಕ ‘ಪಾದರಾಯ’ ಸಿನಿಮಾ ಘೋಷಿಸಿದ ಜಾಕ್‌ ಮಂಜು; ‘ಮೈನಾ’ ನಾಗಶೇಖರ್‌ ಹೀರೋ..

Paadaraya Title Poster: ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನದ ಟ್ರ್ಯಾಕ್‌ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ‘ಮೈನಾ’. ‘ಸಂಜು ವೆಡ್ಸ್ ಗೀತಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕಿರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಗಾಯಗೊಂಡ ನಟಿ ಐಶ್ವರ್ಯಾ ರೈ ಕೈಬಿಟ್ಟು ನಡೆಯಲೊಪ್ಪದ ಆರಾಧ್ಯ ಬಚ್ಚನ್‌; ಮಗಳೆಂದರೆ ಹೀಗಿರಬೇಕು ಅಂದ್ರು ಫ್ಯಾನ್ಸ್‌

ನೈಜ ಘಟನೆ ಆಧರಿತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ. ನಾಗಶೇಖರ್ ನಾಯಕ ನಟನಾಗಿ ನಟಿಸುವುದರ ಜೊತೆಗೆ ಚಿತ್ರಕ್ಕೆ ಸಹ ನಿರ್ಮಾಪಕ ಕೂಡ ಆಗಿದ್ದಾರೆ. ವಿಶೇಷ ಎಂದರೆ ಈ ಚಿತ್ರದ ಶೀರ್ಷಿಕೆ ಪೋಸ್ಟರ್‌ ಅನ್ನು ನಟ ಕಿಚ್ಚ ಸುದೀಪ್‌ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

2013-14ರಲ್ಲಿ ನಡೆದ ಘಟನೆ..

‘ಪಾದರಾಯ’ ಎಂದರೇ ಹನುಮಂತ ಎಂದರ್ಥ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರಲ್ಲಿದೆ. 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ. ಈ ಘಟನೆ ಆರು ರಾಜ್ಯಕ್ಕೆ ಸಂಬಂಧಿಸಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆಗಿರುವುದರಿಂದ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದೇವೆ. ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಹುಡುಕಾಟದಲ್ಲಿದ್ದೇವೆ ಜನವರಿಯಲ್ಲಿ ಚಿತ್ರೀಕರಣ ಆರಂಭಿಸಲಿದ್ದೇವೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಹಂಚಿಕೊಳ್ಳೋದಾಗಿ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ತಿಳಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ತಮಿಳು ಚಿತ್ರರಂಗದ ಹೆಸರಾಂತ ಸಂಕಲನಕಾರ ಆಂಟೋನಿ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಇನ್ನುಳಿದ ತಾರಾಗಣದಲ್ಲಿ ಯಾರೆಲ್ಲ ಇರಲಿದ್ದಾರೆ, ಶೂಟಿಂಗ್‌ ಕುರಿತ ಮಾಹಿತಿ ಇನ್ನು ಕೆಲ ದಿನಗಳ ಬಳಿಕ ಗೊತ್ತಾಗಲಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ