logo
ಕನ್ನಡ ಸುದ್ದಿ  /  ಮನರಂಜನೆ  /  Rashmika Mandanna: ರಶ್ಮಿಕಾ ಮಂದಣ್ಣ ಚೊಚ್ಚಲ ಬಾಲಿವುಡ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

Rashmika Mandanna: ರಶ್ಮಿಕಾ ಮಂದಣ್ಣ ಚೊಚ್ಚಲ ಬಾಲಿವುಡ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

HT Kannada Desk HT Kannada

Jul 23, 2022 06:47 PM IST

ರಶ್ಮಿಕಾ ಮಂದಣ್ಣ ಚೊಚ್ಚಲ ಬಾಲಿವುಡ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

    • ಸದ್ಯ ಬಾಲಿವುಡ್‌ನಲ್ಲಿಯೇ ಬಿಜಿಯಾಗಿದ್ದರೂ ರಶ್ಮಿಕಾ ಮಂದಣ್ಣ ಅವರ ಒಂದೇ ಒಂದು ಸಿನಿಮಾ ಬಿಡುಗಡೆ ಆಗಿಲ್ಲ. ಯಾವಾಗ ಬಿಡುಗಡೆ ಎಂದು ಸ್ವತಃ ಅವರೇ ಕಾದು ಕಾದು ಸುಸ್ತಾಗಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು ಹಿಂದಿ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದರೂ, ಈ ವರೆಗೂ ಅವರ ಒಂದೂ ಚಿತ್ರ ತೆರೆಕಂಡಿಲ್ಲ
ರಶ್ಮಿಕಾ ಮಂದಣ್ಣ ಚೊಚ್ಚಲ ಬಾಲಿವುಡ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ
ರಶ್ಮಿಕಾ ಮಂದಣ್ಣ ಚೊಚ್ಚಲ ಬಾಲಿವುಡ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

ಮುಂಬೈ: ಸದ್ಯ ಬಾಲಿವುಡ್‌ನಲ್ಲಿಯೇ ಬಿಜಿಯಾಗಿದ್ದರೂ ರಶ್ಮಿಕಾ ಮಂದಣ್ಣ ಅವರ ಒಂದೇ ಒಂದು ಸಿನಿಮಾ ಬಿಡುಗಡೆ ಆಗಿಲ್ಲ. ಯಾವಾಗ ಬಿಡುಗಡೆ ಎಂದು ಸ್ವತಃ ಅವರೇ ಕಾದು ಕಾದು ಸುಸ್ತಾಗಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು ಹಿಂದಿ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದರೂ, ಈ ವರೆಗೂ ಅವರ ಒಂದೂ ಚಿತ್ರ ತೆರೆಕಂಡಿಲ್ಲ. "ಮಿಷನ್‌ ಮಜ್ನು" ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ಕೂತಿದ್ದರೂ, ಆ ಚಿತ್ರದಿಂದಲೂ ಯಾವುದೇ ಅಪ್‌ಡೇಟ್‌ ಇಲ್ಲ. ಇದೀಗ ಕೊನೆಗೂ ಆ ಕಾಯುವಿಕೆಗೆ ಉತ್ತರ ಸಿಕ್ಕಿದೆ. ಅಕ್ಟೋಬರ್‌ 7ಕ್ಕೆ ಅಮಿತಾಬ್‌ ಬಚ್ಚನ್‌ ಜತೆಗಿನ "ಗುಡ್‌ ಬೈ" ಸಿನಿಮಾ ಬಿಡುಗಡೆ ಆಗಲಿದೆ.

ಟ್ರೆಂಡಿಂಗ್​ ಸುದ್ದಿ

Deepfake: ತಲೆ ಆಲಿಯಾ ಭಟ್‌ರದ್ದು, ದೇಹ ಯಾರದ್ದು? ಆಲಿಯಾ ಭಟ್‌ರ ಮತ್ತೊಂದು ಡೀಫ್‌ಫೇಕ್‌ ವಿಡಿಯೋ ವೈರಲ್‌, ಅಸಲಿ- ನಕಲಿ ವಿಡಿಯೋ ನೋಡಿ

ದ ಸೂಟ್‌ ಕನ್ನಡ ಸಿನಿಮಾ ಮೇ 17ರಂದು ಬಿಡುಗಡೆ; ಟ್ರೇಲರ್‌ ನೋಡಿ ಖುಷಿಪಟ್ಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Choo Mantar: ಶರಣ್‌ ಲಕ್‌ ಬದಲಾಯಿಸಬಹುದೇ ಛೂ ಮಂತರ್‌? ಬಹುನಿರೀಕ್ಷಿತ ಸಿನಿಮಾ ರಿಲೀಸ್‌ ಮುಂದೂಡಿಕೆ

Tejasswi Prakash: ಉರ್ಫಿ ಹಾಕುವ ಬಟ್ಟೆಗಳು ಇದಕ್ಕಿಂತಲೂ ಚೆನ್ನಾಗಿರುತ್ವೆ: ತೇಜಸ್ವಿ ಪ್ರಕಾಶ್‌ ಎದೆಗಾರಿಕೆಗೆ ನೆಟ್ಟಿಗರಿಂದ ಕ್ಲಾಸ್‌

"ಗುಡ್ ಬೈ" ನಿರ್ಮಾಪಕರು ಶನಿವಾರ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಅಕ್ಟೋಬರ್ 7 ರಂದು ವಿಶ್ವದಾದ್ಯಂತ ಚಿತ್ರ ಬಿಡುಗಡೆಯಾಗಲಿದೆ ಎಂದಿದ್ದಾರೆ. ಇತ್ತ ತಮ್ಮ ಬಾಲಿವುಡ್‌ನ ಚೊಚ್ಚಲ ಚಿತ್ರ "ಗುಡ್ ಬೈ" ಅಕ್ಟೋಬರ್ 7 ರಂದು ಬಿಡುಗಡೆಯಾಗಲಿದೆ ಎಂದು ಟ್ವಿಟರ್‌ನಲ್ಲಿ ರಶ್ಮಿಕಾ ಸಹ ತಿಳಿಸಿದ್ದಾರೆ.

ಫ್ಯಾಮಿಲಿ ಸೆಂಟಿಮೆಂಟ್‌ ಮತ್ತು ಕಾಮಿಡಿ ಕಥಾಹಂದರದ ಈ ಚಿತ್ರದಲ್ಲಿ ಬಾಲಿವುಡ್‌ನ ದಿಗ್ಗಜ ನಟ ಅಮಿತಾಬ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅಮಿತಾಬ್ ಮಗಳಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗಷ್ಟೇ ಮುಗಿದಿದೆ. ಈ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಸಹ ಮಾಡಿದ್ದರು. ವಿಕಾಸ್ ಬಾಹ್ಲ ನಿರ್ದೇಶನದ ಈ ಚಿತ್ರವನ್ನು ಏಕ್ತಾ ಕಪೂರ್ ಮತ್ತು ಶಿವಾಂಶಿ ಸರ್ಕಾರ್ ನಿರ್ಮಿಸಿದ್ದಾರೆ.

ಮತ್ತೊಂದೆಡೆ, ರಶ್ಮಿಕಾ ಮಂದಣ್ಣ ಇನ್ನೇನು ಶೀಘ್ರದಲ್ಲೇ ತೆಲುಗಿನ "ಪುಷ್ಪ 2" ಚಿತ್ರೀಕರಣದಲ್ಲಿಯೂ ಭಾಗವಹಿಸಲಿದ್ದಾರೆ. ಮೊದಲ ಭಾಗದಲ್ಲಿ ಶ್ರೀವಲ್ಲಿ ಪಾತ್ರದಲ್ಲಿ ಡಿ ಗ್ಲಾಮರಸ್ ಅವತಾರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದರು. ಇದೀಗ ಎರಡನೇ ಭಾಗದಲ್ಲಿ ಆ ಪಾತ್ರ ಹೇಗೆ ಮೂಡಿಬರಬಹುದು ಎಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. "ಪುಷ್ಪ; ದಿ ರೂಲ್" ಜತೆಗೆ "ಸೀತಾರಾಮಮ್" ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತಮಿಳಿನಲ್ಲಿ ವಿಜಯ್‌ ಜತೆಗೆ "ವರಿಸು" ಚಿತ್ರದಲ್ಲಿಯೂ ರಶ್ಮಿಕಾ ನಟಿಸುತ್ತಿದ್ದಾರೆ. ರಣಬೀರ್‌ ಕಪೂರ್‌ ಜತೆಗಿನ "ಅನಿಮಲ್ʼ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಅಬುದಾಬಿಯಲ್ಲಿ ರಶ್ಮಿಕಾ ಮಂದಣ್ಣ

ಸಿನಿಮಾ ಶೂಟಿಂಗ್‌ ಸಲುವಾಗಿಯೇ ದೂರದ ಅಬುದಾಬಿಯಲ್ಲಿ ಇರುವುದಾಗಿ ರಶ್ಮಿಕಾ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಹಾಕಿದ್ದಾರೆ. ಆದರೆ, ಯಾವ ಸಿನಿಮಾ ಸಲುವಾಗಿ ಪ್ರಯಾಣ ಬೆಳೆಸಿದ್ದೇನೆ ಎಂದು ಎಲ್ಲಿಯೂ ಅವರು ಹೇಳಿಕೊಂಡಿಲ್ಲ. "ಪ್ರಯಾಣವನ್ನು ನಾನು ಪ್ರೀತಿಸುತ್ತೇನೆ. ಅದರಲ್ಲೂ ಸಿನಿಮಾ ಸಂಬಂಧಿ ಕೆಲಸದ ನಿಮಿತ್ತ ಯಾವಾಗ ಪ್ರಯಾಣಿಸುತ್ತೇನೋ ಅದಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ" ಎಂದು ಕ್ಯಾಪ್ಶನ್‌ ನೀಡಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು