Renukaswamy Murder Case: ವಿಚಾರಣೆ ಮುಂದೂಡಿದ ಹೈಕೋರ್ಟ್; ಈ ಬಾರಿಯೂ ಪವಿತ್ರಾ ಗೌಡಗೆ ಸಿಗಲಿಲ್ಲ ಬೇಲ್
Dec 03, 2024 04:56 PM IST
ವಿಚಾರಣೆ ಮುಂದೂಡಿದ ಹೈಕೋರ್ಟ್
- ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೈಲಿನಲ್ಲಿರುವ ಪವಿತ್ರಾ ಗೌಡ ಅವರಿಗೆ ಈ ಬಾರಿಯೂ ಬೇಲ್ ಸಿಕ್ಕಿಲ್ಲ. ಆದರೆ ಪವಿತ್ರಾ ಪರ ವಕೀಲರು ಮಂಡಿಸಿದ ವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು 3 ದಿನಗಳ ಕಾಲ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ನಟ ದರ್ಶನ್ಹಾಗೂ ನಟಿ ಪವಿತ್ರಾ ಗೌಡ ಇಬ್ಬರೂ ಜೈಲು ಸೇರಿದ್ರು ಆ ಕುರಿತು ಇಂದು ವಿಚಾರಣೆ ಮಾಡಲಾಗಿತ್ತು. ಬೇಲ್ ಅಥವಾ ಜೈಲ್ ಯಾವುದು ಎಂದು ತಿಳಿದುಕೊಳ್ಳಲು ಕಾತರರಾಗಿದ್ದರು. ಆದರೆ ವಿಚಾರಣೆ ಮುಂದೂಡಲಾಗಿದೆ. ಆದರೆ ಪವಿತ್ರಾ ಪರ ವಕೀಲರು ವಾದ ಮಂಡನೆ ಮಾಡುವಾಗ ಬೇಲ್ ಯಾಕೆ ನೀಡಬೇಕು ಎಂದು ಸಾಕಷ್ಟು ಕಾರಣ ನೀಡಿದ್ದಾರೆ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಲಿವಿನ್ ರಿಲೇಷನ್‌ಶಿಪ್‌ನಲ್ಲಿ ಇದ್ದು ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ ಕಾರಣ ಈ ಘಟನೆ ನಡೆದಿದೆ.
ಪವಿತ್ರಾ ಪರ ವಕೀಲರು ಹೇಳಿದ್ದೇನು?
ಈಗ ಪವಿತ್ರಾ ಗೌಡ ಅವರ ಮಗಳು ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾಳೆ. ಅವಳಿನ್ನು ಅಪ್ರಾಪ್ತೆ ಆ ಕಾರಣಕ್ಕಾಗಿ ಪವಿತ್ರಾ ಗೌಡ ಅವರನ್ನು ಬೇಲ್ ಮೂಲಕ ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ಇನ್ನು ಈ ಹಿಂದೆ ಮಹಿಳೆ ಎನ್ನುವ ಕಾರಣಕ್ಕಾಗಿ ಜಾಮೀನು ಸಿಕ್ಕ ಸಾಕಷ್ಟು ಉದಾಹರಣೆ ಇದೆ. ಈಗಲೂ ಈ ಕಾರಣಕ್ಕಾಗಿ ಜಾಮೀನು ನೀಡಬೇಕು ಎಂದು ಪವಿತ್ರಾ ಪರ ವಕೀಲರು ವಾದ ಮಂಡಿಸಿದ್ದಾರೆ.
ಡಿಸೆಂಬರ್ 6ಕ್ಕೆ ಮುಂದೂಡಲಾಗಿದೆ
ಆರೋಪಿಗಳ ಪರ ವಾದ ಆಲಿಸಿದ ಹೈಕೋರ್ಟ್ ಯಾವುದೇ ತೀರ್ಪು ನೀಡಿಲ್ಲ, ಬದಲಾಗಿ ವಿಚಾರಣೆಯನ್ನು ಮುಂದೂಡಿದೆ. ಇದೇ ತಿಂಗಳು ಅಂದರೆ ಡಿಸೆಂಬರ್ 6ರಂದು ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಘಟನೆಯ ವಿವರ
ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ದರ್ಶನ್ ಮತ್ತಿತರ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ದರ್ಶನ್ ಆರೋಪಿ ನಂ2 ಆಗಿದ್ದರೆ ಇವರ ಸ್ನೇಹಿತೆ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪವಿತ್ರಾಗೆ ಅಶ್ಲೀಲ ಸಂದೇಶಗಳು ಮತ್ತು ಫೋಟೋಗಳನ್ನು ಕಳುಹಿಸಿದ್ದಕ್ಕಾಗಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದರ್ಶನ್ ಆಪ್ತ ಸ್ನೇಹಿತೆ ಪವಿತ್ರಾ ಗೌಡ. ತನ್ನ ಆಪ್ತೆಗೆ ಸಂದೇಶ ಕಳುಹಿಸುತ್ತಿದ್ದ ಎಂಬ ಸಿಟ್ಟು ದರ್ಶನ್‌ಗಿತ್ತು. ಇದರಿಂದ ಕೆರಳಿದ ಅವರು ಚಿತ್ರದುರ್ಗದ ತನ್ನ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಮೂಲಕ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ ಮಾಡಲಾಗಿದೆ ಎನ್ನುವುದು ಆರೋಪದ ಹೂರಣ. ಕೊಲೆ ಪ್ರಕರಣದಲ್ಲಿ ಇದುವರೆಗೆ 17 ಮಂದಿಯನ್ನು ಬಂಧಿಸಲಾಗಿತ್ತು.