ಜೀ ಕನ್ನಡ ವಾಹಿನಿಯಲ್ಲಿ ಮತ್ತೆ ಬರ್ತಿದೆ 'ಸರಿಗಮಪ' ಸಿಂಗಿಂಗ್ ರಿಯಾಲಿಟಿ ಶೋ; ಡಿಸೆಂಬರ್ 14ರಿಂದ ಮನೆ ಮನೆಯಲ್ಲೂ ಸಂಗೀತದ ಅಲೆ
Dec 12, 2024 07:56 PM IST
ಜೀ ಕನ್ನಡ ವಾಹಿನಿಯಲ್ಲಿ ಮತ್ತೆ ಬರ್ತಿದೆ 'ಸರಿಗಮಪ'
- ಜೀ ಕನ್ನಡ ವಾಹಿನಿಯಲ್ಲಿ ಇದೇ ಭಾನುವಾರದಿಂದ (ಡಿಸೆಂಬರ್ 14) 'ಸರಿಗಮಪ' ಸಿಂಗಿಂಗ್ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಬಾರಿ ಒಂದು ಹೊಸತನದೊಂದಿದೆ ಈ ರಿಯಾಲಿಟಿ ಶೋ ಮನರಂಜಿಸಲು ಸಿದ್ಧವಾಗಿದೆ.
ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಸರಿಗಮಪ' ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ. ಈಗಾಗಲೇ ‘ಸರಿಗಮಪ’ ಶೋ ಕನ್ನಡ ಚಿತ್ರರಂಗಕ್ಕೆ ಸಂಜಿತ್ ಹೆಗ್ಡೆ, ಪೃಥ್ವಿಭಟ್ ಮತ್ತು ಜಸ್ಕರಣ್ ಸಿಂಗ್, ಐಶ್ವರ್ಯ ರಂಗರಾಜನ್, ಆಶಾ ಭಟ್, ಹನುಮಂತು, ದಿಯಾ ಹೆಗ್ಡೆ, ಶ್ರೀನಿಧಿ ಶಾಸ್ತ್ರೀ, ಚೆನ್ನಪ್ಪ, ಸುನೀಲ್ ಗುಜಗೊಂಡ, ಸುಹಾನಾ, ರಜತ್ ಹೆಗ್ಡೆ,ಹರ್ಷ, ದರ್ಶನ್, ಕಂಬದ ರಂಗಯ್ಯ, ಇಂಪನಾ ಜಯರಾಜ್, ಜ್ಞಾನಗುರುರಾಜ್, ಸುಪ್ರೀತ್, ನಿಹಾಲ್, ಅಶ್ವಿನ್ ಶರ್ಮ ರಂತಹ ಪ್ರತಿಭಾವಂತ ಗಾಯಕರನ್ನ ಕೊಡುಗೆಯಾಗಿ ನೀಡಿದೆ. ಈ ಸೀಸನ್ನಲ್ಲಿ 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಿಸಬಹುದಾಗಿದ್ದು ಸ್ಪರ್ಧೆಯು ಮತ್ತಷ್ಟು ಆಸಕ್ತಿದಾಯಕವಾಗಿರಲಿದೆ.
ತೀರ್ಪುಗಾರರು
ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಜೊತೆ ರಾಜೇಶ್ ಕೃಷ್ಣನ್ ಮತ್ತೆ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿರುವುದು ಈ ಆವೃತ್ತಿಯ ಮತ್ತೊಂದು ಹೈಲೈಟ್ ಆಗಿದೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಈ ಸೀಸನ್ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಈ ಶೋನಲ್ಲಿ ಸ್ಪರ್ಧಿಗಳ ನಡುವೆ ಕೇವಲ ಪೈಪೋಟಿ ಮಾತ್ರವಿರದೇ ಅವರ ಸ್ಪೂರ್ತಿದಾಯಕ ಕಥೆಗಳು ಕೂಡ ಮತ್ತಷ್ಟು ಪ್ರೇರೇಪಿಸಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ಮತ್ತು ದೇಶದ ಹಲವು ಭಾಗಗಳಿಂದ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವೀಕ್ಷಕರು ಜೀ಼ಕನ್ನಡ 'ಸರಿಗಮಪ' ಇನ್ಸ್ಟಾಗ್ರಾಂನ ಅಧಿಕೃತ ಪೇಜ್ನಲ್ಲಿ ಪೋಸ್ಟ್ ಮಾಡುವ ಆಡಿಷನ್ ವೀಡಿಯೋಗಳನ್ನು ಲೈಕ್ ಮಾಡುವ ಮೂಲಕ ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಆಯ್ಕೆಮಾಡಿದ್ದಾರೆ ಮತ್ತು ಅತೀ ಹೆಚ್ಚು ಲೈಕ್ ಗಳಿಸಿರುವ ಸ್ಪರ್ಧಿಗಳು ಮೆಗಾ ಆಡಿಷನ್‌ಗೆ ಬಡ್ತಿ ಪಡೆದಿದ್ದಾರೆ.
ಹೊಸತನದೊಂದಿಗೆ ಸರಿಗಮಪ
ಗಾಯಕರನ್ನು ನೀಡಿರುವ ಈ 'ಸರಿಗಮಪ' ಸಿಂಗಿಂಗ್ ರಿಯಾಲಿಟಿ ಶೋ ಮತ್ತಷ್ಟು ಹೊಸತನದೊಂದಿಗೆ ನಿಮ್ಮನ್ನು ಮನರಂಜಿಸಲು ಇದೇ ಡಿಸೆಂಬರ್ 14 ರಿಂದ 7:30ಕ್ಕೆ ನಿಮ್ಮ ಮುಂದೆ ಬರುತ್ತಿದೆ. 'ಸರಿಗಮಪ' ಸಿಂಗಿಂಗ್ ರಿಯಾಲಿಟಿ ಶೋ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಲಿದೆ.