logo
ಕನ್ನಡ ಸುದ್ದಿ  /  ಮನರಂಜನೆ  /  ದೀಪಾವಳಿಗೆ ಮದುವೆಯಾಗುವ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್; ಯಾರು ಈ ಧನ್ಯತಾ, ಏನು ಓದಿದ್ದಾರೆ?

ದೀಪಾವಳಿಗೆ ಮದುವೆಯಾಗುವ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್; ಯಾರು ಈ ಧನ್ಯತಾ, ಏನು ಓದಿದ್ದಾರೆ?

Nov 01, 2024 09:25 AM IST

google News

ದೀಪಾವಳಿಗೆ ಮದುವೆ ಆಗುವ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್

    • Daali Dhananjaya: ಚಂದನವನದ ನಟ ಡಾಲಿ ಧನಂಜಯ್‌ ಮದುವೆಗೆ ರೆಡಿಯಾಗುತ್ತಿದ್ದಾರೆ. ದೀಪಾವಳಿ ಹಬ್ಬಕ್ಕೆ ತಾವು ಮದುವೆ ಆಗುವ ಹುಡುಗಿಯನ್ನು ಪರಿಚಯಿಸಿದ್ದಾರೆ. ಧನ್ಯತಾ ಜತೆಗಿನ ವಿಡಿಯೋ ಹಂಚಿಕೊಂಡು, ಇವರೇ ನೋಡಿ ನಮ್ಮವರು ಎಂದಿದ್ದಾರೆ.  
ದೀಪಾವಳಿಗೆ ಮದುವೆ ಆಗುವ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್
ದೀಪಾವಳಿಗೆ ಮದುವೆ ಆಗುವ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್

Daali Dhananjaya Wedding Date: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಕೊನೆಗೂ ಈ ದೀಪಾವಳಿ ಹಬ್ಬಕ್ಕೆ ಶುಭ ಸುದ್ದಿಕೊಟ್ಟಿದ್ದಾರೆ. ಇಲ್ಲಿಯವರೆಗೂ ಹೋದಲೆಲ್ಲ ಮದುವೆ ಯಾವಾಗ ಎಂಬ ಸರಣಿ ಪ್ರಶ್ನೆಗಳನ್ನು ಎದುರಿಸಿದ್ದ ಧನಂಜಯ್‌, ಈಗ ಅದೆಲ್ಲದಕ್ಕೂ ಫೋಟೋ ಸಮೇತ ಉತ್ತರ ನೀಡಿದ್ದಾರೆ. ಅಂದರೆ, ತಾವು ಮದುವೆ ಆಗಲಿರುವ ಹುಡುಗಿಯನ್ನು ಧನಂಜಯ್‌ ಪರಿಚಯಿಸಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಸಮಸ್ತ ಕನ್ನಡಿಗರ ಮುಂದೆ ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂಜಯ್ ಮದುವೆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ.

ಅಭಿಮಾನಿಗಳು ಮತ್ತು ಆಪ್ತರಲ್ಲಿ ಧನಂಜಯ್‌ ಯಾರನ್ನು ಮದುವೆಯಾಗುತ್ತಾರೆ? ಚಿತ್ರರಂಗದವರಾ ಅಥವಾ ಬೇರೆ ಕ್ಷೇತ್ರದವರನ್ನು ಮದುವೆಯಾಗುತ್ತಾರಾ ಎಂಬ ಕುತೂಹಲವಿತ್ತು. ಇದೀಗ ಆ ಎಲ್ಲಾ ಕುತೂಹಲಕ್ಕೆ ತೆರೆ ಬಿದ್ದಿದೆ. ಚಿತ್ರದುರ್ಗ ಮೂಲದ ವೈದ್ಯೆಯನ್ನು ಧನಂಜಯ್‌ ಕೈ ಹಿಡಿಯುತ್ತಿದ್ದಾರೆ. ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನ್ಯತಾ. ಗೈನೋಕಾಲಾಜಿಸ್ಟ್ ಸರ್ಜನ್‌ ಆಗಿರುವ ಧನ್ಯತಾ ಜತೆ ಇದೀಗ ಸಪ್ತಪದಿ ತುಳಿಯಲಿದ್ದಾರೆ ಧನಂಜಯ್.‌

ಇಬ್ಬರೂ ಓದಿದ್ದು ಮೈಸೂರಿನಲ್ಲಿ..

ಡಾಲಿ ಧನಂಜಯ್ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ. ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ ಧನಂಜಯ. ಧನ್ಯತಾ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಇಬ್ಬರ ಮುದ್ದಾದ ವಿಡಿಯೋಗೆ ಅಭಿಮಾನಿಗಳಿಂದ ಪ್ರೀತಿಯ ಶುಭಾಶಯ ಹರಿದುಬರುತ್ತಿದೆ.

ಯಾವಾಗ ಮದುವೆ?

ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲಿ ಕನೆಕ್ಟ್ ಆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ. ಸದ್ಯ ಗುಡ್ ನ್ಯೂಸ್ ನೀಡಿರುವ ಧನಂಜಯ ಅವರಿಗೆ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ.

ನಾನು ಧನ್ಯ..

ಸೋಷಿಯಲ್‌ ಮೀಡಿಯಾದಲ್ಲಿ ಮದುವೆ ಆಗುವ ಹುಡುಗಿಯನ್ನು ಪರಿಚಯಿಸಿದ ಧನಂಜಯ್‌, ಹೀಗೆ ಬರೆದುಕೊಂಡಿದ್ದಾರೆ. “ಪ್ರೀತಿಯ ಕರುನಾಡಿಗೆ, ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು. ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು.. ನಾನು ಧನ್ಯ” ಎಂದಿದ್ದಾರೆ. 

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ