logo
ಕನ್ನಡ ಸುದ್ದಿ  /  Entertainment  /  Sandalwood Actor Sudeep Adopted 31 Cows Under Punyakoti Dattu Yojane

Sudeep Adopted cows:ಪುಣ್ಯಕೋಟಿ ದತ್ತು ಯೋಜನೆಯಡಿ 31 ಗೋವುಗಳನ್ನು ದತ್ತು ಪಡೆದ ಸುದೀಪ್‌..ಕಿಚ್ಚನ ಕಾರ್ಯಕ್ಕೆ ಮೆಚ್ಚುಗೆ

HT Kannada Desk HT Kannada

Nov 24, 2022 06:14 PM IST

ಗೋವುಗಳನ್ನು ದತ್ತು ಪಡೆದ ಸುದೀಪ್

    • ಗೋಪೂಜೆ ನೇರವೇರಿಸಿ ಮಾತನಾಡಿದ ಸುದೀಪ್‌, ''ರಾಜ್ಯ ಸರ್ಕಾರವು ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ. ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು. 
ಗೋವುಗಳನ್ನು ದತ್ತು ಪಡೆದ ಸುದೀಪ್
ಗೋವುಗಳನ್ನು ದತ್ತು ಪಡೆದ ಸುದೀಪ್

ಸ್ಯಾಂಡಲ್‌ವುಡ್‌ ನಟ, ಅಭಿನಯ ಚಕ್ರವರ್ತಿ ಸುದೀಪ್‌ ಸಿನಿಮಾ ನಟನಾಗಿ ಮಾತ್ರವಲ್ಲದೆ, ಸಾಮಾಜಿಕ ಸೇವೆಯಲ್ಲಿ ಕೂಡಾ ಗುರುತಿಸಿಕೊಂಡಿದ್ದಾರೆ. ತಮ್ಮ ಟ್ರಸ್ಟ್‌ ಮೂಲಕ ಸುದೀಪ್‌ ಇದುವರೆಗೂ ಸಾಕಷ್ಟು ಕಾರ್ಯಗಳನ್ನು ಮಾಡಿದ್ದಾರೆ. ಬಡಬಗ್ಗರಿಗೆ ಸಹಾಯ ಮಾಡಿದ್ದಾರೆ. ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ. ಈಗ ಅವರು ಗೋವುಗಳನ್ನು ದತ್ತು ಪಡೆಯಲು ಮುಂದಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

‘ವಿವಾಹಿತ ಪುರುಷನ ಜತೆ ಗೌಪ್ಯ ಮದುವೆ ಆಗಿದ್ದಕ್ಕೆ ಮಕ್ಕಳೇ ಬೇಡ ಎಂದು ನಿರ್ಧರಿಸಿದೆ!’ ‘ಅಣ್ಣಯ್ಯ’ ಚಿತ್ರದ ಅರುಣಾ ಇರಾನಿ ಕಥೆ -ವ್ಯಥೆ

‘ಒಂದು ವೇಳೆ ಪ್ರಜ್ವಲ್‌ ರೇವಣ್ಣ ಮುಸ್ಲಿಂ ಆಗಿದ್ರೆ, ಸುಮ್ನೆ ಬಿಡ್ತಿದ್ರಾ?’ ಧರ್ಮ ಎಳೆದು ತಂದ ನಟಿ ಸ್ವರಾ ಭಾಸ್ಕರ್‌

Mahesh Babu: ರಾಜಮೌಳಿ ಮುಂದಿನ ಸಿನಿಮಾಕ್ಕೆ ಮಹೇಶ್‌ ಬಾಬು ಹೀರೋ; ಶೂಟಿಂಗ್‌ ಯಾವಾಗ ಆರಂಭ? ಇಲ್ಲಿದೆ ಹೆಚ್ಚಿನ ವಿವರ

‘ಅವ್ನ ಜತೆಗೇನು ಮಾತು, ಅವ್ರನ್ನ ಅಣ್ಣ ಅಂತ ಕರೀ, ಈ ಅನುಮಾನವೇ ಆ ವ್ಯಕ್ತಿ ಜತೆಗಿನ ಬ್ರೇಕಪ್‌ಗೆ ಕಾರಣವಾಯ್ತು’; ತನಿಷಾ ಕುಪ್ಪಂಡ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಸುದೀಪ್ ಹೇಳಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ''ರಾಜ್ಯ ಸರ್ಕಾರವು ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ. ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಹುಟ್ಟುಹಬ್ಬದಂದು 11 ಗೋವುಗಳನ್ನು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. '' ಎಂದು ಮನವಿ ಮಾಡಿದರು.

ಸಚಿವ ಪ್ರಭು ಚವ್ಹಾಣ್ ಮಾತನಾಡಿ, ''ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ.‌ ರಾಷ್ಟ್ರದಲ್ಲೇ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ''

ಸಚಿವರೊಂದಿಗೆ ಸುದೀಪ್

'' ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರಿಗೆ ವಾರ್ಷಿಕ ರೂ.11,000 ರೂ. ಜಾನುವಾರುಗಳಿಗಾಗಿ ಆಹಾರ ಪೂರೈಕೆಗೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ ರಾಸುಗಳಿಗೆ ಒಂದು ದಿನಕ್ಕೆ 70 ರೂ., ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ 10 ರೂಪಾಯಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು. ಈ ಯೋಜನೆಗೆ 80 ಜಿ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ'' ಎಂದು ಸಚಿವರು ಪುಣ್ಯಕೋಟಿ ಯೋಜನೆ ಕುರಿತು ಮಾಹಿತಿ ನೀಡಿದರು.

ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ಸಾರ್ವಜನಿಕರ ಸಹಕಾರದಿಂದ ಯಾವುದೇ ಅಡಚಣೆ ಇಲ್ಲದೆ, ನಡೆಸುವುದು ಈ ಯೋಜನೆ ಉದ್ದೇಶ. ಗೋವು ದತ್ತು, ಗೋಶಾಲೆಗೆ ದೇಣಿಗೆ ಮತ್ತು ಜಾನುವಾರುಗಳಿಗೆ ಆಹಾರ ಯೋಜನೆಯಡಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಗೋವುಗಳ ಪಾಲನೆಗೆ ಅವಕಾಶ ಕಲ್ಪಿಸಲಾಗಿದೆ. ತಾವು ಸರ್ಕಾರದೊಂದಿಗೆ ಕೈಜೋಡಿಸಿ ಗೋಸಂಕುಲ ಸಂರಕ್ಷಣೆಯಲ್ಲಿ ಭಾಗವಹಿಸಬೇಕು ಎಂದು ಪ್ರಭು ಚವ್ಹಾಣ್ ಅವರು ಚಿತ್ರನಟ ಸುದೀಪ್ ಅವರಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಸುದೀಪ್‌ಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಮಯದಲ್ಲಿ ಇಲಾಖೆ ಕಾರ್ಯದರ್ಶಿ ಡಾ. ಸಲ್ಮಾ ಕೆ.ಫಾಹೀಮ್, ಆಯುಕ್ತೆ ಎಸ್.ಅಶ್ವಥಿ, ಅಪರ ನಿರ್ದೇಶಕ ಡಾ. ಶ್ರೀನಿವಾಸ್, ವೀರಲೋಕ ಬುಕ್ಸ್ ಸಂಸ್ಥಾಪಕ ವೀರಕಪುತ್ರ ಶ್ರೀನಿವಾಸ ಸೇರಿದಂತೆ ಹಲವರು ಹಾಜರಿದ್ದರು.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು