Max Movie: ಮಾಕ್ಸ್ ಸಿನಿಮಾದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಕಿಚ್ಚ ಸುದೀಪ್; ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್
Dec 20, 2024 09:36 PM IST
ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್
- ಕಿಚ್ಚ ಸುದೀಪ್ ಅವರ ಮ್ಯಾಕ್ಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಡಿಸೆಂಬರ್ 25ರಂದು ತೆರೆಗೆ ಬರಲಿರುವ ಈ ಸಿನಿಮಾದ ಬಗ್ಗೆ ಕಿಚ್ಚ ಸುದೀಪ್ ಹೊಸ ಅಪ್ಡೇಟ್ ನೀಡಿದ್ದಾರೆ. ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.
ಮಾಕ್ಸ್ ಸಿನಿಮಾದ ಅಬ್ಬರ ಈಗಾಗಲೇ ಆರಂಭವಾಗಿದೆ. ಮ್ಯಾಕ್ಸ್ ಸಿನಿಮಾ ರಿಲೀಸ್ ಡೇಟ್ ಕೂಡ ಹತ್ತಿರ ಬರುತ್ತಿದೆ. ಹೀಗಿರುವಾಗ ಟ್ರೇಲರ್ ಅನೌನ್ಸ್ ಆಗುವ ಬಗ್ಗೆ ನಟ ಕಿಚ್ಚ ಸುದೀಪ್ ಅಪ್ಡೇಟ್ ನೀಡಿದ್ದಾರೆ. ಕಿಚ್ಚ ಅಭಿಮಾನಿಗಳಿಗೆ ಇದರಿಂದ ಸಂತಸ ಇಮ್ಮಡಿಯಾಗಿದೆ. ಸಿನಿಮಾ ನೋಡಲು ಕಾತರರಾಗಿರುವ ಅಭಿಮಾನಿಗಳು ಸಂತಸದಿಂದ ಈ ಹೊಸ ಅಪ್ಡೇಟ್ ಸ್ವೀಕರಿಸಿದ್ದಾರೆ. ಎರಡೂವರೆ ವರ್ಷಗಳ ಬಳಿಕ ನಟ ಸುದೀಪ್ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
ಯಾವಾಗ ರಿಲೀಸ್
ಪೋಸ್ಟರ್, ಟೀಸರ್ ಹಾಗೂ ಗಿಂಪ್ಸ್ ವಿಡಿಯೋ ಎಲ್ಲವನ್ನೂ ಹಂಚಿಕೊಂಡು ಪ್ರೇಕ್ಷರ ನಿರೀಕ್ಷೆಯನ್ನು ಹೆಚ್ಚಿಸಿದ್ದ ಚಿತ್ರತಂಡ ಈಗ ಟ್ರೇಲರ್ ಹೊರತರಲಿದೆ. ನವೆಂಬರ್ 22ರಂದು ಮಧ್ಯಾಹ್ನದ ಸಮಯದಲ್ಲಿ ಟ್ರೇಲರ್ ರಿಲೀಸ್ ಆಗಲಿದೆ ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೀಗಿದೆ ಪಾತ್ರವರ್ಗ
ಮ್ಯಾಕ್ಸ್ ಚಿತ್ರದಲ್ಲಿ ಸುಧಾ ಬೆಳವಾಡಿ, ಕರಿಸುಬ್ಬು, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೇ, ವಿಜಯ್ ಚೆಂಡೂರು, ನಾಗರಾಜ್, ಅನಿರುದ್ದ್, ಪ್ರವೀಣ್ ಸೇರಿ ಹಲವರು ನಟಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದರೆ, ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ. ಚೇತನ್ ಡಿಸೋಜ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಶಿವಕುಮಾರ್ ಅವರ ಕಲಾ ನಿರ್ದೇಶನ, ಗಣೇಶ್ ಬಾಬು ಸಂಕಲನ ಚಿತ್ರಕ್ಕಿದೆ.
ಐದು ಭಾಷೆಯಲ್ಲಿ ಬಿಡುಗಡೆ
ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಮ್ಯಾಕ್ಸ್ ಚಿತ್ರ ಇದೇ ಡಿಸೆಂಬರ್ 25ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಈ ಹಿಂದೆಯೇ ಹೇಳಿಕೊಂಡಿತ್ತು. ಆದರೆ, ಇದೇ ಸಿನಿಮಾದಿಂದ ಅಚ್ಚರಿಯ ಬೆಳವಣಿಗೆ ಹೊರಬಿದ್ದಿದೆ. ಇಲ್ಲಿಯವರೆಗೂ ಪ್ಯಾನ್ ಇಂಡಿಯಾ ಎಂದು ಹೇಳಿಕೊಂಡಿದ್ದ ಈ ಸಿನಿಮಾ ಈಗ ಕೇವಲ ಸೌತ್‌ನ ಮೂರು ಭಾಷೆಗಳಲ್ಲಿ ಮಾತ್ರ ಬಿಡುಗಡೆಗೆ ಸಜ್ಜಾಗಿದೆ.
ಸಿನಿಮಾ ತಂಡ
ಕಲೈಪುಲಿ ಎಸ್ ದಾನು ಅವರ ವಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ, ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಈಗ ಇದೇ ಸಿನಿಮಾ ಐದು ಭಾಷೆಯ ಬದಲು ಕೇವಲ ಮೂರು ಭಾಷೆ ಅಂದರೆ, ಕನ್ನಡ, ತೆಲುಗು, ತಮಿಳಿನಲ್ಲಿ ಮಾತ್ರ ತೆರೆಗೆ ಬರಲಿದೆ. ಈ ವಿಚಾರವನ್ನು ಸ್ವತಃ ಚಿತ್ರದ ನಿರ್ಮಾಪಕ ಕಲೈಪುಲಿ ದಾನು ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಚಿತ್ರಕ್ಕೆ ಯು\ಎ ಪ್ರಮಾಣ ಪತ್ರ ಸಿಕ್ಕಿರುವ ವಿಚಾರವನ್ನೂ ಹೇಳಿಕೊಂಡಿದ್ದಾರೆ.