Breaking News: ಮಠ ಸಿನಿಮಾ ಖ್ಯಾತಿಯ ಡೈರೆಕ್ಟರ್ ಗುರುಪ್ರಸಾದ್ ಆತ್ಮಹತ್ಯೆ ಶಂಕೆ; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
Nov 03, 2024 12:35 PM IST
ಮಠ ಸಿನಿಮಾ ಡೈರೆಕ್ಟರ್ ಗುರುಪ್ರಸಾದ್ ಆತ್ಮಹತ್ಯೆ
- ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನ ಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಠ ಸಿನಿಮಾ ನಿರ್ದೇಶಕ ಗುರುಪ್ರಸಾದ್ (52) ಮೃತದೇಹ ಪತ್ತೆಯಾಗಿದೆ.
ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನ ಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಠ ಸಿನಿಮಾ ನಿರ್ದೇಶಕ ಗುರುಪ್ರಸಾದ್ (52) ಮೃತದೇಹ ಪತ್ತೆಯಾಗಿದೆ. ಸಾಲಗಾರರ ಕಿರುಕುಳದಿಂದ ಅವರು ಬೇಸತ್ತಿದ್ದರು ಎಂದು ಹೇಳಲಾಗುತ್ತಿದೆ. ಮಠ, ಎದ್ದೇಳು ಮಂಜುನಾಥ ಸೇರಿ ಕೆಲವು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ಘಟನಾ ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಗುರುಪ್ರಸಾದ್ ಅವರು ಇತ್ತೀಚೆಗೆ ಎರಡನೇ ಮದುವೆ ಆಗಿದ್ದರು. ಅವರು ನಿನ್ನೆಯಷ್ಟೆ (ನವೆಂಬರ್ 2) ಜನ್ಮದಿನವಿತ್ತು.
ಹಲವು ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿಯೂ ಕೆಲಸ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಡೆತ್‌ನೋಟ್ ಕೂಡ ಸಿಕ್ಕಿಲ್ಲ. 5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿರುವ ಗುರುಪ್ರಸಾದ್ ಅವರು ಸಾಕಷ್ಟು ಜನರಿಗೆ ಪರಿಚಿತರು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಅವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೆಲದ ಮೇಲೆ ರಕ್ತ ಚೆಲ್ಲಿದೆ. ತಲೆಗೆ ಒಂದು ಬಟ್ಟೆಯನ್ನು ಕಟ್ಟಿಕೊಂಡಿದ್ದಾರೆ. ಇದೆಲ್ಲವನ್ನೂ ಗಮನಿಸಿದರೆ ಅವರು ಹತ್ತು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಇದೆ.
ಬಾಡಿಗೆ ಮನೆಯಲ್ಲಿ ಅವರು ಒಬ್ಬರೇ ಇದ್ದರು ಎಂದು ಹೇಳಲಾಗುತ್ತಿದೆ. ಕಳೆದ ಮೂರು, ನಾಲ್ಕು ದಿನಗಳಿಂದ ಅವರನ್ನು ಯಾರೂ ಕಂಡಿರಲಿಲ್ಲ ಎಂದು ಅಲ್ಲಿನ ಸ್ಥಳಿಯರು ಹೇಳುತ್ತಿದ್ದಾರೆ. ನಿನ್ನೆ ದೇಹದಿಂದ ಕೊಳೆತ ವಾಸನೆ ಬರುತ್ತಿದ್ದರಿಂದ ಮನೆಯ ಬಾಗಿಲನ್ನು ಒಡೆದು ನೋಡಿದಾಗ ಮೃತ ದೇಹ ಪತ್ತೆಯಾಗಿದೆ.
ಚೆಕ್ ಬೌನ್ಸ್ ಕೇಸ್ ವೊಂದರಲ್ಲಿ ಕೋರ್ಟು ಕಚೇರಿ ಅಲಿಯುತ್ತಿದ್ದ ಗುರುಪ್ರಸಾದ್ ಅವರು ತುಂಬಾ ಸಾಲದಲ್ಲಿದ್ದರು ಎಂದು ಹೇಳಲಾಗುತ್ತಿದೆ. ಈ ನಡುವೆ ಜಯನಗರದಲ್ಲಿ ಮತ್ತೊಂದು ಕೇಸ್ ದಾಖಲಾಗಿತ್ತು. ಪುಸ್ತಕ ಖರೀದಿ ಮಾಡಿ ಹಣ ನೀಡಿಲ್ಲ ಅಂತಾ ದೂರು ದಾಖಲಾಗಿತ್ತು. ಆರ್ಥಿಕವಾಗಿ ಒಂದಷ್ಟು ಸಮಸ್ಯೆ ಎದುರಿಸ್ತಿದ್ದ ಗುರುಪ್ರಸಾದ್ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಗಮನಿಸಿ: ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.
ವಿಭಾಗ