logo
ಕನ್ನಡ ಸುದ್ದಿ  /  ಮನರಂಜನೆ  /  Chetan Ahimsa: ಕಾಂಗ್ರೆಸ್‌ ಸರ್ಕಾರ ರಚನೆಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮುಂದೆ ಹಲವು ಬೇಡಿಕೆಗಳನ್ನಿಟ್ಟ ನಟ ಚೇತನ್‌ ಅಹಿಂಸಾ

Chetan Ahimsa: ಕಾಂಗ್ರೆಸ್‌ ಸರ್ಕಾರ ರಚನೆಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮುಂದೆ ಹಲವು ಬೇಡಿಕೆಗಳನ್ನಿಟ್ಟ ನಟ ಚೇತನ್‌ ಅಹಿಂಸಾ

HT Kannada Desk HT Kannada

May 21, 2023 01:53 PM IST

google News

ಕಾಂಗ್ರೆಸ್‌ ಆಡಳಿತಕ್ಕೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮುಂದೆ ಹಲವು ಬೇಡಿಕೆಗಳನ್ನಿಟ್ಟ ನಟ ಚೇತನ್‌ ಅಹಿಂಸಾ

    • ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುವ ನಟ ಚೇತನ್‌ ಅಹಿಂಸಾ ಇದೀಗ ನೂತನ ಸರ್ಕಾರದ ಮುಂದೆ ಒಂದಷ್ಟು ಬೇಡಿಕೆಗಳನ್ನಿಟ್ಟಿದ್ದಾರೆ.
ಕಾಂಗ್ರೆಸ್‌ ಆಡಳಿತಕ್ಕೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮುಂದೆ ಹಲವು ಬೇಡಿಕೆಗಳನ್ನಿಟ್ಟ ನಟ ಚೇತನ್‌ ಅಹಿಂಸಾ
ಕಾಂಗ್ರೆಸ್‌ ಆಡಳಿತಕ್ಕೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮುಂದೆ ಹಲವು ಬೇಡಿಕೆಗಳನ್ನಿಟ್ಟ ನಟ ಚೇತನ್‌ ಅಹಿಂಸಾ

Chetan Ahimsa: ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ (Chetan Ahimsa) ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸದಾ ಸಕ್ರಿಯರಿರುವ ಈ ನಟ, ನಿತ್ಯದ ಬೆಳವಣಿಗೆಗಳ ಬಗ್ಗೆ ಒಂದಿಲ್ಲೊಂದು ಕಮೆಂಟ್‌ ಮಾಡುತ್ತಲೇ ಇರುತ್ತಾರೆ. ಆ ಹೇಳಿಕೆಗಳ ಮೂಲಕವೇ ಪರ ವಿರೋಧ ಚರ್ಚೆಗೂ ಒಗ್ಗರಣೆ ಹಾಕುತ್ತಿರುತ್ತಾರೆ. ಈಗ ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನಿಟ್ಟಿದ್ದಾರೆ.

ತಮ್ಮ ಸೋಷಿಯಲ್‌ ಮೀಡಿಯಾಗಳಲ್ಲಿ ಈ ಸಂಬಂಧ ಪೋಸ್ಟ್‌ ಹಂಚಿಕೊಂಡಿರುವ ಚೇತನ್‌, ಗೋಹತ್ಯೆ ಮಸೂದೆ, ಜಾತಿ ಗಣತಿ, ಎಸ್ಟಿ ಮೀಸಲಾತಿ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಪ್ರನಾಳಿಕೆಯಲ್ಲಿ ಹೇಳಿಕೊಂಡಿದ್ದ ಎಲ್ಲ 5 ಚುನಾವಣಾ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಚೇತನ್‌ ಪೋಸ್ಟ್‌ ಹೀಗಿದೆ

ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ

ಅವರು ತಕ್ಷಣ ಮಾಡಬೇಕಾದ ಕೆಲವು ಕಾರ್ಯಗಳು ಇಲ್ಲಿವೆ:

  • 1. ಎಲ್ಲಾ 5 ಚುನಾವಣಾ ಯೋಜನೆಗಳನ್ನು ಜಾರಿಗೊಳಿಸಬೇಕು
  • 2. ಗೋಹತ್ಯೆ ವಿರೋಧಿ ಮಸೂದೆ & ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕಬೇಕು; 4% ಮುಸ್ಲಿಂ OBC ಮೀಸಲಾತಿಯನ್ನು ಮರುಸ್ಥಾಪಿಸಬೇಕು
  • 3. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು/ಹೊರಗೆ ತರಬೇಕು
  • 4. ಎಸ್ಟಿ (ST) ಒಳ ಮೀಸಲಾತಿ ಮತ್ತು ಖಾಸಗಿ ವಲಯದ ಮೀಸಲಾತಿಯನ್ನು (ಜಾತಿ/ಪ್ರದೇಶ/ಇತ್ಯಾದಿ) ಜಾರಿಗೊಳಿಸಬೇಕು

ಹೀಗೆ ಈ ನಾಲ್ಕು ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸುವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ದಿ ಕೇರಳ ಸ್ಟೋರಿ ಬಗ್ಗೆ ಮಾತನಾಡಿದ್ದ ಚೇತನ್‌

ದಿ ಕೇರಳ ಸ್ಟೋರಿ ಈ ಸಿನಿಮಾದ ಟ್ರೇಲರ್‌ ನೋಡಿರುವ ಚೇತನ್‌ ಅಹಿಂಸಾ, ಅದಕ್ಕೆ ತಮ್ಮದೆ ಆದ ರೀತಿಯಲ್ಲಿ ಕಾಮೆಂಟ್‌ ಮಾಡಿದ್ದಾರೆ. ಸೆನ್ಸಾರ್‌ ಮಂಡಳಿಯಿಂದ ಅನುಮತಿ ಪಡೆದ ಚಿತ್ರವನ್ನು ನಿಷೇಧಿಸಬೇಕು ಎಂಬ ಮಾತನ್ನು ನಾನು ಒಪ್ಪುವುದಿಲ್ಲ ಎಂದಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ.

"ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ' ಮೇ 5 ರಂದು ತೆರೆಗೆ ಬರಲಿದೆ ನಾನು ಈ ಹಿಂದೆ ಸಮುದಾಯದ/ ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ" ಎಂದಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ