ದರ್ಶನ್ Devil ಸಿನಿಮಾ ಬಗ್ಗೆ ಈ ವರೆಗೂ ಹರಿದಾಡಿದ ಸುದ್ದಿಗಳೆಲ್ಲವೂ ಸುಳ್ಳು! ನಿರ್ದೇಶಕರಿಂದ ಹೀಗೊಂದು ಸ್ಪಷ್ಟನೆ
Feb 04, 2024 11:16 AM IST
ದರ್ಶನ್ Devil ಸಿನಿಮಾ ಬಗ್ಗೆ ಈ ವರೆಗೂ ಹರಿದಾಡಿದ ಸುದ್ದಿಗಳೆಲ್ಲವೂ ಸುಳ್ಳು! ನಿರ್ದೇಶಕರಿಂದ ಹೀಗೊಂದು ಸ್ಪಷ್ಟನೆ
- ದರ್ಶನ್ ನಾಯಕನಾಗಿ ನಟಿಸುತ್ತಿರುವ ಡೆವಿಲ್ ಸಿನಿಮಾದ ಬಗ್ಗೆ ಈ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ನಡುವೆ ಒಂದಷ್ಟು ವದಂತಿಗಳು ಹರಿದಾಡುತ್ತಿವೆ. ನಾಯಕಿ ಆಯ್ಕೆ ವಿಚಾರ ಮುನ್ನೆಲೆಗೆ ಬಂದಿದ್ದು, ಇದೆಲ್ಲವೂ ಸುಳ್ಳು ಎಂದು ಸ್ವತಃ ನಿರ್ದೇಶಕ ಮಿಲನಾ ಪ್ರಕಾಶ್ ಹೇಳಿದ್ದಾರೆ.
Darshan Devil Movie Update: ಕಾಟೇರ ಸಿನಿಮಾ ಯಶಸ್ಸಿನ ಬಳಿಕ ನಟ ದರ್ಶನ್ ಅವರ ಮುಂದಿನ ಸಿನಿಮಾ ಮೇಲೆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಇತ್ತೀಚೆಗಷ್ಟೇ ಸರಳವಾಗಿ ಮುಹೂರ್ತ ನೆರವೇರಿಸಿಕೊಂಡ ಡೆವಿಲ್ ಶೀರ್ಷಿಕೆಯ ಸಿನಿಮಾದಲ್ಲಿ ದರ್ಶನ್ ನಟಿಸಲಿದ್ದಾರೆ ಎಂದಾಗ, ಅಭಿಮಾನಿ ವಲಯದಲ್ಲಿ ಕುತೂಹಲ ಗರಿಗೆದರಿತ್ತು. ಕಳೆದ ಎರಡು ದಿನಗಳ ಹಿಂದಷ್ಟೇ ಇದೇ ಸಿನಿಮಾ ಕುರಿತು ಹೊಸ ಸುದ್ದಿಯೊಂದು ಹೊರಬಿದ್ದಿತ್ತು. ಡೆವಿಲ್ ಚಿತ್ರಕ್ಕೆ ನಾಯಕಿಯ ಆಯ್ಕೆಯೂ ಆಗಿದೆ ಎಂಬ ವಿಚಾರವೂ ಮೈಲೇಜ್ ಪಡೆದುಕೊಂಡಿತ್ತು. ಇದೀಗ ಹರಿದಾಡುತ್ತಿರುವ ಸುದ್ದಿಗಳೆಲ್ಲ ಸುಳ್ಳು ಎಂದು ಚಿತ್ರತಂಡ ಸ್ಪಷ್ಟನೆ ನೀಡಿದೆ.
ತಾರಕ್ ನಿರ್ದೇಶಕರ ಜತೆಗೆ ದರ್ಶನ್ ಸಿನಿಮಾ
ಈ ಹಿಂದೆ ದರ್ಶನ್ ನಟನೆಯ ತಾರಕ್ ಸಿನಿಮಾ ನಿರ್ದೇಶನ ಮಾಡಿದ್ದ ಮಿಲನಾ ಪ್ರಕಾಶ್, ಡೆವಿಲ್ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಈ ಸಿನಿಮಾದ ಸರಳವಾಗಿ ಸ್ಟ್ರಿಪ್ಟ್ ಪೂಜೆ ನೆರವೇರಿತ್ತು. ಅದಾದ ಬಳಿಕ ಡೆವಿಲ್ ಚಿತ್ರದ ಒಂದಷ್ಟು ಫ್ಯಾನ್ ಮೇಡ್ ಪೋಸ್ಟರ್‌ಗಳು ವೈರಲ್ ಆಗಿದ್ದವು. ಈಗಾಗಲೇ ಚಿತ್ರದ ಅರ್ಧ ಭಾಗದ ಶೂಟಿಂಗ್ ಸಹ ಮುಗಿದಿದೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ, ಚಿತ್ರತಂಡದಿಂದ ಮಾತ್ರ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿರಲಿಲ್ಲ.
ಈ ನಡುವೆ ಇದೇ ಸಿನಿಮಾಕ್ಕೆ ಇಬ್ಬರು ನಾಯಕಿಯರು ಆಯ್ಕೆಯಾಗಿದ್ದಾರೆ ಎಂಬ ವಿಚಾರ ಇತ್ತೀಚೆಗಷ್ಟೇ ಮುನ್ನೆಲೆಗೆ ಬಂದಿತ್ತು. ತುಳು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ರಚನಾ ರೈ ಡೆವಿಲ್; ದಿ ಹೀರೋ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಸದ್ದು ಮಾಡಿತ್ತು. ಇದೀಗ ಈ ನಾಯಕಿ ಆಯ್ಕೆ ವಿಚಾರ ಮತ್ತು ಡೆವಿಲ್ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳಲ್ಲೆ ಸುಳ್ಳು ಎಂದು ನಿರ್ದೇಶಕರು ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ನಿರ್ದೇಶಕ ಪ್ರಕಾಶ್ ವೀರ್ ಹೇಳಿದ್ದು ಹೀಗೆ.
ಡೆವಿಲ್ ನಿರ್ದೇಶಕರ ಸ್ಪಷ್ಟನೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ "ಡೆವಿಲ್" ಚಿತ್ರದ ಸ್ಕ್ರಿಪ್ಟ್ ಪೂಜೆ ಎರಡು ತಿಂಗಳ ಹಿಂದೆ ಸರಳವಾಗಿ ನೆರವೇರಿತ್ತು. ಆದರೆ ಡೆವಿಲ್ ಚಿತ್ರದ ಕುರಿತಂತೆ ಇನ್ನು ಯಾವುದೇ ಪ್ರಚಾರ ಕಾರ್ಯ ಆರಂಭ ಮಾಡಿಲ್ಲ. ಮೊದಮೊದಲು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಯಾವುದೋ ಪೋಸ್ಟರ್ ಹಾಕಿ ಡೆವಿಲ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು.
ಈಗ ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ ಮೇಲ್ಕಂಡ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಸದ್ಯದಲ್ಲೇ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ" ಎಂದಿದ್ದಾರೆ ನಿರ್ದೇಶಕ ಪ್ರಕಾಶ್ ವೀರ್.
ಈ ಒಟಿಟಿಯಲ್ಲಿ ಕಾಟೇರ
ಕಾಟೇರ ಸಿನಿಮಾ ಕನ್ನಡದಲ್ಲಷ್ಟೇ ಬಿಡುಗಡೆ ಆಗಿತ್ತು. ಅದಾದ ಬಳಿಕ ಬೇರೆ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಪರಭಾಷೆಗಳಲ್ಲಿ ಬಿಡುಗಡೆ ಆಗಲಿಲ್ಲ. ಇದೀಗ ನೇರವಾಗಿ ಒಟಿಟಿಯತ್ತ ಕಾಟೇರ ಸಿನಿಮಾ ಕಾಲಿರಿಸಿದೆ. ಜೀ 5 ಒಟಿಟಿಯಲ್ಲಿ ಕಾಟೇರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆ. 9ರಂದು ಈ ಸಿನಿಮಾ ಸ್ಟ್ರೀಮಿಂಗ್ ಆರಂಭಿಸಲಿದೆ. ತರುಣ್ ಸುಧೀರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿತ್ತು. ರಾಕ್‌ಲೈನ್ ವೆಂಕಟೇಶ್ ಸಿನಿಮಾ ನಿರ್ಮಾಣ ಮಾಡಿದ್ದರು.