logo
ಕನ್ನಡ ಸುದ್ದಿ  /  ಮನರಂಜನೆ  /  ‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’ ಡಾಲಿ ಧನಂಜಯ್ ಅಂದು ಹೇಳಿದ ಮಾತೀಗ ಸಿನಿಮಾ ಶೀರ್ಷಿಕೆಯಾಯ್ತು!

‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’ ಡಾಲಿ ಧನಂಜಯ್ ಅಂದು ಹೇಳಿದ ಮಾತೀಗ ಸಿನಿಮಾ ಶೀರ್ಷಿಕೆಯಾಯ್ತು!

Apr 05, 2024 03:59 PM IST

‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’ ಡಾಲಿ ಧನಂಜಯ್ ಅಂದು ಹೇಳಿದ ಮಾತೀಗ ಸಿನಿಮಾ ಶೀರ್ಷಿಕೆ!

    • ಈ ಹಿಂದೆ ಬಡವ ರಾಸ್ಕಲ್‌ ಸಿನಿಮಾದಲ್ಲಿ ಮತ್ತು ಸುದ್ದಿಗೋಷ್ಠಿಯಲ್ಲೂ ನಟ ಧನಂಜಯ್‌ ಮಾತೊಂದನ್ನು ಹೇಳಿದ್ದರು. ಬಡವರ ಮಕ್ಕಳೂ ಬೆಳೀಬೇಕು ಕಣ್ರಯ್ಯ ಎಂದಿದ್ದರು. ಆ ಸಮಯದಲ್ಲಿ ಎಲ್ಲೆಡೆ ವೈರಲ್‌ ಆಗಿದ್ದ ಆ ಡೈಲಾಗ್‌, ಈಗ ಸಿನಿಮಾ ಶೀರ್ಷಿಕೆಯಾಗಿದೆ. 
‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’ ಡಾಲಿ ಧನಂಜಯ್ ಅಂದು ಹೇಳಿದ ಮಾತೀಗ ಸಿನಿಮಾ ಶೀರ್ಷಿಕೆ!
‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’ ಡಾಲಿ ಧನಂಜಯ್ ಅಂದು ಹೇಳಿದ ಮಾತೀಗ ಸಿನಿಮಾ ಶೀರ್ಷಿಕೆ!

Badavra Makloo Belibeku Kanrayya: ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ "ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿತ್ತು. ಈಗ ಆ ಮಾತೇ ಸಿನಿಮಾದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಸಿ.ಎಸ್. ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು.

ಟ್ರೆಂಡಿಂಗ್​ ಸುದ್ದಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಡಾಲಿ ಅವ್ರ ಮಾತ್ರೇ ಸ್ಫೂರ್ತಿಯಾಯ್ತು

 "ನಾನು ಕೋಲಾರ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೆ. ಚಿತ್ರರಂಗದ ಸಾಕಷ್ಟು ಗಣ್ಯರು ನನಗೆ ಪರಿಚಯ. ಎಷ್ಟೋ ಸ್ನೇಹಿತರು ಚಿತ್ರ ನಿರ್ಮಾಣ ಮಾಡುವಂತೆ ಹೇಳುತ್ತಿದ್ದರು. ಈಗ ಕಾಲ ಕೂಡಿ ಬಂದಿದೆ. ಡಾಲಿ ಅವರು ಹೇಳಿದ ಮಾತೇ ಈ ಚಿತ್ರ ನಿರ್ಮಾಣಕ್ಕೆ ಸ್ಪೂರ್ತಿ. ಮಂಜುಕವಿ ಅವರು ಮಾಡಿಕೊಂಡಿರುವ ಕಥೆ ತುಂಬಾ ಚೆನ್ನಾಗಿದೆ. ನಾನು ಕೂಡ ಬಡತನದಿಂದಲೇ ಬಂದಿರುವವನು. ಹಾಗಾಗಿ ಈ ಕಥೆ ತುಂಬಾ ಇಷ್ಟವಾಯಿತು. ನನ್ನ ಸಹೋದರ ಸಮಾನರಾದ ಡಿಸಿಪಿ ದೇವರಾಜ್ ಚಿತ್ರಕ್ಕೆ ಚಾಲನೆ ನೀಡಿದ್ದಾರೆ ಅವರಿಗೆ ಹಾಗೂ ಆಗಮಿಸಿರುವ ಎಲ್ಲರಿಗೂ ಧನ್ಯವಾದ ಎಂದರು ನಿರ್ಮಾಪಕ ಸಿ.ಎಸ್ ವೆಂಕಟೇಶ್.

ಮಧ್ಯಮವರ್ಗದ ಕಥೆಯಿದು

"ಡಾಲಿ ಅವರು ಹೇಳಿದ ಮಾತನ್ನು ಸ್ಪೂರ್ತಿಯಾಗಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ. ಬಡ ಕುಟುಂಬದಲ್ಲಿ ಹುಟ್ಟಿದ ಮಕ್ಕಳಿಗೆ ಎಷ್ಟೇ ಕಲೆ ಇದ್ದರೂ, ಚೆನ್ನಾಗಿ ಓದುವ ಹಂಬಲವಿದ್ದರೂ ಅವರನ್ನು ಬೆಳೆಸಲು ಯಾರು ಮುಂದೆ ಬರುವುದಿಲ್ಲ. ಅವರಲ್ಲಿರುವ ಪ್ರತಿಭೆ ಹಾಗೆ ನಶಿಸಿ ಹೋಗುತ್ತದೆ. ಹಾಗಾಗಬಾರದು ಪ್ರತಿಭೆವುಳ್ಳ ಬಡಮಕ್ಕಳ ಕೀರ್ತಿ ಬೆಳಗಬೇಕು ಇದೇ ಚಿತ್ರದ ಕಥಾಹಂದರ. ಈ ಕಥೆ ಇಷ್ಟವಾಗಿ ಸಿ.ಎಸ್.ವೆಂಕಟೇಶ್ ಅವರು ನಿರ್ಮಾಣಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ" ಎಂದರು ನಿರ್ದೇಶಕ ಮಂಜುಕವಿ.

ಮುಖ್ಯಭೂಮಿಕೆಯಲ್ಲಿ ಸುಚೇಂದ್ರ ಪ್ರಸಾದ್

ಸುಚೇಂದ್ರ ಪ್ರಸಾದ್ ಹಾಗೂ ಸಂಗೀತ ಅವರು ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ಲಾವಣ್ಯ ವೈಭವಿ ಅಭಿನಯಿಸುತ್ತಿದ್ದಾರೆ. ಫ್ರೆಂಡ್ಸ್ ವಾಸು, ಮೂಗೂರು ಸುರೇಶ್, ಚಂದ್ರಪ್ರಭ, ಚೈತ್ರಾ ಕೊಟ್ಟೂರು, ಮಂಜು ಪಾವಗಡ, ಚಿದಾನಂದ್, ಜಗದೀಶ್ ಕೊಪ್ಪ, ಶಿವಾರೆಡ್ಡಿ ಸನತ್, ವಿನೋದ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿರಲಿವೆ. ತಂದೆ‌ - ಮಗಳ ಬಾಂಧವ್ಯದ ಹಾಡೊಂದನ್ನು ಅನುರಾಧ ಭಟ್ ಹಾಡಿದ್ದಾರೆ. ಹಿನ್ನೆಲೆ ಸಂಗೀತ ನೀಡುವುದರೊಂದಿಗೆ ವಿನು ಮನಸು ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ರೇಣುಕುಮಾರ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನ ಹಾಗೂ ಗಿರೀಶ್ ಸಾಕಿ, ಸಂಗೀತ ಶೆಟ್ಟಿ ವಿಕ್ಟರ್ ದಯಾಳ್ ನಿರ್ದೇಶನದ ತಂಡದಲ್ಲಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ