logo
ಕನ್ನಡ ಸುದ್ದಿ  /  ಮನರಂಜನೆ  /  ‘ಡಿಟೆಕ್ಟಿವ್‌ ಗಜವದನ’ ಚಿತ್ರದಲ್ಲಿ ಬಸು ಕುಮಾರ್‌ಗೆ ಜೋಡಿಯಾದ ‘ಶ್ರೀರಸ್ತು ಶುಭಮಸ್ತು’ ಸೀರಿಯಲ್‌ ಸಿರಿ

‘ಡಿಟೆಕ್ಟಿವ್‌ ಗಜವದನ’ ಚಿತ್ರದಲ್ಲಿ ಬಸು ಕುಮಾರ್‌ಗೆ ಜೋಡಿಯಾದ ‘ಶ್ರೀರಸ್ತು ಶುಭಮಸ್ತು’ ಸೀರಿಯಲ್‌ ಸಿರಿ

Dec 23, 2023 03:40 PM IST

google News

‘ಡಿಟೆಕ್ಟಿವ್‌ ಗಜವದನ’ ಚಿತ್ರದಲ್ಲಿ ಬಸು ಕುಮಾರ್‌ಗೆ ಜೋಡಿಯಾದ ಶ್ರೀರಸ್ತು ಶುಭಮಸ್ತು ಸೀರಿಯಲ್‌ ಸಿರಿ

    • ಬಸು ಕುಮಾರ್‌ ನಾಯಕನಾಗಿ ನಟಿಸಲಿರುವ ಡಿಟೆಕ್ಟಿವ್‌ ಗಜವದನ ಸಿನಿಮಾ ಸೆಟ್ಟೇರಿದೆ. ಈ ಚಿತ್ರದಲ್ಲಿ ಶ್ರೀರಸ್ತು ಶುಭಮಸ್ತು ಸೀರಿಯಲ್‌ನ ಸಿರಿ ಖ್ಯಾತಿಯ ಚಂದನಾ ರಾಘವೇಂದ್ರ ನಾಯಕಿಯಾಗಿದ್ದಾರೆ.  
‘ಡಿಟೆಕ್ಟಿವ್‌ ಗಜವದನ’ ಚಿತ್ರದಲ್ಲಿ ಬಸು ಕುಮಾರ್‌ಗೆ ಜೋಡಿಯಾದ ಶ್ರೀರಸ್ತು ಶುಭಮಸ್ತು ಸೀರಿಯಲ್‌ ಸಿರಿ
‘ಡಿಟೆಕ್ಟಿವ್‌ ಗಜವದನ’ ಚಿತ್ರದಲ್ಲಿ ಬಸು ಕುಮಾರ್‌ಗೆ ಜೋಡಿಯಾದ ಶ್ರೀರಸ್ತು ಶುಭಮಸ್ತು ಸೀರಿಯಲ್‌ ಸಿರಿ

Detective Gajavadana: ಈ ಹಿಂದೆ ಮಂಡ್ಯದ ಹುಡುಗರು, ಗರ್ನಲ್ ಚಿತ್ರಗಳನ್ನು ನಿರ್ದೇಶಿಸಿದ್ದ ಜೆ‌.ಜೆ. ಶ್ರೀನಿವಾಸ್ ಇದೀಗ ಮತ್ತೊಂದು ಸಿನಿಮಾ ಮೂಲಕ ಆಗಮಿಸಿದ್ದಾರೆ. ಚಿತ್ರಕ್ಕೆ ಡಿಟೆಕ್ಟಿವ್‌ ಗಜವದನ ಎಂಬ ಶೀರ್ಷಿಕೆ ಇಟ್ಟಿದ್ದು, ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಇಟ್ಟಮಡುವಿನ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿತು.

ಕನ್ನಡ ಚಿತ್ರರಂಗದ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕಳೆದ ಹಲವು ವರ್ಷಗಳಿಂದ ಕಲಾವಿದನಾಗಿ ಸಕ್ರಿಯರಾಗಿರುವ ಬಸು ಕುಮಾರ್, ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಬಗ್ಗೆ ಇಡೀ ತಂಡ ಮಾಹಿತಿ ಹಂಚಿಕೊಂಡಿದೆ. ಮೊದಲಿಗೆ ನಿರ್ದೇಶಕ ಜೆ.ಜೆ. ಶ್ರೀನಿವಾಸ್ ಮಾತನಾಡಿದ್ದಾರೆ.

"ಡಿಟೆಕ್ಟಿವ್‌ ಗಜವದನ" ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಹೆಚ್ಚು ಚಿತ್ರೀಕರಣ ನಡೆಯಲಿದೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಇದಾಗಿದೆ. ಉತ್ತಮ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆಯಿದೆ ಎಂದರು.

ನಾನು ಡಿಟೆಕ್ಟಿವ್‌ ಗಜವದನ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ‌. ನಾನು ಚಿತ್ರದಲ್ಲಿ ಡಿಟೆಕ್ಟಿವ್‌ ಆಗಿರುವುದಿಲ್ಲ. ನನ್ನ ಕುಟುಂಬ ತೊಂದರೆಯಲ್ಲಿ ಸಿಲುಕಿದಾಗ ಡಿಟೆಕ್ಟಿವ್‌ ಆಗುತ್ತೇನೆ. ಕಥೆಯೇ ಚಿತ್ರದ ನಿಜವಾದ ಹೀರೋ ಎನ್ನಬಹುದು ಎಂದರು.

ಶ್ರೀನಿವಾಸ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ಶ್ರೀರಸ್ತು ಶುಭಮಸ್ತು ಸೀರಿಯಲ್‌ ನಟಿ ಚಂದನ ರಾಘವೇಂದ್ರ. ಕಲಾವಿದರಾದ ಎಂ.ಎಸ್.ಉಮೇಶ್, ವಿಜಯ್ ಚೆಂಡೂರ್, ವಿಕ್ರಮ್ ಹಾಗೂ ಸಹ ನಿರ್ಮಾಪಕ ರಾಘವೇಂದ್ರ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕರಾದ ನಾಗೇಶ್ ಕುಮಾರ್ ಹಾಗೂ ಕುಮಾರ್ ಚಿತ್ರತಂಡಕ್ಕೆ ಶುಭ ಕೋರಿದರು.

ಇನ್ನು ತಾರಾಗಣದಲ್ಲಿ ಚಂದನ ರಾಘವೇಂದ್ರ, ಎಂ.ಎಸ್ ಉಮೇಶ್, ವಿಜಯ್ ಚೆಂಡೂರ್, ದಿನೇಶ್ ಮಂಗಳೂರು, ವಿಕ್ರಮ್, ಬಲ ರಾಜವಾಡಿ ಮುಂತಾದವರು ನಟಿಸಿದ್ದಾರೆ. ಎ.ಟಿ.ಸಂಗೀತ ನಿರ್ದೇಶನ, ಶ್ಯಾಮ್ ಛಾಯಾಗ್ರಹಣ ಹಾಗೂ ನಾಗೇಂದ್ರ ಅರಸ್ ಅವರ ಸಂಕಲನ‌ ಚಿತ್ರಕ್ಕಿದೆ. ಜಗದೀಶ್ ನಿಡವಳ್ಳಿ ಕಥೆ ಬರೆದಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ