logo
ಕನ್ನಡ ಸುದ್ದಿ  /  ಮನರಂಜನೆ  /  ಅಂಬೇಡ್ಕರ್‌ ಕುರಿತ ಸಿನಿಮಾಗಳಿಗೆ ನೆರವು, ಬಾಕಿ ಉಳಿದ ಸಬ್ಸಿಡಿ ಜತೆಗೆ ರಾಜ್ಯ ಪ್ರಶಸ್ತಿಯನ್ನೂ ಕೊಡಲಿದ್ದೇವೆ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್‌ ಕುರಿತ ಸಿನಿಮಾಗಳಿಗೆ ನೆರವು, ಬಾಕಿ ಉಳಿದ ಸಬ್ಸಿಡಿ ಜತೆಗೆ ರಾಜ್ಯ ಪ್ರಶಸ್ತಿಯನ್ನೂ ಕೊಡಲಿದ್ದೇವೆ; ಸಿಎಂ ಸಿದ್ದರಾಮಯ್ಯ

Mar 01, 2024 08:31 AM IST

ಅಂಬೇಡ್ಕರ್‌ ಕುರಿತ ಸಿನಿಮಾಗಳಿಗೆ ನೆರವು, ಬಾಕಿ ಉಳಿದ ಸಬ್ಸಿಡಿ ಜತೆಗೆ ರಾಜ್ಯ ಪ್ರಶಸ್ತಿಯನ್ನೂ ಕೊಡಲಿದ್ದೇವೆ; ಸಿಎಂ ಸಿದ್ದರಾಮಯ್ಯ

    • 15ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ಅವರಿಂದ ಅದ್ಧೂರಿ ಚಾಲನೆ ಸಿಕ್ಕಿದೆ. ಇದೇ ವೇಳೆ 2019ರಿಂದ ನಿಲ್ಲಿಸಿದ್ದ ಸಬ್ಸಿಡಿ ಮತ್ತು ರಾಜ್ಯ ಪ್ರಶಸ್ತಿಗಳನ್ನು ನೀಡುವಂತೆ ಚಿತ್ರೋತ್ಸವದ ರಾಯಭಾರಿ ಧನಂಜಯ್‌ ಸಿಎಂ ಬಳಿ ಮನವಿ ಮಾಡಿದರು. ಅದಕ್ಕೆ ಅವರಿಂದಲೂ ಸಮ್ಮತಿ ಸಿಕ್ಕಿದೆ.  
ಅಂಬೇಡ್ಕರ್‌ ಕುರಿತ ಸಿನಿಮಾಗಳಿಗೆ ನೆರವು, ಬಾಕಿ ಉಳಿದ ಸಬ್ಸಿಡಿ ಜತೆಗೆ ರಾಜ್ಯ ಪ್ರಶಸ್ತಿಯನ್ನೂ ಕೊಡಲಿದ್ದೇವೆ; ಸಿಎಂ ಸಿದ್ದರಾಮಯ್ಯ
ಅಂಬೇಡ್ಕರ್‌ ಕುರಿತ ಸಿನಿಮಾಗಳಿಗೆ ನೆರವು, ಬಾಕಿ ಉಳಿದ ಸಬ್ಸಿಡಿ ಜತೆಗೆ ರಾಜ್ಯ ಪ್ರಶಸ್ತಿಯನ್ನೂ ಕೊಡಲಿದ್ದೇವೆ; ಸಿಎಂ ಸಿದ್ದರಾಮಯ್ಯ

BIFFS 2024: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಟ್ರೆಂಡಿಂಗ್​ ಸುದ್ದಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

ಗುರುವಾರ (ಫೆಬ್ರವರಿ 29) ವಿಧಾನಸೌಧದ ಮುಂಭಾಗದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ, ಸಾಧು ಕೋಕಿಲ, ಆರಾಧನಾ ಸೇರಿದಂತೆ ಅನೇಕ ಸಿನಿ ಗಣ್ಯರು ಉಪಸ್ಥಿತರಿದ್ದರು.

ಬೇಡಿಕೆಯ ಪಟ್ಟಿ ಮುಂದಿಟ್ಟ ಡಾಲಿ ಧನಂಜಯ್‌

ಈ ಬಾರಿ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಡಾಲಿ ಧನಂಜಯ ಮಾತನಾಡಿ, ಚಿತ್ರೋದ್ಯಮದ ಪರವಾಗಿ ಒಂದಿಷ್ಟು ಬೇಡಿಕೆಗಳನ್ನು ಸಿಎಂ ಮುಂದಿಟ್ಟರು. 'ಕರೊನಾ ಬಳಿಕ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಇದರ ಜೊತೆಗೆ ಪ್ರಶಸ್ತಿ ಕೂಡ ನಿಂತಿದೆ. ಕಲಾವಿದರಿಗೆ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಕಾಂತರಾ, ಕೆಜಿಎಫ್ ಅಂತಹ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಇದರ ಜೊತೆಗೆ ಸರ್ಕಾರದ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಸದ್ಯ ನಿಂತಿರುವ ಪ್ರಶಸ್ತಿ ಮತ್ತು ಸಬ್ಸಿಡಿಯನ್ನು ಮುಂದುವರಿಸಬೇಕೆಂದು ಚಿತ್ರರಂಗದ ಪರವಾಗಿ ನಾನು ಸಿಎಂ ಬಳಿ ಕೇಳಿಕೊಳ್ಳುತ್ತಿದ್ದೇನೆ' ಎಂದರು.

ಈ ವೇಳೆ ಮಾತನಾಡಿದ ಸಿಎಂ, ಸಿನಿಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದರು.

ಸಬ್ಸಿಡಿ ಮುಂದುವರಿಸುತ್ತೇವೆ

'ಚಿತ್ರೋತ್ಸವಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಾಯವನ್ನು ನೀಡಿದೆ. ಮುಂದೆಯೂ ಸಹ ಚಿತ್ರರಂಗಕ್ಕೆ ಎಲ್ಲಾ ರೀತಿಯ ಸಹಾಯವನ್ನು ಮಾಡಲಿದೆ. ಕನ್ನಡ ಚಿತ್ರರಂಗಕ್ಕೆ ಎಲ್ಲಾ ರೀತಿಯ ಬೆಂಬಲ, ಹಣಕಾಸಿನ ಸಹಕಾರವನ್ನು ಕೊಡುತ್ತೇನೆ. 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಬಾಕಿ ಉಳಿದಿರುವ ಎಲ್ಲಾ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದರು.

ಅಂಬೇಡ್ಕರ್‌ ಕುರಿತ ಸಿನಿಮಾಗಳಿಗೆ ನೆರವು

ಅಂಬೇಡ್ಕರ್ ಅವರು ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಅವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ಚೆಚ್ಚು ಪಾಲಿಸುವಂಥ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದೂ ಸಿಎಂ ಹೇಳಿದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ, ನಟ ಶಿವರಾಜ್ ಕುಮಾರ್, ಅಂತಾರಾಷ್ಟ್ರೀಯ ಚಿತ್ರೋತ್ಸವದ ರಾಯಭಾರಿಯಾದ ನಟ ಡಾಲಿ ಧನಂಜಯ್, ಖ್ಯಾತ ನಿರ್ದೇಶಕ ಜಬ್ಬಾರ್ ಪಟೇಲ್, ಜೆಕ್ ರಿಪಬ್ಲಿಕ್ ದೇಶದ ಚಿತ್ರ ವಿಮರ್ಶಕರಾದ ಮೆಯೆರಾ ಲಾಂಗೆರೊವಾ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ವಿದ್ಯಾಶಂಕರ್, ನಟಿ ಆರಾಧನಾ, ಚಲನಚಿತ್ರ ಅಕಾಡೆಮಿಯ ನಿಯೋಜಿತ ಅಧ್ಯಕ್ಷರಾದ ಸಾಧು ಕೋಕಿಲಾ, ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಮಾರ್ಚ್‌ 7ರ ವರೆಗೆ ಚಿತ್ರೋತ್ಸವ

ಇಂದು ಉದ್ಘಾಟನೆಯಾದ ಚಲನಚಿತ್ರೋತ್ಸವ ಮಾರ್ಚ್​ 7 ರವರೆಗೆ ನಡೆಯಲಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

You are reading this copy on "Hindustan Times Kannada". For latest updates on entertainment, OTT, Web series, Kannada film industry, Kannada serials, Reality shows visit kannada.hindustantimes.com/entertainment

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ