logo
ಕನ್ನಡ ಸುದ್ದಿ  /  ಮನರಂಜನೆ  /  ದೀಕ್ಷಿತ್ ಶೆಟ್ಟಿ ನಟನೆಯ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದಿಂದ ಹೊಸ ಪ್ರಯತ್ನ; ಅನಿಮೇಷನ್‌ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

ದೀಕ್ಷಿತ್ ಶೆಟ್ಟಿ ನಟನೆಯ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದಿಂದ ಹೊಸ ಪ್ರಯತ್ನ; ಅನಿಮೇಷನ್‌ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

May 27, 2024 08:15 PM IST

google News

ದೀಕ್ಷಿತ್ ಶೆಟ್ಟಿ ನಟನೆಯ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದಿಂದ ಹೊಸ ಪ್ರಯತ್ನ; ಅನಿಮೇಷನ್‌ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

    • ಬ್ಲಿಂಕ್‌ ಸಿನಿಮಾ ಮೂಲಕ ಸದ್ಯ ಸುದ್ದಿಯಲ್ಲಿರುವ ನಟ ದೀಕ್ಷಿತ್‌ ಶೆಟ್ಟಿ ಇದೀಗ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾ ಬಿಡುಗಡೆಯ ಕೆಲಸದಲ್ಲಿ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಇದೇ ಚಿತ್ರದ ಅನಿಮೇಷನ್‌ ಟೀಸರ್‌ ಬಿಡುಗಡೆ ಆಗಿ ಸದದ್ದು ಮಾಡುತ್ತಿದೆ. 
ದೀಕ್ಷಿತ್ ಶೆಟ್ಟಿ ನಟನೆಯ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದಿಂದ ಹೊಸ ಪ್ರಯತ್ನ; ಅನಿಮೇಷನ್‌ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ
ದೀಕ್ಷಿತ್ ಶೆಟ್ಟಿ ನಟನೆಯ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದಿಂದ ಹೊಸ ಪ್ರಯತ್ನ; ಅನಿಮೇಷನ್‌ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

Bank of Bhagyalakshmi: ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಚಿತ್ರದ ಅನಿಮೇಷನ್‌ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್‌ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ‌. ಅನಿಮೇಷನ್‌ ಟೀಸರ್ ಗೆ ಬರುತ್ತಿರುವ ರೆಸ್ಪಾನ್ಸ್ ಗೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ದೇಶಕರು.

ರಂಗಿ ತರಂಗ, ಅವನೇ ಶ್ರೀಮನ್ನಾರಾಯಣದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, ದಿಯಾ ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ನಾಯಕರಾಗಿ ನಟಿಸಿದ್ದಾರೆ. ಅಭಿಷೇಕ್ ಎಂ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆದಿದೆ.

ದೀಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯ ಸುಪ್ರಜಾ ರಾಮ ಚಿತ್ರಗಳ ಮೂಲಕ ಜನಪ್ರಿಯರಾಗಿರುವ ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ಎಂ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಭಿಷೇಕ್ ಅವರೆ ಬರೆದಿದ್ದಾರೆ. ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಸಚಿನ್ ಹಾಗೂ ಅಭಿಷೇಕ್ ಅವರ ಸಾರಥ್ಯದ ಪಿನಾಕ ವಿಎಫ್ಎಕ್ಸ್ ಸ್ಟುಡಿಯೋದಲ್ಲೇ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಚಿತ್ರದ ಟೀಸರ್‌ನ ಅನಿಮೇಷನ್‌ ವರ್ಕ್ ನಡೆದಿದೆ.

ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ರಘು ಮೈಸೂರ್ ಕಲಾ ನಿರ್ದೇಶನ ಹಾಗೂ ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ