logo
ಕನ್ನಡ ಸುದ್ದಿ  /  ಮನರಂಜನೆ  /  ಜಗ್ಗೇಶ್‌, ರಾಕ್‌ಲೈನ್‌ ವೆಂಕಟೇಶ್‌, ದರ್ಶನ್‌ ಮನೆಯಲ್ಲಿ ಹುಲಿ ಉಗುರಿಗೆ ಅರಣ್ಯಾಧಿಕಾರಿಗಳ ಶೋಧ

ಜಗ್ಗೇಶ್‌, ರಾಕ್‌ಲೈನ್‌ ವೆಂಕಟೇಶ್‌, ದರ್ಶನ್‌ ಮನೆಯಲ್ಲಿ ಹುಲಿ ಉಗುರಿಗೆ ಅರಣ್ಯಾಧಿಕಾರಿಗಳ ಶೋಧ

Oct 25, 2023 06:29 PM IST

google News

ಜಗ್ಗೇಶ್‌, ರಾಕ್‌ಲೈನ್‌ ವೆಂಕಟೇಶ್‌ ಮತ್ತು ದರ್ಶನ್‌ ಮನೆಯಲ್ಲಿ ಹುಲಿ ಉಗುರಿಗೆ ಅರಣ್ಯಾಧಿಕಾರಿಗಳ ಶೋಧ

    • ಸ್ಯಾಂಡಲ್‌ವುಡ್‌ ಸಿನಿಮಾ ಮಂದಿಗೆ ಹುಲಿ ಉಗುರು ಉರುಳಾಗಿ ಪರಿಣಮಿಸಿದೆ. ಖ್ಯಾತ ನಟರಾದ ದರ್ಶನ್‌, ಜಗ್ಗೇಶ್‌, ನಿಖಿಲ್‌ ಕುಮಾರ್‌ ಸೇರಿ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮನೆಗೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಶೋಧ ಕಾರ್ಯ ಮುಂದುವರಿಸಿದೆ. 
ಜಗ್ಗೇಶ್‌, ರಾಕ್‌ಲೈನ್‌ ವೆಂಕಟೇಶ್‌ ಮತ್ತು ದರ್ಶನ್‌ ಮನೆಯಲ್ಲಿ ಹುಲಿ ಉಗುರಿಗೆ ಅರಣ್ಯಾಧಿಕಾರಿಗಳ ಶೋಧ
ಜಗ್ಗೇಶ್‌, ರಾಕ್‌ಲೈನ್‌ ವೆಂಕಟೇಶ್‌ ಮತ್ತು ದರ್ಶನ್‌ ಮನೆಯಲ್ಲಿ ಹುಲಿ ಉಗುರಿಗೆ ಅರಣ್ಯಾಧಿಕಾರಿಗಳ ಶೋಧ

Tiger Nail Controversy: ಹುಲಿ ಉಗುರು ಧರಿಸಿದ ಸ್ಯಾಂಡಲ್‌ವುಡ್‌ನ ಕಲಾವಿದರ ಮನೆಗೆ ಇದೀಗ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಹುಲಿ ಉಗುರಿಗೆ ಶೋಧ ಕಾರ್ಯ ನಡೆಸುತ್ತಿದೆ. ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌, ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದರಿಂದ ಅವರನ್ನು ಸದ್ಯ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಈ ನಡುವೆ ಅದೇ ರೀತಿಯ ಹುಲಿ ಉಗುರುಳ್ಳ ಪೆಂಡೆಂಟ್‌ ಧರಿಸಿದ ಸಿನಿಮಾ ಮಂದಿಯ ಫೋಟೋಗಳೂ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಆ ಹಿನ್ನೆಲೆಯಲ್ಲಿ ಅಧಿಕಾರಿಗಳೀಗ ಸೆಲೆಬ್ರಿಟಿಗಳ ಮನೆಗಳಲ್ಲಿ ಹುಲಿ ಉಗುರುಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿನ ದರ್ಶನ್‌ ಮನೆ, ಮಲ್ಲೇಶ್ವರಂದಲ್ಲಿನ ಜಗ್ಗೇಶ್‌ ನಿವಾಸ ಸೇರಿ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮನೆಗೂ ಅರಣ್ಯಾಧಿಕಾರಿಗಳು ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ವರ್ತೂರು ಸಂತೋಷ ಅಮಾಯಕ. ಅವರ ವಿರುದ್ಧ ಹೇಗೆ ಕ್ರಮ ಕೈಗೊಳ್ಳಲಾಯಿತೋ ಅದೇ ರೀತಿ ಹುಲಿ ಉಗುರು ಧರಿಸಿದ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಪ್ರಭಾವಿಗಳ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಸೋಷಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

ವನ್ಯಜೀವಿ ಅರಣ್ಯಾಧಿಕಾರಿ ರವೀಂದ್ರಕುಮಾರ್‌ ಹೇಳಿದಂತೆ, ಈಗಾಗಲೇ ಹುಲಿ ಉಗುರು ಧರಿಸಿದ ಸಿನಿಮಾ ಮಂದಿಯ ವಿರುದ್ಧ ಸಾಕಷ್ಟು ದೂರುಗಳು ಬಂದಿವೆ. ಆ ಹಿನ್ನೆಲೆಯಲ್ಲಿ ಅವುಗಳ ನೈಜತೆ ಪರೀಕ್ಷೆಯಲ್ಲಿ ಅದು ಹುಲಿ ಉಗುರು ಎಂದು ಸಾಬೀತಾದರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು. ಅದರಂತೆ, ಇದೀಗ ದರ್ಶನ್‌, ಜಗ್ಗೇಶ್‌ ಮತ್ತು ರಾಕ್‌ಲೈನ್‌ ಮನೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಇತ್ತ ನನ್ನ ಬಳಿ ಇರುವುದು ಹುಲಿ ಉಗುರೇ ಎಂದು ಸ್ವತಃ ಜಗ್ಗೇಶ್‌ ಈ ಹಿಂದೆ ಹೇಳಿಕೊಂಡಿದ್ದರು. ಅಂದಿನ ಹೇಳಿಕೆಯಿಂದ ಅವರೂ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನಿಖಿಲ್‌ ಮನೆಯಲ್ಲೂ ಶೋಧ

ನಟ, ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿ ಮನೆಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಶೋಧ ಮುಂದುವರಿಸಿದೆ. ಇತ್ತ ನಿಖಿಲ್‌ ಫೋಟೋ ಸಹ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ನಿಖಿಲ್‌ ಪೋಸ್ಟ್‌ ಹಂಚಿಕೊಂಡಿದ್ದರು. "ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ