logo
ಕನ್ನಡ ಸುದ್ದಿ  /  ಮನರಂಜನೆ  /  ನಟ ಡಾಲಿ ಧನಂಜಯ್‌ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿ, ಆದೇಶ ಹೊರಡಿಸಿದ ಸರಕಾರ

ನಟ ಡಾಲಿ ಧನಂಜಯ್‌ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿ, ಆದೇಶ ಹೊರಡಿಸಿದ ಸರಕಾರ

Praveen Chandra B HT Kannada

Feb 28, 2024 07:45 PM IST

ನಟ ಡಾಲಿ ಧನಂಜಯ್‌ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿ

    • ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬ್ರಾಂಡ್‌ ಅಂಬಾಸಿಡರ್‌ ಆಗಿ ಕರ್ನಾಟಕ ಸರಕಾರವು ನಟ ಡಾಲಿ ಧನಂಜಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 29ರಿಂದ ಮಾರ್ಚ್‌ 7ರವರೆಗೆ ಬೆಂಗಳೂರು ಫಿಲ್ಮ್‌ ಫೆಸ್ಟಿವಲ್‌ (BIFFES 2024) ನಡೆಯಲಿದೆ. 
ನಟ ಡಾಲಿ ಧನಂಜಯ್‌ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿ
ನಟ ಡಾಲಿ ಧನಂಜಯ್‌ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬ್ರಾಂಡ್‌ ಅಂಬಾಸಿಡರ್‌ ಆಗಿ ಕರ್ನಾಟಕ ಸರಕಾರವು ನಟ ಡಾಲಿ ಧನಂಜಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 29ರಿಂದ ಮಾರ್ಚ್‌ 7ರವರೆಗೆ ನಡೆಯುವ ಸಿನಿಮೋತ್ಸವಕ್ಕೆ ಡಾಲಿ ಧನಂಜಯ್‌ ಅವರನ್ನು ನೇಮಕ ಮಾಡಲಾಗಿದೆ. ಡಾಲಿ ಧನಂಜಯ್‌ ಈಗಾಗಲೇ ಕರ್ನಾಟಕದ ಲಿಡ್ಕರ್‌ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬ್ಲಿಂಕ್‌ಗೆ ಬಹುಪರಾಕ್‌ ಸಿಗ್ತಿದ್ದಂತೆ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದ ಜತೆಗೆ ಬರ್ತಿದ್ದಾರೆ ದೀಕ್ಷಿತ್‌ ಶೆಟ್ಟಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಸರಕಾರದ ಆದೇಶದಲ್ಲೇನಿದೆ?

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್‌ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು ಕೋರಿರುತ್ತಾರೆ. ಇದೀಗ ಸರಕಾರ ಇವರನ್ನು ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಿದೆ ಎಂದು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 29ರಿಂದ ಬೆಂಗಳೂರು ಸಿನಿಮೋತ್ಸವ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯು ಗುರುವಾರ ಫೆಬ್ರವರಿ 19ರಿಂದ ಆರಂಭವಾಗಲಿದೆ. 50 ದೇಶಗಳ ಸುಮಾರು 180 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ನಾಳೆ ನೀಡಲಿದ್ದಾರೆ. ನಾಳೆಯಿಂದ ಹಲವು ಕನ್ನಡ ಚಲನಚಿತ್ರಗಳು ಸಿನಿಮೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಅಮರಶಿಲ್ಪಿ ಜಕಣಾಚಾರಿ, ಬೆಳ್ಳಿಮೋಡ, ಒಂದಾನೊಂದು ಕಾಲದಲ್ಲಿ, ಅಂಥ, ಮಯೂರ, ತಾಯಿ ಸಾಹೇಬ, ಕಾಟೇರ, ಟಗರು ಪಲ್ಯ, ಕೌಶಲ್ಯ ಸುಪ್ರಜಾ ರಾಮಾ, ಸಪ್ತ ಸಾಗರದಾಚೆ ಎಲ್ಲೋ ಮುಂತಾದ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಒಟ್ಟು 180 ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಸುಮಾರು 50 ದೇಶಗಳು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್‌ ಕುಮಾರ್‌ ಕಲಾಭವನ, ಸುಚಿತ್ರಾ ಫಿಲ್ಮ್‌ ಸೊಸೈಟಿ ಬನಶಂಕರಿ, ಓರಿಯನ್‌ ಮಾಲ್‌, ಡಾ. ರಾಜ್‌ಕುಮಾರ್‌ ಭವನ ಮತ್ತು ಸುಚಿತ್ರ ಅಕಾಡೆಮಿಗಳಲ್ಲಿ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ