logo
ಕನ್ನಡ ಸುದ್ದಿ  /  ಮನರಂಜನೆ  /  ಕಾವೇರಿ ವಿವಾದ; ಸರ್ವ ಪಕ್ಷದ ನಾಯಕರ ಒಗ್ಗಟ್ಟಿಗೆ ಮನವಿ ಮಾಡಿದ ನಟ ಸುದೀಪ್‌

ಕಾವೇರಿ ವಿವಾದ; ಸರ್ವ ಪಕ್ಷದ ನಾಯಕರ ಒಗ್ಗಟ್ಟಿಗೆ ಮನವಿ ಮಾಡಿದ ನಟ ಸುದೀಪ್‌

Rakshitha Sowmya HT Kannada

Sep 26, 2023 01:32 PM IST

ಕಾವೇರಿ ವಿವಾದದ ಕುರಿತು ಮತ್ತೊಂದು ಟ್ವೀಟ್‌ ಮಾಡಿದ ಸುದೀಪ್

  • ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ.

ಕಾವೇರಿ ವಿವಾದದ ಕುರಿತು ಮತ್ತೊಂದು ಟ್ವೀಟ್‌ ಮಾಡಿದ ಸುದೀಪ್
ಕಾವೇರಿ ವಿವಾದದ ಕುರಿತು ಮತ್ತೊಂದು ಟ್ವೀಟ್‌ ಮಾಡಿದ ಸುದೀಪ್ (PC: @MoJSDoWRRDGR, Kiccha Universe)

ಮತ್ತೆ ಕಾವೇರಿ ಸಮಸ್ಯೆ ಶುರುವಾಗಿದೆ. ರಾಜ್ಯದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಅತ್ತ ತಮಿಳುನಾಡು ರೈತರು ಕೂಡಾ ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ಧಾರೆ. ಇಂದು (ಸೆಪ್ಟೆಂಬರ್‌ 26ಕ್ಕೆ) ಬೆಂಗಳೂರು ಬಂದ್‌ ಕರೆ ನೀಡಿಲಾಗಿದ್ದು ಸಿನಿಮಾ ಮಂದಿ ಚಿತ್ರೀಕರಣ, ಸಿನಿಮಾ ಪ್ರದರ್ಶನ ನಿಲ್ಲಿಸಿ ಬಂದ್‌ಗೆ ಬೆಂಬಲ ನೀಡುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಎಲ್ಲಾ ಹೋರಾಟಗಳಲ್ಲೂ ನಿಮ್ಮೊಂದಿಗೆ ಇದ್ದೇನೆ

ಇತ್ತೀಚೆಗೆ ಕಾವೇರಿ ಹೋರಾಟಕ್ಕೆ ಬೆಂಬಲಿಸಿ ಟ್ವೀಟ್‌ ಮಾಡಿದ್ದ ನಟ ಸುದೀಪ್‌ ಈಗ ಮತ್ತೊಂದು ಟ್ವೀಟ್‌ ಮಾಡಿದ್ದಾರೆ. ಕಾವೇರಿ ವಿವಾದವನ್ನು ಬಗೆಹರಿಸುವ ವಿಚಾರದಲ್ಲಿ ಎಲ್ಲಾ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದೆ ಬರಬೇಕು ಎಂದು ಮನವಿ ಮಾಡಿದ್ದಾರೆ. "ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ ಜಲ ಭಾಷೆಯ ಎಲ್ಲಾ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ.

ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಗೆ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ - ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ."

ಸರ್ವ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಬರಬೇಕು

"ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ - ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲಾ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ."

"ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ - ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ". ನಮ್ಮ ಜಲ ನಮ್ಮಹಕ್ಕು, ಪ್ರೀತಿಯಿಂದ ನಿಮ್ಮ ಕಿಚ್ಚ ಎಂದು ಸುದೀಪ್‌ ಸುದೀರ್ಘ ಪತ್ರ ಬರೆದಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ