logo
ಕನ್ನಡ ಸುದ್ದಿ  /  ಮನರಂಜನೆ  /  Manvita Kamath: ಕ್ಯಾಪ್ಚರ್ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರಗೆ ಮಗಳಾದ ಮಾನ್ವಿತಾ ಕಾಮತ್

Manvita Kamath: ಕ್ಯಾಪ್ಚರ್ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರಗೆ ಮಗಳಾದ ಮಾನ್ವಿತಾ ಕಾಮತ್

Oct 26, 2023 11:06 AM IST

Manvita Kamath: ಹಾರರ್‌ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರಗೆ ಮಗಳಾದ ಮಾನ್ವಿತಾ ಕಾಮತ್

    • Manvita Kamath: ಸ್ಯಾಂಡಲ್‌ವುಡ್‌ ನಟಿ ಪ್ರಿಯಾಂಕಾ ಉಪೇಂದ್ರ ನಾಯಕಿಯಾಗಿ ನಟಿಸುತ್ತಿರುವ ಕ್ಯಾಪ್ಚರ್‌ ಚಿತ್ರದ ಬಳಗಕ್ಕೆ ನಟಿ ಮಾನ್ವಿತಾ ಕಾಮತ್‌ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕಾಗೆ ಮಗಳಾಗಿ ನಟಿಸಿದ್ದಾರೆ. 
Manvita Kamath: ಹಾರರ್‌ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರಗೆ ಮಗಳಾದ ಮಾನ್ವಿತಾ ಕಾಮತ್
Manvita Kamath: ಹಾರರ್‌ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರಗೆ ಮಗಳಾದ ಮಾನ್ವಿತಾ ಕಾಮತ್

Manvita Kamath: ಕೆಂಡಸಂಪಿಗೆ ಸಿನಿಮಾ ಮೂಲಕ ಚಂದನವನಕ್ಕೆ ಪರಿಚಿತರಾದ ನಟಿ ಮಾನ್ವಿತಾ ಕಾಮತ್‌, ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದಾದ ಬಳಿಕ ಕೊಂಚ ಗ್ಯಾಪ್‌ ಪಡೆದುಕೊಂಡಿದ್ದ ಈ ನಟಿ ಇದೀಗ ಮತ್ತೆ ಆಗಮಿಸಿದ್ದಾರೆ. ಮಮ್ಮಿ ಸಿನಿಮಾ ಖ್ಯಾತಿಯ ಲೋಹಿತ್‌ ನಿರ್ದೇಶನದಲ್ಲಿ ಸಿದ್ಧವಾಗುತ್ತಿರುವ ಕ್ಯಾಪ್ಚರ್‌ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಿಯಾಂಕಾ ಉಪೇಂದ್ರ ನಾಯಕಿಯಾಗಿ ನಟಿಸುತ್ತಿರುವ ಕ್ಯಾಪ್ಚರ್‌ ಚಿತ್ರದಲ್ಲಿ, ಅವರ ಮಗಳಾಗಿ ಮಾನ್ವಿತಾ ಕಾಣಿಸಿಕೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬ್ಲಿಂಕ್‌ಗೆ ಬಹುಪರಾಕ್‌ ಸಿಗ್ತಿದ್ದಂತೆ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದ ಜತೆಗೆ ಬರ್ತಿದ್ದಾರೆ ದೀಕ್ಷಿತ್‌ ಶೆಟ್ಟಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಕ್ಯಾಪ್ಚರ್ ಚಿತ್ರ ಹಾರರ್ ಶೈಲಿಯಲ್ಲಿ ಮೂಡಿಬರುತ್ತಿರುವ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ.

ನನ್ನ ಮೊದಲ ಹಾರರ್‌ ಸಿನಿಮಾ

ಈ ಪಾತ್ರದ ಬಗ್ಗೆ ಮಾಹಿತಿ ನೀಡುವ ಮಾನ್ವಿತಾ, 'ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿದ್ದೇನೆ. ಮೊದಲ ತುಂಬಾ ಭಯವಿತ್ತು. ಆದರೆ ಪಾತ್ರ ಚೆನ್ನಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ. 15 ದಿನಗಳು ಗೋವಾದಲ್ಲಿ ಶೂಟಿಂಗ್ ಮಾಡಿದ್ವಿ, ಪ್ರಿಯಾಂಕಾ ಅವರ ಜೊತೆ ಕೆಲಸ ಮಾಡಿದ್ದು ತುಂಬಾ ಇಷ್ಟವಾಯಿತು. ಶೂಟಿಂಗ್ ಮುಗಿಸಿ ಮನೆಗೆ ಬಂದಾಗ ತುಂಬಾ ದೃಷ್ಟಿ ಆಗಿತ್ತು ಅನಿಸುತ್ತೆ. ಜ್ವರ ಕೂಡ ಬಂದಿತ್ತು. ದೃಷ್ಟಿ ತೆಗಿಸಿಕೊಂಡ ಮೇಲೆ ಸರಿ ಆಯಿತು' ಎಂದು ಹೇಳಿದರು.

ಮಾನ್ವಿತಾ ಕೊನೆಯದಾಗಿ 'ಶಿವ 143' ಸಿನಿಮಾದಲ್ಲಿ ನಟಿಸಿದ್ದರು. ಇದೀಗ ವರ್ಷದ ಬಳಿಕ ತೆರೆಮೇಲೆ ಬರುತ್ತಿದ್ದಾರೆ. ಕ್ಯಾಪ್ಚರ್ ಸಿನಿಮಾದಲ್ಲಿ ಮಾನ್ವಿತಾ ಲುಕ್ ಹೇಗಿರಲಿದೆ ಎನ್ನುವುದು ಸದ್ಯದಲ್ಲೇ ರಿವೀಲ್ ಆಗಲಿದೆ. ಕ್ಯಾಪ್ಚರ್ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ