logo
ಕನ್ನಡ ಸುದ್ದಿ  /  ಮನರಂಜನೆ  /  Photo Movie Trailer: ‘ಫೋಟೋ’ದಲ್ಲಿ ಲಾಕ್‌ಡೌನ್‌ ಹಾಡು ಪಾಡು; ಟ್ರೇಲರ್‌ ಕಂಡು ಮಾತೇ ಬರ್ತಿಲ್ಲ ಎಂದ ಡಾಲಿ ಧನಂಜಯ್‌

Photo Movie Trailer: ‘ಫೋಟೋ’ದಲ್ಲಿ ಲಾಕ್‌ಡೌನ್‌ ಹಾಡು ಪಾಡು; ಟ್ರೇಲರ್‌ ಕಂಡು ಮಾತೇ ಬರ್ತಿಲ್ಲ ಎಂದ ಡಾಲಿ ಧನಂಜಯ್‌

Feb 22, 2024 04:04 PM IST

Photo Movie Trailer: ‘ಫೋಟೋ’ದಲ್ಲಿ ಲಾಕ್‌ಡೌನ್‌ ಹಾಡು ಪಾಡು; ಟ್ರೇಲರ್‌ ಕಂಡು ಮಾತೇ ಬರ್ತಿಲ್ಲ ಎಂದ ಡಾಲಿ ಧನಂಜಯ್‌

    • ಶ್ರೀರಂಗಪಟ್ಟದಲ್ಲಿರುವ ಪ್ರಕಾಶ್ ರಾಜ್ ಒಡೆತನದ ನಿರ್ದಿಗಂತ ಫಾರಂ ಹೌಸ್ ನಲ್ಲಿ ಫೋಟೋ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಲಾಕ್‌ಡೌನ್‌ನಲ್ಲಿ ನಡೆದ ಘಟನೆಗಳನ್ನೇ ಸ್ಪೂರ್ತಿಯಾಗಿಸಿಕೊಂಡು, ಸಿನಿಮಾ ಮಾಡಿದ್ದಾರೆ ನಿರ್ದೇಶಕ ಉತ್ಸವ್.‌ 
Photo Movie Trailer: ‘ಫೋಟೋ’ದಲ್ಲಿ ಲಾಕ್‌ಡೌನ್‌ ಹಾಡು ಪಾಡು; ಟ್ರೇಲರ್‌ ಕಂಡು ಮಾತೇ ಬರ್ತಿಲ್ಲ ಎಂದ ಡಾಲಿ ಧನಂಜಯ್‌
Photo Movie Trailer: ‘ಫೋಟೋ’ದಲ್ಲಿ ಲಾಕ್‌ಡೌನ್‌ ಹಾಡು ಪಾಡು; ಟ್ರೇಲರ್‌ ಕಂಡು ಮಾತೇ ಬರ್ತಿಲ್ಲ ಎಂದ ಡಾಲಿ ಧನಂಜಯ್‌

Photo Trailer: ಕನ್ನಡದಲ್ಲೀಗ ಕಂಟೆಂಟ್ ಆಧಾರಿತ ಸಿನಿಮಾಗಳ ಪ್ರಭೆ ಜೋರಾಗಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಚಿತ್ರ ಫೋಟೋ. ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಈ ಸಿನಿಮಾದ ಟ್ರೇಲರ್‌  ಅನಾವರಣಗೊಂಡಿದೆ. ಡಾಲಿ ಧನಂಜಯ್ ಹಾಗೂ ಲೂಸಿಯಾ ಖ್ಯಾತಿಯ ಪವನ್ ಕುಮಾರ್ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬ್ಲಿಂಕ್‌ಗೆ ಬಹುಪರಾಕ್‌ ಸಿಗ್ತಿದ್ದಂತೆ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದ ಜತೆಗೆ ಬರ್ತಿದ್ದಾರೆ ದೀಕ್ಷಿತ್‌ ಶೆಟ್ಟಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಶ್ರೀರಂಗಪಟ್ಟದಲ್ಲಿರುವ ಪ್ರಕಾಶ್ ರಾಜ್ ಒಡೆತನದ ನಿರ್ದಿಗಂತ ಫಾರಂ ಹೌಸ್‌ನಲ್ಲಿ ಫೋಟೋ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಲೇಖಕ ಹಾಗೂ ಹಿರಿಯ ಪತ್ರಕರ್ತ ಜೋಗಿ, ಫೋಟೋ ಚಿತ್ರ ಪ್ರೆಸೆಂಟ್ ಮಾಡಿರುವ ಪ್ರಕಾಶ್ ರಾಜ್, ನಿರ್ದೇಶಕ ಉತ್ಸವ್ ಗೋನವಾರ ಸೇರಿದಂತೆ ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.

“ಉತ್ಸವ್ ಅವರು ತುಂಬಾ ಚೆನ್ನಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ತುಂಬಾ ಖುಷಿ ವಿಚಾರ ಏನೆಂದರೆ ಇತ್ತೀಚೆಗೆ ಬರುತ್ತಿರುವ ಯುವ ನಿರ್ದೇಶಕರು ಒಳ್ಳೊಳ್ಳೆ ಸಿನಿಮಾಗಳನ್ನು ಬೇರೆ ಬೇರೆ ರೀತಿಯ ಸಿನಿಮಾಗಳನ್ನು ನಮ್ಮ ಕನ್ನಡದ ಜನಗಳ ಮುಂದೆ ತರುತ್ತಿದ್ದಾರೆ. ಅದು ತುಂಬಾ ಖುಷಿ ವಿಚಾರ. ಆ ರೀತಿಯ ಸಿನಿಮಾಗಳಿಗೆ ಒಬ್ಬೊಬ್ಬರು ಜೊತೆಯಾಗುತ್ತಿದ್ದಾರೆ. ಈ ಚಿತ್ರಕ್ಕೆ ಪ್ರಕಾಶ್ ರಾಜ್ ಸರ್ ಜೊತೆಯಾಗಿದ್ದಾರೆ”

“ನಾನು ಮೈಸೂರಿಗೆ ಬಂದಾಗ ಎರಡು ಮೂರು ಬಾರಿ ಇಲ್ಲಿಗೆ ಬಂದಿದ್ದೇನೆ. ಒಂದು ಗುರಿ ಇಟ್ಕೊಂಡು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಹೇಗೆ ಟೈಮ್ ಆಗುತ್ತದೆಯೋ ಗೊತ್ತಿಲ್ಲ. ತೋಟಗಾರಿಕೆ, ರಂಗಭೂಮಿ ಎಲ್ಲವನ್ನೂ ತುಂಬಾ ಚೆನ್ನಾಗಿ ತೆಗೆದುಕೊಂಡು ಹೋಗುತ್ತಿದ್ದಾರೆ. ಫೋಟೋ ಕಾಡುವ ಸಿನಿಮಾ. ಉತ್ಸವ ಅವರಿಗೆ ಒಳ್ಳೆಯದು ಆಗಲಿ. 22 23 ವರ್ಷಕ್ಕೆ ಈ ರೀತಿ ಕಥೆ ಹೇಳಬೇಕು ಅಂತಾ ಪ್ರೆಸೆಂಟ್ ಮಾಡಿರುವುದು ಖುಷಿ” ಎಂದರು ಡಾಲಿ ಧನಂಜಯ್. 

ಲೂಸಿಯಾ ಪವನ್ ಮಾತನಾಡಿ, ಫೋಟೋ ಸಿನಿಮಾದ ಪೋಸ್ಟರ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಎಲ್ಲರೂ ಪೋಸ್ಟ್ ಮಾಡುತ್ತಿದ್ದರು. ತುಂಬಾ ಚೆನ್ನಾಗಿದೆ ಅಂತಾ ಫೀಡ್ ಬ್ಯಾಕ್ ಬರುತ್ತಿತ್ತು. ನಾನು ಸಿನಿಮಾ ನೋಡಿದ್ದೇನೆ. ತುಂಬಾ ಪ್ರಭಾವ ಬೀರಿತು. ಲಾಕ್ ಡೌನ್ ಕಷ್ಟಗಳನ್ನು ಸಿನಿಮ್ಯಾಟಿಕ್ ಆಗಿ ನೋಡುವುದು ಬಹಳ ಇಂಪ್ಯಾಕ್ಟ್ ಆಗುತ್ತದೆ. ಮೇಕಿಂಗ್ ನೋಡಿದಾಗ ಬಹಳಷ್ಟು ಸ್ಪೂರ್ತಿಯಾಯ್ತು. ಇಡೀ ತಂಡಕ್ಕೆ ಒಳ್ಳೆಯದು ಆಗಲಿ ಎಂದರು.

“ಲಾಕ್ ಡೌನ್‌ಗೂ ಮುಂಚೆ ನಾನು ಕೂರ್ಗ್‌ಗೆ  ಹೋಗಿದ್ದೆ. ಆ ಸಮಯದಲ್ಲೊಂದು ಆರ್ಟಿಕಲ್ ಓದಿದ್ದೆ. ಗಂಗಮ್ಮ ಎಂಬ ಗರ್ಭಿಣಿ ಬೆಂಗಳೂರಿಂದ ಊರಿಗೆ ಹೋಗಬೇಕಾದರೆ ಮಧ್ಯೆದಲ್ಲಿ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿ ಸತ್ತು ಹೋಗ್ತಾರೆ. ಬಳ್ಳಾರಿ ಹತ್ತಿರ. ಈ ಆರ್ಟಿಕಲ್ ತುಂಬಾ ಕಾಡಿತು. ಈ ವಿಷ್ಯ ಡಾಕ್ಯುಮೆಂಟ್ ಆಗಬೇಕು ಎಂದು ಅನಿಸಿತು. ಆಗ ಬರೆಯಲು ಶುರು ಮಾಡಿದೆ. ಆ ನಂತರ ಅದನ್ನು ಸಿನಿಮಾ ಮಾಡಿದೆ” ಎಂದರು ನಿರ್ದೇಶಕ ಉತ್ಸವ್ ಗೋನವಾರ.

ಮಸಾರಿ ಟಾಕೀಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಫೋಟೋ ಸಿನಿಮಾದಲ್ಲಿ ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ಜಹಾಂಗೀರ್ ಮತ್ತು ವೀರೇಶ್ ಗೊನ್ವಾರ್ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಅವರು ಕ್ಯಾಮೆರಾ ಹಿಡಿದಿದ್ದು ಮತ್ತು ರವಿ ಹಿರೇಮಠ್ ಹಿನ್ನೆಲೆ ಸಂಗೀತ, ಶಿವರಾಜ್ ಮೆಹೂ ಕತ್ತರಿ ಕೆಲಸ ಚಿತ್ರಕ್ಕಿದೆ. ಮಾರ್ಚ್ 15ಕ್ಕೆ  ಫೋಟೋ ಸಿನಿಮಾ ತೆರೆಗೆ ಬರಲಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ