logo
ಕನ್ನಡ ಸುದ್ದಿ  /  ಮನರಂಜನೆ  /  ಕನ್ನಡದಲ್ಲಿ ಇದೇ ಮೊದಲು, ನಾಯಕಿಯ 60 ಅಡಿ ಕಟೌಟ್‌; ಪ್ರಿಯಾಂಕಾ ಉಪೇಂದ್ರ ಕ್ಯಾಪ್ಚರ್‌ ಸಿನಿಮಾ ಟೈಟಲ್‌ ಅನಾವರಣ

ಕನ್ನಡದಲ್ಲಿ ಇದೇ ಮೊದಲು, ನಾಯಕಿಯ 60 ಅಡಿ ಕಟೌಟ್‌; ಪ್ರಿಯಾಂಕಾ ಉಪೇಂದ್ರ ಕ್ಯಾಪ್ಚರ್‌ ಸಿನಿಮಾ ಟೈಟಲ್‌ ಅನಾವರಣ

Oct 18, 2023 10:15 AM IST

ಕನ್ನಡದಲ್ಲಿ ಇದೇ ಮೊದಲು, ನಾಯಕಿಯ 60 ಅಡಿ ಕಟೌಟ್‌; ಪ್ರಿಯಾಂಕಾ ಉಪೇಂದ್ರ ಕ್ಯಾಪ್ಚರ್‌ ಸಿನಿಮಾ ಟೈಟಲ್‌ ಅನಾವರಣ

    • Priyanka Upendra: ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾದ ಶೀರ್ಷಿಕೆ ಲಾಂಚ್‌ ಕೊಂಚ ವಿಭಿನ್ನವಾಗಿ ನೆರವೇರಿದೆ. 60 ಅಡಿಯ ಕಟೌಟ್‌ ನಿರ್ಮಿಸಿ, ಆ ಮೂಲಕ ಚಿತ್ರದ ಫಸ್ಟ್‌ ಲುಕ್‌ ಮತ್ತು ಶೀರ್ಷಿಕೆ ರಿವೀಲ್‌ ಮಾಡಲಾಗಿದೆ. 
ಕನ್ನಡದಲ್ಲಿ ಇದೇ ಮೊದಲು, ನಾಯಕಿಯ 60 ಅಡಿ ಕಟೌಟ್‌; ಪ್ರಿಯಾಂಕಾ ಉಪೇಂದ್ರ ಕ್ಯಾಪ್ಚರ್‌ ಸಿನಿಮಾ ಟೈಟಲ್‌ ಅನಾವರಣ
ಕನ್ನಡದಲ್ಲಿ ಇದೇ ಮೊದಲು, ನಾಯಕಿಯ 60 ಅಡಿ ಕಟೌಟ್‌; ಪ್ರಿಯಾಂಕಾ ಉಪೇಂದ್ರ ಕ್ಯಾಪ್ಚರ್‌ ಸಿನಿಮಾ ಟೈಟಲ್‌ ಅನಾವರಣ

Capture First Look: ಕೆಲ ವರ್ಷಗಳಿಂದ ನಾಯಕಿ ಪ್ರಧಾನ ಸಿನಿಮಾಗಳ ಮೂಲಕವೇ ಹೆಚ್ಚು ಗುರುತಿಸಿಕೊಂಡಿದ್ದಾರೆ ನಟಿ ಪ್ರಿಯಾಂಕಾ ಉಪೇಂದ್ರ. ಹೊಸ ಪ್ರಯತ್ನಗಳ ಮೂಲಕ ಭಿನ್ನ ವಿಭಿನ್ನ ಚಿತ್ರಗಳ ಮೂಲಕವೂ ಆಗಮಿಸುತ್ತಿರುತ್ತಾರೆ. ಇದೀಗ ಅವರ ಸಿನಿಮಾ ಬತ್ತಳಿಕೆಯಿಂದ ಅಂಥದ್ದೇ ಹೊಸ ಸಿನಿಮಾ ಘೋಷಣೆ ಆಗಿದೆ. ಆ ಚಿತ್ರಕ್ಕೆ ಕ್ಯಾಪ್ಚರ್‌ ಎಂಬ ಶೀರ್ಷಿಕೆ ಸಹ ಇಡಲಾಗಿತ್ತು, ಇತ್ತೀಚೆಗಷ್ಟೇ ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕಟೌಟ್‌ ನಿಲ್ಲಿಸುವ ಮೂಲಕ ಈ ಸಿನಿಮಾ ಘೋಷಣೆ ಮಾಡಿದ್ದಾರೆ ನಿರ್ದೇಶಕರು.

ಟ್ರೆಂಡಿಂಗ್​ ಸುದ್ದಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

ಪ್ರಿಯಾಂಕಾ ಉಪೇಂದ್ರ ಮತ್ತೊಂದು ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಕ್ಯಾಪ್ಚರ್ ತಂಡ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅಭಿಮಾನಿಗಳ ಮಧ್ಯೆ ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷವಾಗಿತ್ತು. ಸ್ಯಾಂಡಲ್‌ವುಡ್‌ನಲ್ಲೇ ಮೊದಲ ಬಾರಿಗೆ ನಾಯಕಿಯೊಬ್ಬರ 60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ ಸಿನಿಮಾ ಪೋಸ್ಟರ್‌ ಬಿಡುಗಡೆ ಮಾಡಿರುವುದು ವಿಶೇಷ.

ಈ ಸಿನಿಮಾಗೆ ಮಮ್ಮಿ, ದೇವಕಿ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‌ನ 3ನೇ ಸಿನಿಮಾ ಇದಾಗಿದೆ. ಈ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅಂದಹಾಗೆ ರವಿರಾಜ್ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ.

ಸಿಸಿಟಿವಿ ಕಾನ್ಸೆಪ್ಟ್‌ ಸಿನಿಮಾ

ವೀರೇಶ್ ಚಿತ್ರಮಂದಿರದ ಮುಂಭಾಗದಲ್ಲಿ ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕೌಟೌಟ್ ಪೋಸ್ಟರ್ ನಿಲ್ಲಿಸುವ ಮೂಲಕ ಸಿನಿಮಾದ ಟೈಟಲ್ ಪೋಸ್ಟರ್ ರಿವೀಲ್ ಮಾಡಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪೋಸ್ಟರ್ ಲಾಂಚ್ ಮಾಡಿದರು. ಕ್ಯಾಪ್ಚರ್ ಬಗ್ಗೆ ಹೇಳುವುದಾದರೆ ಹಾರರ್ ಅಂದಮೇಲೆ ಭಯ, ಕುತೂಹಲ, ಟ್ವಿಸ್ಟ್‌ಗಳು ಇದ್ದೇ ಇರುತ್ತೆ. ಇದೆಲ್ಲದರ ಜೊತೆಗೆ ಈ ಸಿನಿಮಾ ಒಂದು ವಿಭಿನ್ನ ಅನುಭವ ನೀಡಲಿದೆ. ಯಾಕೆಂದ್ರೆ ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ ಎಂಬುದು ಚಿತ್ರತಂಡದ ಮಾತು.

ಸೈಲೆಂಟ್ ಆಗಿ ಸಿನಿಮಾ ಚಿತ್ರೀಕರಣ ಮುಗಿಸಿ ಟೈಟಲ್ ಪೋಸ್ಟರ್ ಮೂಲಕ ಸದ್ದು ಮಾಡುತ್ತಿರುವ ಕ್ಯಾಪ್ಚರ್ ಚಿತ್ರಮಂದಿರದ ಅಂಗಳಕ್ಕೆ ಬರಲು ಎದುರು ನೋಡುತ್ತಿದೆ. ಚಿತ್ರಕ್ಕೆ ಎಸ್ ಪಾಂಡಿಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದು, ರವಿಚಂದ್ರನ್ ಅವರ ಸಂಕಲನವಿದೆ. ಪ್ರಿಯಾಂಕ ಉಪೇಂದ್ರ ಅವರ ಜೊತೆ ಜೊತೆಗೆ ಇನ್ನು ಸಾಕಷ್ಟು ಸ್ಟಾರ್ ಕಲಾವಿದರು ಸಿನಿಮಾದಲ್ಲಿದ್ದಾರೆ. ಈ ಸಿನಿಮಾವನ್ನು ಮುಂದಿನ ತಿಂಗಳು ನವೆಂಬರ್‌ನಲ್ಲಿ ತೆರೆಗೆ ಬರಲು ನಿರ್ಮಾಪಕರು ಪ್ಲಾನ್‌ ಹಾಕಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ