logo
ಕನ್ನಡ ಸುದ್ದಿ  /  ಮನರಂಜನೆ  /  ‘ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು’ ಚಿತ್ರಕ್ಕೆ ಶುಭ ಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

‘ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು’ ಚಿತ್ರಕ್ಕೆ ಶುಭ ಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

Oct 13, 2024 09:29 PM IST

google News

ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರಕ್ಕೆ ಶುಭ ಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    • ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರದ ಲಿರಿಕಲ್‌ ವಿಡಿಯೋ ಹಾಡಿನ ಪೋಸ್ಟರ್‌ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಿಡುಗಡೆ ಮಾಡಿ, ತಂಡಕ್ಕೆ ಶುಭ ಕೋರಿದ್ದಾರೆ.  
ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರಕ್ಕೆ ಶುಭ ಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರಕ್ಕೆ ಶುಭ ಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಲಿರಿಕಲ್‌ ವಿಡಿಯೋವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆ ಮಾಡಿದ್ದಾರೆ. ರಾಜಾ ರವಿಶಂಕರ್ ನಿರ್ದೇಶನ ಭಕ್ತಿಪ್ರಧಾನ ಸಿನಿಮಾ ಈಗಾಗಲೇ ಶೂಟಿಂಗ್‌ ಮುಗಿಸಿಕೊಂಡು ಬಿಡುಗಡೆಯ ಸನಿಹದಲ್ಲಿದೆ. ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಾಧವಾನಂದ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಶ್ರೀ ಸ. ಸ. ಪ್ರಭೂಜೀ ಮಹಾರಾಜರ ಮಾರ್ಗದರ್ಶನದಲ್ಲಿ "ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು" ಚಿತ್ರದ ಹಾಡುಗಳು ತಯಾರಾಗಿವೆ.

ಇತ್ತೀಚೆಗಷ್ಟೇ ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀಮಂಜನಾಥಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ. ‌ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಲಿರಿಯಲ್ ವಿಡಿಯೋದ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು. ಇದೇ ವೇಳೆ ಇಂಚಗೇರಿ ಆಧ್ಯಾತ್ಮ ಸಂಪ್ರದಾಯ ಹಾಗೂ ಚಲನಚಿತ್ರದ ಕುರಿತು ಅನೇಕ ವಿಷಯಗಳನ್ನು ಚರ್ಚಿಸಿದರು.

ಚುಟು ಚುಟು ಹಾಡಿನ ಮೂಲಕ ಗಮನ ಸೆಳೆದ, ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ ಅವರು "ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ" ಭಕ್ತಿ ಪ್ರಧಾನ ಹಾಡಿಗೆ ಪ್ರಶಂಸಿಸಿದರು.

ಜಮಖಂಡಿ ತಾಲೂಕಿನ ಕೃಷ್ಣಾ ನದಿ ತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ ಆಧರಿಸಿ ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರ ಮೂಡಿಬಂದಿದೆ. ಇದೇ ವೇಳೆ ವಿಶೇಷವಾಗಿ ಶ್ರೀಸಂಗಮೇಶ್ವರರ ಚಿತ್ರದ ಹಾಡುಗಳು ಹಾಗೂ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾರೈಸಿದರು.

ಹೊಸ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ತುಷಾರ್ ಮಲಗೊಂಡ, ಭವ್ಯಶ್ರೀ ರೈ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ ನಿರ್ದೇಶನ, ಸಿ ನಾರಾಯಣ್ ಛಾಯಾಗ್ರಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ