logo
ಕನ್ನಡ ಸುದ್ದಿ  /  ಮನರಂಜನೆ  /  Nikhil Kumar: ಹುಲಿ ಉಗುರು ಕೇಸ್‌ನಲ್ಲಿ ಬಚಾವ್‌ ಆದ್ರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರ್!

Nikhil Kumar: ಹುಲಿ ಉಗುರು ಕೇಸ್‌ನಲ್ಲಿ ಬಚಾವ್‌ ಆದ್ರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರ್!

Oct 25, 2023 02:12 PM IST

google News

Nikhil Kumar: ಹುಲಿ ಉಗುರು ಕೇಸ್‌ನಲ್ಲಿ ಬಚಾವ್‌ ಆದ್ರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರ್!

    • Tiger Claw Pendant Row: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಹುಲಿ ಉಗುರಿನ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್‌ ಹಾಕಿದವರ ಮೇಲೆ ಅರಣ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ ಆ ಪೈಕಿ, ನಟ ದರ್ಶನ್‌, ಜಗ್ಗೇಶ್ ವಿರುದ್ಧ ದೂರು ದಾಖಲಾಗಿವೆ. 
Nikhil Kumar: ಹುಲಿ ಉಗುರು ಕೇಸ್‌ನಲ್ಲಿ ಬಚಾವ್‌ ಆದ್ರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರ್!
Nikhil Kumar: ಹುಲಿ ಉಗುರು ಕೇಸ್‌ನಲ್ಲಿ ಬಚಾವ್‌ ಆದ್ರು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರ್!

Nikhil Kumar: ಬಿಗ್‌ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರು ಸಂತೋಷ್‌, ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಅದರ ಬೆನ್ನಲ್ಲೇ ಚಂದನವನದಲ್ಲೂ ಹುಲಿ ಉಗುರು ವಿಚಾರ ಮತ್ತಷ್ಟು ಸದ್ದು ಮಾಡುತ್ತಿದೆ. ದರ್ಶನ್‌, ಜಗ್ಗೇಶ್‌ ವಿರುದ್ಧವೂ ದೂರುಗಳು ದಾಖಲಾಗಿವೆ. ಇದರ ನಡುವೆಯೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ್‌ ಅವರ ಹೆಸರೂ ಇದೀಗ ಮುನ್ನೆಲೆಗೆ ಬಂದಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ ಕನ್ನಡದ ಸಿನಿಮಾ ಕಲಾವಿದರ ಪೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಮಾಯಕ ವರ್ತೂರು ಸಂತೋಷ್‌ ಅವರಿಗೊಂದು ನ್ಯಾಯ, ಪ್ರಭಾವಿಗಳಿಗೊಂದು ನ್ಯಾಯವೇ ಎಂಬಂತೆ ಕೆಲವರು ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರೆ, ಇನ್ನು ಕೆಲವರು ಪ್ರತಿಭಟನೆಯನ್ನೂ ಮಾಡುತ್ತಿದ್ದಾರೆ.

ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ ನಿಖಿಲ್‌ ಕುಮಾರ್‌ ಅವರೂ ಒಂದಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾ ವೇದಿಕೆ Xನಲ್ಲಿ ಸ್ಪಷ್ಟನೆ ನೀಡಿರುವ ನಿಖಿಲ್‌, ನಾನು ಧರಿಸಿದ್ದು, ನೈಜ ಹುಲಿ ಉಗುರಿನ ಪೆಂಡೆಂಟ್‌ ಅಲ್ಲ, ಅದು ಕೃತಕವಾದದ್ದು ಎಂದಿದ್ದಾರೆ. ಹೀಗಿದೆ ನಿಖಿಲ್‌ ಕುಮಾರ್‌ ಮಾತು.

ನಾನು ಧರಿಸಿದ್ದು ಕೃತಕ ಪೆಂಡೆಂಟ್..

ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ