logo
ಕನ್ನಡ ಸುದ್ದಿ  /  ಮನರಂಜನೆ  /  Rap Song: ಮತದಾನದಂದು ಓಟ್‌ ಮಾಡಿ, ರಜೆ ಎಂದು ಪ್ರವಾಸ ಹೋಗಬೇಡಿ ಎಂದ ಸೆಲೆಬ್ರಿಟಿಗಳು; ಇಲ್ಲಿದೆ ನೋಡಿ ಸ್ಯಾಂಡಲ್‌ವುಡ್‌ನ ರಾಪ್‌ ಸಾಂಗ್‌

Rap Song: ಮತದಾನದಂದು ಓಟ್‌ ಮಾಡಿ, ರಜೆ ಎಂದು ಪ್ರವಾಸ ಹೋಗಬೇಡಿ ಎಂದ ಸೆಲೆಬ್ರಿಟಿಗಳು; ಇಲ್ಲಿದೆ ನೋಡಿ ಸ್ಯಾಂಡಲ್‌ವುಡ್‌ನ ರಾಪ್‌ ಸಾಂಗ್‌

Praveen Chandra B HT Kannada

Apr 23, 2024 12:17 PM IST

Rap Song: ಮತದಾನದಂದು ಓಟ್‌ ಮಾಡಿ, ರಜೆ ಎಂದು ಪ್ರವಾಸ ಹೋಗಬೇಡಿ ಎಂದ ಸೆಲೆಬ್ರಿಟಿಗಳು

    • ಲೋಕಸಭಾ ಚುನಾವಣೆ ಸನಿಹದಲ್ಲಿದೆ. ಇದೇ ಸಮಯದಲ್ಲಿ ಸ್ಯಾಂಡಲ್‌ವುಡ್‌ ವಿವಿಧ ನಟಿಯರು, ನಟರು ಯುವಜನತೆಯಲ್ಲಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ. ಮಾಧ್ಯಮ ಅನೇಕ ಸಂಸ್ಥೆಯ ಓಟ್‌ ಫಾರ್‌ ಪವರ್‌ ರ್ಯಾಪ್‌ ಸಾಂಗ್‌ಗೆ ಅನೇಕ ಸಿನಿಮಾ ಕಲಾವಿದರು ಕೈ ಜೋಡಿಸಿದ್ದಾರೆ.
Rap Song: ಮತದಾನದಂದು ಓಟ್‌ ಮಾಡಿ, ರಜೆ ಎಂದು ಪ್ರವಾಸ ಹೋಗಬೇಡಿ ಎಂದ ಸೆಲೆಬ್ರಿಟಿಗಳು
Rap Song: ಮತದಾನದಂದು ಓಟ್‌ ಮಾಡಿ, ರಜೆ ಎಂದು ಪ್ರವಾಸ ಹೋಗಬೇಡಿ ಎಂದ ಸೆಲೆಬ್ರಿಟಿಗಳು

ಬೆಂಗಳೂರು: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಸ್ಯಾಂಡಲ್‌ವುಡ್‌ ತಾರೆಯರಿಂದ ಯುವಜನತೆಗೆ ಮತದಾನ ಜಾಗೃತಿ ಮೂಡಿಸುವ ಪ್ರಯತ್ನ ನಡೆದಿದೆ. 2024ರ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ‘ಮಾಧ್ಯಮ ಅನೇಕ’ ಸಂಸ್ಥೆ 'ಓಟ್‌ ನಮ್ಮ ಪವರ್' ರಾಪ್‌ ಸಾಂಗ್‌ ಬಿಡುಗಡೆಮಾಡಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಸಾರ್ವತ್ರಿಕ ಚುನಾವಣೆಯ ಈ ಸಂದರ್ಭದಲ್ಲಿ ಮತದಾನದ ಹಕ್ಕುಗಳನ್ನು ಪ್ರತಿಪಾದಿಸುವುದು ನಮ್ಮ ಆದ್ಯ ಕರ್ತವ್ಯ. ಮತದಾನದೊಂದಿಗೆ ಭವ್ಯ ಭಾರತದ ಭವಿಷ್ಯ ನಿರ್ಧರಿಸುವುದು ನಮ್ಮೆಲ್ಲರ ಕೈಲಿದೆ. ಈ ಪ್ರಜಾಪ್ರಭುತ್ವದ ಹಬ್ಬವನ್ನು ಒಂದು ಸಂದೇಶಭರಿತ ಚೆಂದದ ರಾಪ್‌ ಸಾಂಗ್‌ ಮೂಲಕ ಸೆಲೆಬ್ರೇಟ್‌ ಮಾಡುವ ಆಶಯ ಹಾಗೂ ಆ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಮತ್ತು ಮತದಾನಕ್ಕೆ ಅವರನ್ನು ಪ್ರೇರೇಪಿಸುವುದು ಇದರ ಉದ್ದೇಶ ಎಂದು ಮಾಧ್ಯಮ ಅನೇಕ ಸಂಸ್ಥೆ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

Aadujeevitham OTT: ಪೃಥ್ವಿರಾಜ್‌ ಸುಕುಮಾರನ್‌ ನಟನೆಯ ಆಡುಜೀವಿತಂ ಸಿನಿಮಾವನ್ನು ಮನೆಯಲ್ಲೇ ನೋಡಿ, ಇಲ್ಲಿದೆ ಒಟಿಟಿ ಬಿಡುಗಡೆ ವಿವರ

ಬ್ಲಿಂಕ್ ಸಿನಿಮಾ ನಿರ್ದೇಶಕ ಶ್ರೀನಿಧಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿರುವ ಕ್ರಿಸ್ಟೋಫರ್ ನೋಲನ್, ಸಂಜೀವ್ ಜಾಗೀರ್ದರ್ ಎಡಿಟಿಂಗ್‌ ಸೂಪರ್‌

ರಾಪ್‌ ಸಾಂಗ್‌ಗೆ ಧ್ವನಿಯಾದ ರಾಕೇಶ್‌ ಅಡಿಗ

ದೇಶದ ಉಜ್ವಲ ಭವಿಷ್ಯದಲ್ಲಿ ಯುವ ಜನತೆಯ ಸಕ್ರಿಯ ಪಾಲ್ಗೊಳ್ಳುವಿಕೆ ಇರಲಿ ಎನ್ನುವ ಸದ್ದುದ್ದೇಶ "ಮಾಧ್ಯಮ ಅನೇಕ" ಸಂಸ್ಥೆಯದು. ಆ ನಿಟ್ಟಿನಲ್ಲಿ ಓಟ್‌ ನಮ್ಮ ಪವರ್ ಹಾಡು ಮೂಡಿಬಂದಿದೆ. 'ಮೊದಲ ಬಾರಿಗೆ ಮತದಾನ ಮಾಡುವವರಿಗೆ ಈ ರಾಪ್‌ ಸಾಂಗ್‌ ಬಹಳ ಇಷ್ಟವಾಗಬಹುದು. ಯುವಜನತೆ ಹೆಚ್ಚಾಗಿ ಮತದಾನ ಮಾಡಬೇಕು' ಎಂದರು ಹಾಡಿಗೆ ದನಿಯಾಗಿರುವ ನಟ ರಾಕೇಶ್ ಅಡಿಗ.

'ಮತದಾನದ ಬಗ್ಗೆ ಸಂವಿದಾನದಲ್ಲಿರುವ ಕೆಲವು ವಿಷಯಗಳನ್ನು ತೆಗೆದುಕೊಂಡು ಈ ಹಾಡನ್ನು ಮಾಡಿದ್ದೇವೆ‌. ಈಗಿನ ಯುವಜನತೆ ಹೆಚ್ಚಾಗಿ ರಾಪ್‌ ಸಾಂಗ್‌ಗೆ ಅಭಿಮಾನಿಗಳು. ಈ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ' ಎಂದು ನಿರ್ದೇಶಕ ರಾಜ್ ಗೋಪಿ ತಿಳಿಸಿದ್ದಾರೆ.

'ಮತದಾನದ ದಿನ‌ ರಜೆ ಇದೆ ಎಂದು ಮನೆಯಲ್ಲಿ ಕೂರುವುದು. ಪ್ರವಾಸಕ್ಕೆ ಹೋಗುವುದು ಮಾಡಬೇಡಿ. ಎಲ್ಲರೂ ಮತದಾನ ಮಾಡಿ.‌ ಏಕೆಂದರೆ ಅದು ನಮ್ಮ ಹಕ್ಕಲ್ಲ.‌ ಅಧಿಕಾರ' ಎನ್ನುವುದು 'ಬಿಗ್ ಬಾಸ್' ಖ್ಯಾತಿಯ ನೀತು ವನಜಾಕ್ಷಿ ಹೇಳಿದ್ದಾರೆ.

ಹಾಡಿಗೆ ಹೆಜ್ಜೆ ಹಾಕಿರುವ ನಟಿ ತೇಜಸ್ವಿನಿ ಶರ್ಮ, ನಟ ಸ್ಮೈಲ್ ಗುರು ರಕ್ಷಿತ್ ಹಾಗೂ ನೃತ್ಯ ನಿರ್ದೇಶನ ಮಾಡಿರುವ ನಟಿ ಅನನ್ಯ ಅಮರ್ ಮತದಾನದ ಮಹತ್ವವನ್ನು ತಿಳಿಸಿ, ಅವಕಾಶ ಮಾಡಿಕೊಟ್ಟ 'ಮಾಧ್ಯಮ ಅನೇಕ' ಸಂಸ್ಥೆಗೆ ಧನ್ಯವಾದ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ 'ಓಟ್‌ ನಮ್ಮ‌ ಪವರ್' ಪ್ರಸ್ತುತಿಗೆ ಮುನ್ನ 'ಮಾಧ್ಯಮ ಅನೇಕ' ಸಂಸ್ಥೆಯ ಡಾ ನಮನ ಬಿಎನ್‌ ಅವರು ಈ ಹಾಡಿನಆಶಯ - ಉದ್ದೇಶದ ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು. 'ಮಾಧ್ಯಮ ಅನೇಕ' ಸಂಸ್ಥೆಯ 'ಅನೇಕ ಆಡಿಯೋ' ಮೂಲಕ ಈ ರಾಪ್‌ ಸಾಂಗ್‌ ಬಿಡುಗಡೆಯಾಗಿದೆ.

ಸಂಸ್ಥೆಯ ಮುಖ್ಯಸ್ಥರಾದ ಅರವಿಂದ್ ಮೋತಿ ಈ ಯೋಜನೆಯ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಅನು ಮೋತಿ ಬರೆದು, ಕಾರ್ತಿಕ್ ಶರ್ಮ ಸಂಗೀತ ನೀಡಿರುವ ಈ ಹಾಡನ್ನು ರಾಕೇಶ್ ಅಡಿಗ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ಛಾಯಾಗ್ರಾಹಣ ಗಿರೀಶ್ ಅವರದು.

ಪ್ರತಿಭಾವಂತ ಯುವ ತಾರೆಯರಾದ ತೇಜಸ್ವಿನಿ ಶರ್ಮ, ಸ್ಮೈಲ್‌ ಗುರು ರಕ್ಷಿತ್‌, ಬೃಂದಾ ಪ್ರಭಾಕರ್‌, ಅಭಯ್‌ ಮತ್ತು ಅನನ್ಯ ಅಮರ್‌ ತಮ್ಮ ಡ್ಯಾನ್ಸ್‌ ಸ್ಟೆಪ್‌ಗಳ ಜತೆ ಹಾಡನ್ನು ಪವರ್‌ಫುಲ್‌ ಆಗಿ ಪ್ರಸ್ತುತಪಡಿಸಿದ್ದಾರೆ. ಇವರಷ್ಟೇ ಅಲ್ಲದೆ ಟೀವಿ - ಸಿನಿಮಾ ರಂಗದ ಹಲವು ಸೆಲೆಬ್ರಿಟಿಗಳು ಹುಕ್‌ ಸ್ಟೆಪ್ಸ್‌ಗೆ ಹೆಜ್ಜೆ ಹಾಕುತ್ತಾ ಹಾಡಿನ ಆಕರ್ಷಣೆ ಹೆಚ್ಚಿಸಿದ್ದಾರೆ. ನವೀನ್‌ ಶಂಕರ್‌, ನೀತೂ ವನಜಾಕ್ಷಿ, ಕಾರ್ತೀಕ್‌ ಮಹೇಶ್‌, ತನಿಶಾ ಕುಪ್ಪಂಡ, ಸಾನಿಯಾ ಅಯ್ಯರ್‌, ಸಾಗರ್‌ ಪುರಾಣಿಕ್‌, ನಿರಂಜನ್‌ ದೇಶಪಾಂಡೆ, ಚಂದನಾ ಅನಂತಕೃಷ್ಣ ಮುಂತಾದವರು ಸಾಂಗ್‌ನಲ್ಲಿ ಅತಿಥಿಗಳಾಗಿ ಕಾಣಿಸಿಕೊಂಡು ಸದಾಶಯದ ಪ್ರಯತ್ನಕ್ಕೆ ಕೈಜೋಡಿಸಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ