logo
ಕನ್ನಡ ಸುದ್ದಿ  /  ಮನರಂಜನೆ  /  Udaala Title Teaser: ಉತ್ತರ ಕರ್ನಾಟಕದ ಉಡಾಳನಾದ ಪೃಥ್ವಿ ಶಾಮನೂರು; ಡಾಲಿಯಿಂದ ರಿವೀಲ್‌ ಆಯ್ತು ಶೀರ್ಷಿಕೆ

Udaala Title Teaser: ಉತ್ತರ ಕರ್ನಾಟಕದ ಉಡಾಳನಾದ ಪೃಥ್ವಿ ಶಾಮನೂರು; ಡಾಲಿಯಿಂದ ರಿವೀಲ್‌ ಆಯ್ತು ಶೀರ್ಷಿಕೆ

Feb 02, 2024 11:51 AM IST

Udaala Title Teaser: ಉತ್ತರ ಕರ್ನಾಟಕದ ಉಡಾಳನಾದ ಪೃಥ್ವಿ ಶಾಮನೂರು; ಡಾಲಿಯಿಂದ ರಿವೀಲ್‌ ಆಯ್ತು ಶೀರ್ಷಿಕೆ (Pruthvi Shamanur udaala movie title teaser )

    • ಪದವಿಪೂರ್ವ ಸಿನಿಮಾ ಮೂಲಕ ಚಂದನವನ ಪ್ರವೇಶಸಿದ್ದ ಹುಡುಗ ಪೃಥ್ವಿ ಶಾಮನೂರು ಇದೀಗ ಉಡಾಳ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಈ ಚಿತ್ರ ಮೂಡಿಬರಲಿದ್ದು, ಈ ಚಿತ್ರದ ಶೀರ್ಷಿಕೆಯನ್ನು ಡಾಲಿ ಧನಂಜಯ್‌ ಬಿಡುಗಡೆ ಮಾಡಿದರೆ, ಇದೇ ಉಡಾಳನಿಗೆ ಯೋಗರಾಜ್‌ ಭಟ್‌ ಬಂಡವಾಳ ಹೂಡುತ್ತಿದ್ದಾರೆ. 
Udaala Title Teaser: ಉತ್ತರ ಕರ್ನಾಟಕದ ಉಡಾಳನಾದ ಪೃಥ್ವಿ ಶಾಮನೂರು; ಡಾಲಿಯಿಂದ ರಿವೀಲ್‌ ಆಯ್ತು ಶೀರ್ಷಿಕೆ (Pruthvi Shamanur udaala movie title teaser )
Udaala Title Teaser: ಉತ್ತರ ಕರ್ನಾಟಕದ ಉಡಾಳನಾದ ಪೃಥ್ವಿ ಶಾಮನೂರು; ಡಾಲಿಯಿಂದ ರಿವೀಲ್‌ ಆಯ್ತು ಶೀರ್ಷಿಕೆ (Pruthvi Shamanur udaala movie title teaser )

Udaala Title Teaser: ಪದವಿಪೂರ್ವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು ಅಭಿನಯದ ಹೊಸ ಚಿತ್ರದ ಟೈಟಲ್‌ ಅನಾವರಣಗೊಂಡಿದೆ. ನಟ ಡಾಲಿ ಧನಂಜಯ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ್ದು, ಚಿತ್ರಕ್ಕೆ ಉಡಾಳ ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದ ಈ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪೃಥ್ವಿ ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ಅಭಿನಯಿಸುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

ಮೊದಲು ಯೋಗರಾಜ್ ಭಟ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಮಾತನಾಡಿದ ಡಾಲಿ ಧನಂಜಯ, ಚಿತ್ರರಂಗಕ್ಕೆ ಯೋಗರಾಜ್ ಭಟ್ ಅವರ ಕೊಡುಗೆ ಅಪಾರ. ನಮ್ಮ ಸಂಸ್ಥೆಯ ಮೊದಲ ಚಿತ್ರ ಬಡವ ರಾಸ್ಕಲ್ ಶೀರ್ಷಿಕೆ ಕೊಟ್ಟವರು ಅವರೇ. ಇನ್ನು ಪೃಥ್ವಿ ಶಾಮನೂರು ಒಳ್ಳೆಯ ಲವಲವಿಕೆ ಹುಡುಗ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು ಡಾಲಿ.

ಈ ಚಿತ್ರದ ನಿರ್ದೇಶಕ ಅಮೋಲ್ ಪಾಟೀಲ್, ನನ್ನ ಜೊತೆಗೆ ಬಹಳ ಚಿತ್ರಗಳಿಗೆ ಕೆಲಸ ಮಾಡಿದ್ದಾನೆ. ಉತ್ತರ ಕರ್ನಾಟಕದ ವಿಜಾಪುರದ ಹುಡುಗ. ಚೆನ್ನಾಗಿ ಓದಿಕೊಂಡಿದ್ದಾನೆ. ಆತನಿಗೆ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನ ಚಿತ್ರ ಮಾಡಬೇಕೆಂಬ ಆಸೆ ಮೊದಲಿಂದಲೂ ಇತ್ತು. ಈಗ ಕಾಲ ಕೂಡಿ ಬಂದಿದೆ.‌ ಈ ಚಿತ್ರವನ್ನು ನಮ್ಮೊಟ್ಟಿಗೆ ನಿರ್ಮಾಣ ಮಾಡಲು ರವಿ ಶಾಮನೂರು ಮುಂದಾಗಿದ್ದಾರೆ. ಉಡಾಳ ಶೀರ್ಷಿಕೆ ಪೃಥ್ವಿಗೆ ನಿಜಕ್ಕೂ ಸರಿ ಹೊಂದುತ್ತದೆ ಎಂದು ಯೋಗರಾಜ್ ಭಟ್ ತಿಳಿಸಿದರು.

ನನಗೆ ಈ ಅವಕಾಶ ನೀಡಿರುವ ಗುರುಗಳಾದ ಯೋಗರಾಜ್ ಭಟ್ ಅವರಿಗೆ ಹಾಗೂ ರವಿ ಶಾಮನೂರು ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದ ನಿರ್ದೇಶಕ ಅಮೋಲ್ ಪಾಟೀಲ್, ಉಡಾಳ ಪಕ್ಕ ಉತ್ತರ ಕರ್ನಾಟಕದ ಶೈಲಿಯ ಚಿತ್ರ. ಈ ತಿಂಗಳ ಕೊನೆಗೆ ವಿಜಾಪುರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಅಲ್ಲೇ ನಡೆಯಲಿದೆ. ಉಡಾಳನಾಗಿ ಪೃಥ್ವಿ ಶಾಮನೂರು ಅಭಿನಯಿಸುತ್ತಿದ್ದಾರೆ. ವಿಜಾಪುರದಲ್ಲಿ ಟೂರಿಸ್ಟ್ ಗೈಡ್ ಆಗಿ ಪಕ್ಯಾ ಎಂಬ ಪಾತ್ರದಲ್ಲಿ ಪೃಥ್ವಿ ಕಾಣಿಸಿಕೊಳ್ಳಲಿದ್ದಾರೆ. ಹೃತಿಕ ಶ್ರೀನಿವಾಸ್ ಉಡಾಳನ ನಾಯಕಿ ಎಂದರು ನಿರ್ದೇಶಕರು.

ನನ್ನ ಹಿಂದಿನ ಚಿತ್ರಕ್ಕೆ ನೀವು ನೀಡಿದ ಬೆಂಬಲಕ್ಕೆ ಚಿರ ಋಣಿ. ಶೀರ್ಷಿಕೆ ಅನಾವರಣ ಮಾಡಿಕೊಟ್ಟ ಧನಂಜಯ ಅವರಿಗೆ, ಅವಕಾಶ ನೀಡಿದ ಯೋಗರಾಜ್ ಸರ್, ನಿರ್ದೇಶಕರಿಗೆ ಹಾಗೂ ನನ್ನ ತಂದೆ ರವಿ ಶಾಮನೂರು ಅವರಿಗೆ ವಿಶೇಷ ಧನ್ಯವಾದ. ಈ ಚಿತದಲ್ಲಿ ನಂದು ಪಕ್ಕಾ ಉಡಾಳನ ಪಾತ್ರ ಎಂದು ನಾಯಕ ಪೃಥ್ವಿ ಶಾಮನೂರು ತಿಳಿಸಿದರು.

ನಾನು ಯೋಗರಾಜ್ ಭಟ್ ಅವರ ಜೊತೆ ಸೇರಿ ನಿರ್ಮಿಸುತ್ತಿರುವ ಎರಡನೇಯ ಚಿತ್ರವಿದು. ಅವಕಾಶ ನೀಡಿದ ಯೋಗರಾಜ್ ಭಟ್ ಅವರಿಗೆ ಧನ್ಯವಾದ. ಮುಂದೆ ವರ್ಷಕ್ಕೆ ಒಂದು ಚಿತ್ರವನ್ನು ನಿರ್ಮಾಣ ಮಾಡುವ ಆಸೆ ಇದೆ ಎಂದರು ನಿರ್ಮಾಪಕ ರವಿ ಶಾಮನೂರು. ಸಂಗೀತ ನಿರ್ದೇಶಕ ಚೇತನ್ ಹಾಗೂ ಛಾಯಾಗ್ರಾಹಕ ಶಿವಶಂಕರ್ ನೂರಂಬಡ ಉಡಾಳ ಚಿತ್ರದ ಕುರಿತು ಮಾತನಾಡಿದರು.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ