logo
ಕನ್ನಡ ಸುದ್ದಿ  /  ಮನರಂಜನೆ  /  Rakshit Shetty: ಬ್ಯಾಚುಲರ್‌ ಪಾರ್ಟಿ ಪ್ರಕರಣ; ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ

Rakshit Shetty: ಬ್ಯಾಚುಲರ್‌ ಪಾರ್ಟಿ ಪ್ರಕರಣ; ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ

Praveen Chandra B HT Kannada

Aug 02, 2024 01:01 PM IST

google News

Rakshit Shetty: ಬ್ಯಾಚುಲರ್‌ ಪಾರ್ಟಿ ಪ್ರಕರಣ; ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ

    • ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ ಹಕ್ಕುಸ್ವಾಮ್ಯ ಉಲ್ಲಂಘಿಸಿ ಹಾಡುಗಳನ್ನು ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡ ನಟ ರಕ್ಷಿತ್‌ ಶೆಟ್ಟಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನ್ಯಾಯ ಎಲ್ಲಿದೆ, ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದಾರೆ.
Rakshit Shetty: ಬ್ಯಾಚುಲರ್‌ ಪಾರ್ಟಿ ಪ್ರಕರಣ; ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ
Rakshit Shetty: ಬ್ಯಾಚುಲರ್‌ ಪಾರ್ಟಿ ಪ್ರಕರಣ; ಯಶವಂತಪುರ ಪೊಲೀಸ್‌ ಠಾಣೆಗೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ (ಫೈಲ್‌ ಚಿತ್ರ)

ಬೆಂಗಳೂರು: ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ ಹಕ್ಕುಸ್ವಾಮ್ಯ ಉಲ್ಲಂಘಿಸಿ ಹಾಡುಗಳನ್ನು ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡ ನಟ ರಕ್ಷಿತ್‌ ಶೆಟ್ಟಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನ್ಯಾಯ ಎಲ್ಲಿದೆ, ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದಾರೆ.

ಬ್ಯಾಚುಲರ್‌ ಪಾರ್ಟಿ ಸಿನಿಮಾವನ್ನು ರಕ್ಷಿತ್‌ ಶೆಟ್ಟಿಯವರು ಪರಂವಃ ಸ್ಟುಡಿಯೋ ಮೂಲಕ ನಿರ್ಮಿಸಿದ್ದರು. ಈ ಸಿನಿಮಾದಲ್ಲಿ ಎರಡು ಹಳೆಯ ಸಿನಿಮಾಗಳ ಹಾಡನ್ನು ಅನುಮತಿ ಇಲ್ಲದೆ ಬಳಸಲಾಗಿದೆ ಎಂದು ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಎಂಆರ್‌ಟಿ ಮ್ಯೂಸಿಕ್‌ನ ನವೀನ್‌ ಕುಮಾರ್‌ ದೂರು ದಾಖಲಿಸಿದ್ದರು. ಗಾಳಿಮಾತು ಮತ್ತು ನ್ಯಾಯ ಎಲ್ಲಿದೆ ಸಿನಿಮಾದ ಟೈಟಲ್‌ ಹಾಡನ್ನು ಬಳಸಿಕೊಂಡಿರುವ ಆರೋಪವನ್ನು ಮಾಡಲಾಗಿತ್ತು. ಈ ಕುರಿತು ಎಫ್‌ಐಆರ್‌ ದಾಖಲಾಗಿತ್ತು.

ಆದರೆ, ಇದಾದ ಬಳಿಕ ರಕ್ಷಿತ್‌ ಶೆಟ್ಟಿಯವರು ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ತನ್ನ ಅಭಿಪ್ರಾಯ ತಿಳಿಸಿದ್ದರು.

ಈ ಆರೋಪಕ್ಕೆ ಸಂಬಂಧಪಟ್ಟಂತೆ ರಕ್ಷಿತ್‌ ಶೆಟ್ಟಿ ಅವರು ಸೋಷಿಯಲ್‌ ಮೀಡಿಯಾದಲ್ಲಿ ಹೀಗೆ ಪ್ರತಿಕ್ರಿಯೆ ನೀಡಿದ್ದರು.

"ಪ್ರೀತಿಯ ಪ್ರೇಕ್ಷಕರೆ ಮತ್ತು ಮಾಧ್ಯಮ ಮಿತ್ರರೆ, ನಾವು ಈ ಬಹಿರಂಗ ಪತ್ರವನ್ನು ಎಂ ಆರ್ ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟೀಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ, ಕಾರಣ ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿವೆ ಎಂದು ಮತ್ತು ಬಳಕೆಯ ರೂಪವನ್ನು ನಿಮ್ಮ ಮುಂದೆ ತರಲು.. " ಎಂದು ಪೋಸ್ಟ್‌ ಮಾಡಿದ ರಕ್ಷಿತ್‌ ಶೆಟ್ಟಿ ಆ ಹಾಡು ಎಲ್ಲೆಲ್ಲಿ ಬಳಕೆಯಾಗಿದೆ ಎಂದು ತಿಳಿಸಿದ್ದರು. ಅದಕ್ಕೆ ಸಂಬಂಧಪಟ್ಟ ವಿಡಿಯೋ ತುಣುಕು ಕೂಡ ಹಂಚಿಕೊಂಡಿದ್ದರು.

ಈ ಹಾಡನ್ನು ಎರಡು ಸಂದರ್ಭದಲ್ಲಿ ಬಳಸಲಾಗಿದೆ

1.ತರಗತಿಯೊಂದರಲ್ಲಿ ಶಾಲಾ ಬಾಲಕಿ -”ಒಮ್ಮೆ ನಿನ್ನನ್ನು” ಹಾಡನ್ನು ಸಹಪಾಠಿಗಳ ಮುಂದೆ ಹಾಡುವುದು

2. ಮನೆಯ ಟಿವಿಯಲ್ಲಿ ”ನ್ಯಾಯ ಎಲ್ಲಿದೆ” ಹಾಡು ಪ್ರಸಾರವಾಗುತ್ತದೆ.

 

"ಈ ಮುಂಚೆ ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೇ ನಾವು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಮುಖ್ಯಸ್ಥರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದೆವು. ಆದರೆ, ಅವರು ನಮ್ಮ ಮುಂದೆ ಇತ್ತ ಶುಲ್ಕ ನಮ್ಮ ಬಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಶುಲ್ಕದ ಕುರಿತು ಮಾತುಕತೆಗೆ ತಯಾರಿರಲಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐಆರ್ ದಾಖಲಾಗಿದೆ. ಇದು ನಿಜವಾಗಿ ಹಾಡಿನ ಹಕ್ಕು ಉಲ್ಲಂಘನೆಯೇ ? ಹೌದಾಗಿದ್ದೆ ಆಗಿದ್ದಲ್ಲಿ ನಾವು ತೆರಬೇಕಾದ ದಂಡವಾದರೂ ಎಷ್ಟು?" ಎಂದು ಅವರು ಪ್ರಶ್ನಿಸಿದ್ದರು.

"ಏಕೆಂದರೆ ಎಂಆರ್‌ಟಿ ಸಂಸ್ಥೆಯಿಂದ ಕೇಳಲ್ ಪಟ್ಟಿದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ. ಹಾಗಾಗಲಿ, ನ್ಯಾಯ ಮತ್ತು ಪ್ರಬುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯ ಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ, ನಿಮ್ಮ ಬೆಂಬಲ ಮತ್ತು ಪ್ರೀತಿಯನ್ನು ಆಶಿಸುವ ಪರಂವಃ ಸ್ಟುಡಿಯೋಸ್ ” ಎಂದು ರಕ್ಷಿತ್‌ ಶೆಟ್ಟಿ ಪೋಸ್ಟ್‌ ಮಾಡಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ