logo
ಕನ್ನಡ ಸುದ್ದಿ  /  ಮನರಂಜನೆ  /  ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ನ 5 ವಿಶೇಷಗಳನ್ನು ತಿಳಿದುಕೊಳ್ಳಿ; ಕಲಾವಿದರನ್ನು ಆಕ್ಷನ್‌ ಮೂಲಕ ಖರೀದಿ, ವಾರಕ್ಕೆ 1 ಲಕ್ಷ ರೂ ಬಹುಮಾನ

ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ನ 5 ವಿಶೇಷಗಳನ್ನು ತಿಳಿದುಕೊಳ್ಳಿ; ಕಲಾವಿದರನ್ನು ಆಕ್ಷನ್‌ ಮೂಲಕ ಖರೀದಿ, ವಾರಕ್ಕೆ 1 ಲಕ್ಷ ರೂ ಬಹುಮಾನ

Praveen Chandra B HT Kannada

Apr 24, 2024 09:46 PM IST

google News

ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ನ 5 ವಿಶೇಷಗಳನ್ನು ತಿಳಿದುಕೊಳ್ಳಿ

    • ಝೀ ಕನ್ನಡ ವಾಹಿನಿಯಲ್ಲಿ ಏಪ್ರಿಲ್‌ 27ರಿಂದ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ ಆರಂಭವಾಗಲಿದೆ. ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌,ಶ್ವೇತಾ ಚಂಗಪ್ಪ ಮತ್ತು ಕುರಿಪ್ರತಾಪ್‌ ನಿರೂಪಣೆಯ ಮಜಾ ಇರಲಿದೆ. ಕಲಾವಿದರನ್ನು ಕ್ರಿಕೆಟ್‌ನಂತೆ ಆಕ್ಷನ್‌ ಮೂಲಕ ಖರೀದಿಸುವ ಪ್ರಕ್ರಿಯೆ ಇರಲಿದೆಯಂತೆ.
ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ನ 5 ವಿಶೇಷಗಳನ್ನು ತಿಳಿದುಕೊಳ್ಳಿ
ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ನ 5 ವಿಶೇಷಗಳನ್ನು ತಿಳಿದುಕೊಳ್ಳಿ

ಬೆಂಗಳೂರು: ಈ ವೀಕೆಂಡ್‌ಗೆ ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಹಲವು ಅಚ್ಚರಿಗಳೊಂದಿಗೆ ಆಗಮಿಸಲಿದೆ. ಈಗಾಗಲೇ ಡ್ರಾಮಾ ಜೂನಿಯರ್ಸ್‌ ಕೊನೆಗೊಂಡಿದ್ದು, ಆ ಸಮಯದಲ್ಲಿ ಇನ್ಮುಂದೆ ಇದೇ ಏಪ್ರಿಲ್‌ 27ರ ಬಳಿಕ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ ಆರಂಭವಾಗಲಿದೆ. ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಝೀ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ ಅವತಾರದಲ್ಲಿ ಪ್ರೇಕ್ಷಕರು ಮುಂದೆ ಬರಲಿದೆ. ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ ಹೆಸರಿನಲ್ಲಿ ವೀಕೆಂಡಲ್ಲಿ ನಗುವಿನ ಟಾನಿಕ್‌ ನೀಡಲು ಸಿದ್ದವಾಗಿರುವ ಈ ಶೋನಲ್ಲಿ ನಗುವಿನ ಮಹಾಯುದ್ದ ಇರುವ ಸೂಚನೆಯಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಜನರ ಮನಸ್ಸನ್ನ ಗೆದ್ದು, ಲಕ್ಷಾಂತರ ವೀಕ್ಷಕಣೆ ಕಂಡಿರುವ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ ಪ್ರೋಮೋ, ಕಾರ್ಯಕ್ರಮದ ಬಗ್ಗೆ ಇರುವ ಕುತೂಹಲವನ್ನ ಇನ್ನಷ್ಟು ಹೆಚ್ಚು ಮಾಡಿದೆ.

ಪ್ರಮುಖ ನಿರೂಪಕರುಗಳ ಲೀಗ್‌

ತಮ್ಮ ಮಾತುಗಳ ಮೂಲಕ ಜನರನ್ನ ಮಂತ್ರ ಮುಗ್ದರನ್ನಾಗಿ ಮಾಡಿದ ಕರ್ನಾಟಕದ ಶ್ರೇಷ್ಟ ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌,ಶ್ವೇತಾ ಚಂಗಪ್ಪ ಮತ್ತು ಕುರಿಪ್ರತಾಪ್‌ ಈ ಶೋನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಹೊಸ ರೂಪದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ನಗಿಸ್ತಾರೆ ನಗಬಾರದು

ಈ ಕಾರ್ಯಕ್ರಮ ಮುಖ್ಯ ಆರ್ಕಷಣೆಗಳಲ್ಲಿ ಒಂದಾಗಿರುವ ನವರಸ ನಾಯಕ ಜಗ್ಗೇಶ್ ಈಗಾಗಲೇ ಜನರ ತಲೆಯಲ್ಲಿ ಹೊಸ ಯೋಚನಯೊಂದನ್ನ ಪ್ರೋಮೋ ಮೂಲಕ ಬಿಟ್ಟಿದ್ದು, ಇಲ್ಲಿ ನಗಿಸ್ತಾರೆ ನಗಬಾರದು ಅಂತ ಹೇಳುವ ಮೂಲಕ ಕಾರ್ಯಕ್ರಮದ ಬಗ್ಗೆ ಜನರಿಗಿರುವ ಕುತೂಹಲವನ್ನ ಮತ್ತಷ್ಟು ಜಾಸ್ತಿ ಮಾಡಿದ್ದಾರೆ.

ಆಕ್ಷನ್‌ ಮೂಲಕ ಖರೀದಿ

ಶೋನ ಹೆಸರೇ ಹೇಳುವಂತೆ ಇಲ್ಲಿ ನಗುವಿನ ಲೀಗ್‌ ಮ್ಯಾಚ್‌ ನಡೆಯಲ್ಲಿದ್ದು ಇಲ್ಲಿ ಟೀ ಟ್ವಂಟಿ ಮ್ಯಾಚುಗಳಲ್ಲಿ ಇರುವಂತೆ ತಂಡಗಳು ,ಮಾಲೀಕರು,ಕ್ಯಾಪ್ಟನ್‌ಗಳು ಇದ್ದು ಕ್ರಿಕೇಟಿಗರನ್ನ ಹರಾಜು ಪ್ರಕ್ರಿಯೆಯಲ್ಲಿ ಕೊಂಡುಕೊಳ್ಳುವಂತೆ ಇಲ್ಲೂ ಕೂಡ ಕರ್ನಾಟಕದ ಮೂವತ್ತೊಂದು ಜಿಲ್ಲೆಗಳಿಂದ ಆಯ್ದು ತಂದ ಕಲಾವಿದರನ್ನ ಮೆಗಾ ಆಕ್ಷನ್‌ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳುವ ಕೆಲಸ ನಡೆಯಲಿದ್ದು, ಇಲ್ಲಿ ಐದು ತಂಡಗಳು ಒಂದು ಟ್ರೋಫಿಗಾಗಿ ಹಣಾಹಣಿ ನಡೆಸಲಿದೆ.

ಪ್ರತಿವಾರ ಒಂದು ಲಕ್ಷ ರೂ ಮೌಲ್ಯದ ನಗದು ಬಹುಮಾನ

ಕಾರ್ಯಕ್ರಮದ ಬಗ್ಗೆ ಸಣ್ಣ ಸುಳಿವೊಂದನ್ನ ಬಿಟ್ಟುಕೊಟ್ಟಿರುವ ಜೀ಼ ಕನ್ನಡ ವಾಹಿನಿಯ ಪ್ರಕಾರ, ಈ ಶೋನಲ್ಲಿ ತಂಡವಾಗಿ ಪ್ರರ್ದಶನ ನೀಡುವ ಕಲಾವಿದರಿಗೆ ವೀಕೆಂಡಿನಲ್ಲಿ ಅವರ ಪ್ರರ್ದಶನ ಆಧಾರದ ಮೇಲೆ ಪ್ರತಿವಾರ ಒಂದು ಲಕ್ಷಮೌಲ್ಯದ ನಗದು ಬಹುಮಾನವನ್ನ ಗೆಲ್ಲುವ ಅವಕಾಶವನ್ನ ಈ ಕಾರ್ಯಕ್ರಮದಲ್ಲಿ ನೀಡಲಾಗಿದ್ದು ಇದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ನ ವಿಶೇಷತೆಗಳಲ್ಲಿ ಒಂದಾಗಿದೆ.

ಹೊಸ ನಿರೂಪಕರ ಆಗಮನ

ಪಂಚ ಪಾಂಡವರಂತೆ ಇರುವ ಐದು ನಿರೂಪಕರು ಇಲ್ಲಿ ಹೊಸ ಜವಾಬ್ದಾರಿಯನ್ನ ಹೊತ್ತಿರುವ ಕಾರಣ ಹೊಸ ನಿರೂಪಕರನ್ನ ಈ ಕಾರ್ಯಕ್ರಮದ ಮೂಲಕ ಜೀ಼ಕನ್ನಡ ವಾಹಿನಿ ತೆರೆಗೆ ತರುವ ಪ್ರಯತ್ನ ಮಾಡಲಿದ್ದು, ಯಾರು ಆ ಹೊಸ ನಿರೂಪಕರು ಎಂಬ ಪ್ರಶ್ನಗೆ ಉತ್ತರವನ್ನ ಇದೇ ಶನಿವಾರ ಮತ್ತು ಭಾನುವಾರ ರಾತ್ರಿ 9.00ಕ್ಕೆ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್ನ ಮೊದಲ ಸಂಚಿಕೆ ನೀಡಲಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ