logo
ಕನ್ನಡ ಸುದ್ದಿ  /  ಮನರಂಜನೆ  /  ಹನುಮಾನ್‌ ಚಿತ್ರದ ಬಳಿಕ ಯೋಧನಾದ ತೇಜ್‌ ಸಜ್ಜಾ; ಜಬರ್ದಸ್ತ್‌ ಆಗಿದೆ ಹೊಸ ಸಿನಿಮಾದ ಶೀರ್ಷಿಕೆ ಟೀಸರ್‌

ಹನುಮಾನ್‌ ಚಿತ್ರದ ಬಳಿಕ ಯೋಧನಾದ ತೇಜ್‌ ಸಜ್ಜಾ; ಜಬರ್ದಸ್ತ್‌ ಆಗಿದೆ ಹೊಸ ಸಿನಿಮಾದ ಶೀರ್ಷಿಕೆ ಟೀಸರ್‌

Apr 18, 2024 03:30 PM IST

ಹನುಮಾನ್‌ ಚಿತ್ರದ ಬಳಿಕ ಯೋಧನಾದ ತೇಜ್‌ ಸಜ್ಜಾ; ಹೊಸ ಸಿನಿಮಾದ ಶೀರ್ಷಿಕೆ ಮತ್ತದರ ವಿವರ ಹೀಗಿದೆ

    • ಹನುಮಾನ್ ಚಿತ್ರದಲ್ಲಿ ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ, ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಕೋಲು ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅಂದರೆ ಮಿರಾಯ್‌ ಹೆಸರಿನ ಹೊಸ ಸಿನಿಮಾ ಮೂಲಕ ತೇಜ ಸಜ್ಜಾ ಆಗಮಿಸುತ್ತಿದ್ದಾರೆ.
ಹನುಮಾನ್‌ ಚಿತ್ರದ ಬಳಿಕ ಯೋಧನಾದ ತೇಜ್‌ ಸಜ್ಜಾ; ಹೊಸ ಸಿನಿಮಾದ ಶೀರ್ಷಿಕೆ ಮತ್ತದರ ವಿವರ ಹೀಗಿದೆ
ಹನುಮಾನ್‌ ಚಿತ್ರದ ಬಳಿಕ ಯೋಧನಾದ ತೇಜ್‌ ಸಜ್ಜಾ; ಹೊಸ ಸಿನಿಮಾದ ಶೀರ್ಷಿಕೆ ಮತ್ತದರ ವಿವರ ಹೀಗಿದೆ

Mirai glimpse: ಹನುಮಾನ್ ಸಿನಿಮಾ ಮೂಲಕ ಸೂಪರ್ ಸಕ್ಸಸ್ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2 , ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಇಂದು (ಏ. 18) ಅನಾವರಣಗೊಂಡಿದೆ.

ಟ್ರೆಂಡಿಂಗ್​ ಸುದ್ದಿ

OTT News: ಹೌಸ್ ಆಫ್ ದಿ ಡ್ರ್ಯಾಗನ್ ಸೀಸನ್‌ 2 ವೆಬ್‌ಸಿರೀಸ್‌ನ ಟ್ರೈಲರ್ ಬಿಡುಗಡೆ; ಜಿಯೊಸಿನಿಮಾ ಮೂಲಕ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ

ಅವ್ರಿಗೊಂದು ದೊಡ್ಡ ನಮಸ್ಕಾರ! ಈಜುಡುಗೆ ಬಗ್ಗೆ ತಮಗಿದ್ದ ಭಯ ಎಷ್ಟು ಎಂಬುದನ್ನು ಮುಚ್ಚುಮರೆಯಿಲ್ಲದೇ ಹೇಳಿದ ಮೀನಾ

10 ವರ್ಷಗಳಲ್ಲಿ ಭಾರತ ಬದಲಾಗಿದೆ ಎಂದಿದ್ದ ರಶ್ಮಿಕಾ ಮಂದಣ್ಣಗೆ ಪರೋಕ್ಷವಾಗಿ ‘ಅಜ್ಞಾನಿ’ ಎಂದು ತಿವಿದ ಚೇತನ್‌ ಅಹಿಂಸಾ

ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರು ಬಂದರೂ ಅದು ಮಹಾಪಾಪ! ಮೋದಿ ವಿರುದ್ಧ ತಿರುಗಿ ಬಿದ್ದ ಕಿಶೋರ್‌

ಹನುಮಾನ್ ಚಿತ್ರದಲ್ಲಿ ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ, ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಕೋಲು ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾಕ್ಕೆ ಮಿರಾಯ್ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

ಮಿರಾಯ್ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಮಿರಾಯ್ ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರ್ತಿರುವ ಮರೈ ಸಿನಿಮಾವನ್ನು ಏಪ್ರಿಲ್ 18 2025ರಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ