logo
ಕನ್ನಡ ಸುದ್ದಿ  /  Entertainment  /  Upendra Starrer Kabzaa Movie Hindi Teaser Released And Other Updates Here

Kabzaa Teaser in Hindi: ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರ ಮತ್ತು ಅರ್ಕೇಶ್ವರರ ಕಥೆಯೇ ‘ಕಬ್ಜ’; ಪಂಡಿತರ ಪಾಲಾದ ಹಿಂದಿ ಅವತರಣಿಕೆ ಹಕ್ಕು..

HT Kannada Desk HT Kannada

Dec 01, 2022 03:25 PM IST

ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರ ಮತ್ತು ಅರ್ಕೇಶ್ವರರ ಕಥೆಯೇ ‘ಕಬ್ಜ’; ಪಂಡಿತರ ಪಾಲಾದ ಹಿಂದಿ ಅವತರಣಿಕೆ ಹಕ್ಕು..

    • ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ, 1960-1984 ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುತ್ತಾನೆ. ಭಾರತೀಯ ಇತಿಹಾಸದಲ್ಲಿ ತನ್ನ ಛಾಪು ಮೂಡಿಸುತ್ತಾನೆ. ಇಂಥದ್ದೊಂದು ಕಥೆ ‘ಕಬ್ಜ’ ಸಿನಿಮಾದ್ದು.
ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರ ಮತ್ತು ಅರ್ಕೇಶ್ವರರ ಕಥೆಯೇ ‘ಕಬ್ಜ’; ಪಂಡಿತರ ಪಾಲಾದ ಹಿಂದಿ ಅವತರಣಿಕೆ ಹಕ್ಕು..
ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರ ಮತ್ತು ಅರ್ಕೇಶ್ವರರ ಕಥೆಯೇ ‘ಕಬ್ಜ’; ಪಂಡಿತರ ಪಾಲಾದ ಹಿಂದಿ ಅವತರಣಿಕೆ ಹಕ್ಕು..

Kabzaa Teaser in Hindi: ಉಪೇಂದ್ರ ಮತ್ತು ‘ಕಿಚ್ಚ’ ಸುದೀಪ್ ಅಭಿನಯದ ಬಹುನಿರೀಕ್ಷಿತಯ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ದ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಆನಂದ್ ಮೋಷನ್ ಪಿಕ್ಚರ್ಸ್ ಪಡೆದುಕೊಂಡಿದೆ. ಮೊದಲ ಹಂತವಾಗಿ ಗುರುವಾರ (ಡಿ. 1) ಹಿಂದಿ ಟೀಸರ್ ಬಿಡುಗಡೆ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

‘ದುಡ್ಡಿಗಾಗಿ, ನನ್ನ ಕುಟುಂಬಕ್ಕಾಗಿ ಒಂದಷ್ಟು ಕೆಟ್ಟ ಸಿನಿಮಾಗಳನ್ನು ಮಾಡಬೇಕಾಯ್ತು’; ಸೋಲಿನ ದಿನಗಳನ್ನು ನೆನೆದ ರವಿಚಂದ್ರನ್‌

Heatwave Movies: ಬಿಸಿಲಿಗೆ ಬೆಂದು ಹೋಗುತ್ತಿದ್ದೀರಾ? ಹೀಟ್‌ವೇವ್‌ನಲ್ಲಿ ನೋಡಬಹುದಾದ 5 ಕ್ಲಾಸಿಕ್‌ ಸೂಪರ್‌ಹಿಟ್‌ ಸಿನಿಮಾಗಳಿವು

ಧರ್ಮರಾಜ್‌ಗೆ ಪೆನ್ಶನ್‌ ಹಣ ಸಿಗ್ತಿಲ್ಲ, ಇತ್ತ ಭಾಗ್ಯಾಗೆ ಹೋಟೆಲ್‌ನಲ್ಲಿ ಸಿಕ್ಕ ಕೆಲಸವೂ ಗ್ಯಾರಂಟಿ ಇಲ್ಲ; ಭಾಗ್ಯಲಕ್ಷ್ಮೀ ಧಾರಾವಾಹಿ

‘ಫಾದರ್‌’ ಪ್ರಕಾಶ್‌ ರಾಜ್‌ಗೆ ಮಗನಾದ ಡಾರ್ಲಿಂಗ್‌ ಕೃಷ್ಣ; ಅಪ್ಪ ಮಗನ ಬಾಂಧವ್ಯದ ಕಥೆಗೆ ಆರ್‌ ಚಂದ್ರು ನಿರ್ಮಾಪಕ

ಶ್ರೀ ಸಿದ್ಧೇಶ್ವರ ಎಂಟರ್ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಹಲವು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.

ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ, 1960-1984 ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುತ್ತಾನೆ. ಭಾರತೀಯ ಇತಿಹಾಸದಲ್ಲಿ ತನ್ನ ಛಾಪು ಮೂಡಿಸುತ್ತಾನೆ. ಇಂಥದ್ದೊಂದು ಕಥೆ ‘ಕಬ್ಜ’ ಸಿನಿಮಾದ್ದು ಎಂದು ನಿರ್ದೇಶಕರು ಸುಳಿವು ನೀಡಿದ್ದಾರೆ.

‘ಕಬ್ಜ’ ಚಿತ್ರದ ವಿತರಣೆಯ ಹಕ್ಕುಗಳನ್ನು ಪಡೆದಿರುವ ಆನಂದ್ ಪಂಡಿತ್ ಸಹ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. "ಪ್ರೇಕ್ಷಕರ ಮನರಂಜಿಸುವುದೇ ನಮ್ಮ ಪ್ರಮುಖ ಉದ್ದೇಶ. ಕಬ್ಜ ಅಂತಹ ಒಂದು ಮನರಂಜನೆಯಾಗಲಿದೆ ಎಂದು ನಮಗೆ ಸಂಪೂರ್ಣ ನಂಬಿಕೆಯಿದೆʼ ಎಂದು ಹೇಳಿಕೊಂಡಿದ್ದಾರೆ.

ನಟ ಉಪೇಂದ್ರ ಸಹ ಪ್ರತಿಕ್ರಿಯೆ ನೀಡಿದ್ದಾರೆ. ‘ಭೂಗತಲೋಕದ ಹೊಸ ಅಧ್ಯಾಯವಾದ ಕಬ್ಜ ಚಿತ್ರದ ಹಿಂದಿ ಅವತರಣಿಕೆಯನ್ನು ಬಾಲಿವುಡ್‌ನ ಹೆಸರಾಂತ ನಿರ್ಮಾಪಕರಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಬಿಡುಗಡೆ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ. ಅವರ ಸಹಕಾರ ಹೀಗೆಯೇ ಮುಂದುವರೆಯಲಿ’ ಎಂದು ಹೇಳಿದ್ದಾರೆ.

‘ದಕ್ಷಿಣ ಭಾರತೀಯ ಸಿನಿಮಾಗಳು ಭಾರತೀಯ ಸಿನಿಮಾ ಎಂದು ಗುರುತಿಸಿಕೊಳ್ಳುತ್ತಿರುವ ಈ ಅದ್ಭುತ ಸಂದರ್ಭದಲ್ಲಿ ಖ್ಯಾತ ವಿತರಕ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ನಮ್ಮ ‘ಕಬ್ಜ’ ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಇದು ಚಿತ್ರತಂಡದ ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ’ ಎಂದಿದ್ದಾರೆ ಸುದೀಪ್.

‘ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಸಂಸ್ಥೆಯು ಕೈ ಜೋಡಿಸಿರುವುದು ನಮ್ಮ ಬದ್ಧತೆ ಮತ್ತು ಪ್ರಯತ್ನಕ್ಕೆ ಸಿಕ್ಕ ಮನ್ನಣೆ’ ಎನ್ನುವ ಆರ್. ಚಂದ್ರು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಿಸಲಿದ್ದಾರೆ. ‘ಕಬ್ಜ’ ಚಿತ್ರದಲ್ಲಿ ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಸೇರಿದಂತೆ ದೊಡ್ಡ ದಂಡೇ ಇದೆ. ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು