logo
ಕನ್ನಡ ಸುದ್ದಿ  /  ಮನರಂಜನೆ  /  Muniratna Movie: ನಿರ್ಮಾಪಕ ಮುನಿರತ್ನ ತೆಕ್ಕೆಗೆ ‘ಉರೀಗೌಡ ನಂಜೇಗೌಡ’ ಶೀರ್ಷಿಕೆ; ಕಲ್ಪಿತ ಕಥೆಯ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ಎಂದ Hdk

Muniratna Movie: ನಿರ್ಮಾಪಕ ಮುನಿರತ್ನ ತೆಕ್ಕೆಗೆ ‘ಉರೀಗೌಡ ನಂಜೇಗೌಡ’ ಶೀರ್ಷಿಕೆ; ಕಲ್ಪಿತ ಕಥೆಯ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ಎಂದ HDK

HT Kannada Desk HT Kannada

Mar 18, 2023 10:41 AM IST

google News

ನಿರ್ಮಾಪಕ ಮುನಿರತ್ನ ತೆಕ್ಕೆಗೆ ‘ಉರೀಗೌಡ ನಂಜೇಗೌಡ’ ಶೀರ್ಷಿಕೆ; ಕಲ್ಪಿತ ಕಥೆಯ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ಎಂದ HDK

    • ‘ಉರೀಗೌಡ ನಂಜೇಗೌಡ’ ಹೆಸರುಗಳು ರಾಜಕಾರಣದಲ್ಲಿ ಸದ್ದು ಮಾಡುತ್ತಿದ್ದಂತೆ, ಈ ಎಲ್ಲ ಬೆಳವಣಿಗೆಯ ನಡುವೆಯೇ ನಿರ್ಮಾಪಕ, ಸಚಿವ ಮುನಿರತ್ನ ಅದೇ ಹೆಸರನ್ನೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿ ಮಾಡಿಸಿದ್ದಾರೆ.
ನಿರ್ಮಾಪಕ ಮುನಿರತ್ನ ತೆಕ್ಕೆಗೆ ‘ಉರೀಗೌಡ ನಂಜೇಗೌಡ’ ಶೀರ್ಷಿಕೆ; ಕಲ್ಪಿತ ಕಥೆಯ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ಎಂದ HDK
ನಿರ್ಮಾಪಕ ಮುನಿರತ್ನ ತೆಕ್ಕೆಗೆ ‘ಉರೀಗೌಡ ನಂಜೇಗೌಡ’ ಶೀರ್ಷಿಕೆ; ಕಲ್ಪಿತ ಕಥೆಯ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ಎಂದ HDK

Urigowda Nanjegowda Movie Title: ರಾಜ್ಯ ರಾಜಕಾರಣದಲ್ಲಿ ಸದ್ಯ ಸುದ್ದಿಯಲ್ಲಿರುವ ಎರಡು ಹೆಸರುಗಳೆಂದರೆ ಅದು ಉರೀಗೌಡ ಮತ್ತು ನಂಜೇಗೌಡ! ಇದಕ್ಕೆ ಕಾರಣ ಇತ್ತೀಚೆಗಷ್ಟೇ ಬಿಜೆಪಿ ನೀಡಿದ್ದ ಹೇಳಿಕೆ. ಟಿಪ್ಪು ಸುಲ್ತಾನ್‌ ಹತ್ಯೆಗೈದ ಒಕ್ಕಲಿಗ ವೀರರೇ ಈ ಉರೀಗೌಡ ಮತ್ತು ನಂಜೇಗೌಡ ಎಂದಿತ್ತು. ಬಿಜೆಪಿಯ ಈ ಹೇಳಿಕೆಗೆ ವಿಪಕ್ಷ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತೀವ್ರ ವಾಗ್ದಾಳಿ ನಡೆಸಿದ್ದು, ಒಕ್ಕಲಿಗ ಸಮುದಾಯಕ್ಕೆ ಇದು ಕಳಂಕ ಎಂದು ಆರೋಪಿಸಿದೆ.

ಹೀಗೆ ಈ ‘ಉರೀಗೌಡ ಮತ್ತು ನಂಜೇಗೌಡ’ ಹೆಸರುಗಳು ರಾಜಕಾರಣದಲ್ಲಿ ಸದ್ದು ಮಾಡುತ್ತಿದ್ದಂತೆ, ಈ ಎಲ್ಲ ಬೆಳವಣಿಗೆಯ ನಡುವೆಯೇ ನಿರ್ಮಾಪಕ, ಸಚಿವ ಮುನಿರತ್ನ ‘ಉರೀಗೌಡ ಮತ್ತು ನಂಜೇಗೌಡ’ ಹೆಸರನ್ನೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿ ಮಾಡಿಸಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಟಕ್ಕರ್‌ ಕೊಟ್ಟಿದ್ದಾರೆ.

ಚಂದನವನದಲ್ಲಿ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಮುನಿರತ್ನ ಒಡೆತನದ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರೀಗೌಡ ಮತ್ತು ನಂಜೇಗೌಡ’ ಚಿತ್ರವನ್ನು ತೆರೆಗೆ ತರಲು ಮುಂದಡಿ ಇಟ್ಟಿದ್ದಾರೆ. ಅದರ ಮೊದಲಾರ್ಥವಾಗಿ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಾಯಿಸಿದ್ದಾರೆ. ಮುನಿರತ್ನ ಅವರ ಈ ನಡೆ ರಾಜ್ಯ ರಾಜಕಾರಣದಲ್ಲಿಯೂ ಟೀಕೆಗೆ ಗುರಿಯಾಗಿದೆ. ಜೆಡಿಎಸ್‌ನ ಎಚ್‌.ಡಿ ಕುಮಾರಸ್ವಾಮಿ ಬಿಜೆಪಿಯ ಈ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಟ್ವಿಟರ್‌ನಲ್ಲಿ ಕುಮಾರಸ್ವಾಮಿ ಸರಣಿ ಟ್ವೀಟ್‌ ಗುಟುರು...

ಗುರುವಾರ ನಿರ್ಮಾಪಕ ಮತ್ತು ಸಚಿವ ಮುನಿರತ್ನ ‘ಉರೀಗೌಡ ಮತ್ತು ನಂಜೇಗೌಡ’ ಶೀರ್ಷಿಕೆಯನ್ನು ನೋಂದಾಯಿಸಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕುಮಾರಸ್ವಾಮಿ, ಸರಣಿ ಟ್ವಿಟ್‌ ಮಾಡಿದ್ದಾರೆ. "ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ" ಎಂದಿದ್ದಾರೆ.

ಒಕ್ಕಲಿಗ ಸಮುದಾಯಕ್ಕೆ ಬಿಜೆಪಿಯಿಂದ ಕೆಟ್ಟಹೆಸರು

ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ. ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ರಾಜ್ಯ ಬಿಜೆಪಿ ಮಾಡುತ್ತಿದೆ. ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ. ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ.

ಮುನಿರತ್ನ ಅವರಿಂದ ಒಕ್ಕಲಿಗರ ಗೌರವ ಮೂರಾಬಟ್ಟೆ..

ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಶ್ರೀ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ' ಉರಿಗೌಡ ನಂಜೇಗೌಡ ' ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ. ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ.

ಒಕ್ಕಲು ಕುಲದ ಖಳರನ್ನು ಹೀರೋ ಮಾಡುತ್ತಿದ್ದಾರೆ..

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ